56 Girls Kidnap Case: ಅಂಬೇಡ್ಕರ್ ನಗರದಲ್ಲಿ ಒಂದೇ ತಿಂಗಳಲ್ಲಿ 56 ಯುವತಿಯರ ಅಪಹರಣ ಪ್ರಕರಣಗಳು ದಾಖಲಾಗಿವೆ. ಪೊಲೀಸ್ ಇಲಾಖೆ ಏನು ಮಾಡುತ್ತಿದೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ಲಕ್ನೋ: ಉತ್ತರ ಪ್ರದೇಶ ರಾಜ್ಯದ ಅಂಬೇಡ್ಕರ್ ನಗರದ (Ambedkar Ngara, Uttar Pradesh) ವಿವಿಧ ಪೊಲೀಸ್ ಠಾಣೆಗಳಲ್ಲಿ 56 ಹುಡುಗಿಯರ ಅಪಹರಣ ಪ್ರಕರಣಗಳು ದಾಖಲಾಗಿವೆ. ಒಂದು ತಿಂಗಳ ಅವಧಿಯಲ್ಲಿಯೇ ಇಷ್ಟೊಂದು ಪ್ರಕರಣಗಳು ದಾಖಲಾಗಿರೋದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. 56ರ ಪೈಕಿ 5 ಪ್ರಕರಣಗಳು ಇತರೆ ಸಮುದಾಯಕ್ಕೆ ಸೇರಿವೆ. ಸಾಲು ಸಾಲು ಅಪಹರಣ ಪ್ರಕರಣಗಳು ದಾಖಲಾಗಿರೋದು ಉತ್ತರ ಪ್ರದೇಶ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ.

ಬಹುತೇಕ ಪ್ರಕರಣಗಳು ಪ್ರೇಮ ವಿಷಯಕ್ಕೆ ಸಂಬಂಧಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಒಟ್ಟು 49 ಯುವತಿಯರನ್ನು ರಕ್ಷಣೆ ಮಾಡಲಾಗಿದ್ದು, ಆರೋಪಿಗಳನ್ನು ಬಂಧಿಸಿ ಕಾನೂನುಕ್ರಮ ತೆಗೆದುಕೊಳ್ಳಲಾಗಿದೆ. ರಕ್ಷಣೆ ಮಾಡಿರುವ 49ರಲ್ಲಿ 40 ಯುವತಿಯರು ಅಪ್ರಾಪ್ತೆರಾಗಿದ್ದಾರೆ ಎಂದು ಅಚ್ಚರಿ ವಿಷಯವನ್ನು ಪೊಲೀಸರು ರಿವೀಲ್ ಮಾಡಿದ್ದಾರೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ 56 ಪ್ರಕರಣ ದಾಖಲು

ಒಂದು ತಿಂಗಳ ಅವಧಿ ನಡುವೆ ಅಂಬೇಡ್ಕರ್ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 56 ಪ್ರಕರಣಗಳು ದಾಖಲಾಗಿರೋದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಕೆಲವರು ಸಾರ್ವಜನಿಕ ಅವಮಾನದ ಭಯದಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ ಎಂದು ವರದಿಯಾಗಿದೆ. ಅಪಹರಣ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಸರ್ಕಾರವನ್ನು ಪ್ರಶ್ನೆ ಮಾಡುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೊಸ ಚರ್ಚೆಗಳು ಶುರುವಾಗಿದ್ದು, ಕೆಲ ನೆಟ್ಟಿಗರು ಈ ಪ್ರಕರಣಗಳ ಹಿಂದೆ ಲವ್ ಜಿಹಾದ್ ಇರೋದರ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಈ ಪ್ರಕರಣಗಳನ್ನು ಧಾರ್ಮಿಕ ಮತಾಂತರಕ್ಕೆ ಲಿಂಕ್ ಮಾಡುವ ಮೂಲಕ ಪೋಸ್ಟ್ ಮಾಡಲಾಗುತ್ತಿದೆ. ಪೊಲೀಸ್ ಇಲಾಖೆ ಏನು ಮಾಡುತ್ತಿದೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಪೊಲೀಸರು ಸಹ ಪ್ರಕರಣಗಳು ದಾಖಲಾಗುತ್ತಿದ್ದಂತೆ ಕೊಂಚವೂ ತಡಮಾಡದೇ ಕಾರ್ಯಪ್ರವೃತ್ತರಾಗಿ ಈ ಪ್ರಕರಣಗಳ ತನಿಖೆಯನ್ನು ಪ್ರಾರಂಭಿಸುತ್ತಿದ್ದಾರೆ.

ಇದನ್ನೂ ಓದಿ: ಜೈನ ಪುರೋಹಿತನ ವೇಷದಲ್ಲಿ ಬಂದು ₹1.5 ಕೋಟಿ ರತ್ನಖಚಿತ ಚಿನ್ನದ ಚೊಂಬು, ಕಳಶ ಕದ್ದೊಯ್ದ ಕಳ್ಳ!

ಅಗಸ್ಟ್ ತಿಂಗಳಲ್ಲಿಯೇ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 56 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ ಹೆಚ್ಚಿನ ಪ್ರಕರಣಗಳು ಪ್ರೇಮ ಪ್ರಕರಣಗಳಿಗೆ ಸಂಬಂಧಿಸಿವೆ. ಈ ಪೈಕಿ 49 ಹುಡುಗಿಯರನ್ನು ರಕ್ಷಣೆ ಮಾಡಲಾಗಿದೆ. ತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 49 ಹುಡುಗಿಯರಲ್ಲಿ 40 ಮಂದಿ ಅಪ್ರಾಪ್ತ ವಯಸ್ಕರಾಗಿದ್ದಾರೆ. ಒಂದು ತಿಂಗಳಲ್ಲಿ, ವಿವಿಧ ಸಮುದಾಯಗಳಿಗೆ ಸಂಬಂಧಿಸಿದ ಕೇವಲ 5 ಪ್ರಕರಣಗಳು ದಾಖಲಾಗಿವೆ. ಅಪಹರಣಕ್ಕೊಳಗಾದ ಹುಡುಗಿ ಹಿಂದೂ ಮತ್ತು ಆರೋಪಿ ಮುಸ್ಲಿಂ ಆಗಿರುವ ಮೂರು ಪ್ರಕರಣಗಳಿದ್ದು, ಈ ಮೂವರನ್ನೂ ರಕ್ಷಿಸಲಾಗಿದೆ ಎಂದು ಅಂಬೇಡ್ಕರ್ ನಗರ ಎಸ್‌ಪಿ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಕಾನೂನು ಕ್ರಮ

ಎರಡು ಪ್ರಕರಣಗಳಲ್ಲಿ ಆರೋಪಿಗಳು ಹಿಂದೂಗಳು ಮತ್ತು ಹುಡುಗಿಯರು ಮುಸ್ಲಿಮರಾಗಿದ್ದರೆ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆದರರೆ ಈ ಪ್ರಕರಣದಲ್ಲಿ ಯಾವುದೇ ಸಂಘಟಿತ ಗ್ಯಾಂಗ್ ಭಾಗಿಯಾಗಿರುವ ಯಾವುದೇ ಪ್ರಕರಣ ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಹಿಂದೂ ನಾಯಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲೆಯಲ್ಲಿ ಮತಾಂತರದ ಆಟ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ತಿನ ಅವಧ್ ಪ್ರಾಂತ್ಯದ ಪ್ರಾಂತೀಯ ಮುಖ್ಯಸ್ಥ ಅರವಿಂದ್ ಪಾಂಡೆ, ಜಿಲ್ಲೆಯಲ್ಲಿ ಲವ್ ಜಿಹಾದ್ ವೇಗವಾಗಿ ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮದರಸಾದಲ್ಲಿ ಲೈಂಗಿಕ ದೌರ್ಜನ್ಯ, ಬಾಲಕನ ಹ*ತ್ಯೆ; ಐವರು ಅಪ್ರಾಪ್ತರ ಬಂಧನ