ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಟ್ಟಡ ಅಪಾಯದ ಹಂತಕ್ಕೆ ತಲುಪಿತ್ತು. ಸದ್ಯದ ಮಾಹಿತಿ ಪ್ರಕಾರ ಆರು ಜನರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ಗಾಂಧಿನಗರ: ಗುಜರಾತಿನ ಸೂರತ್ ನಗರದ ಸಚಿನ್ ಪಾಲಿ ಗ್ರಾಮದಲ್ಲಿ ಬಹುಮಹಡಿ ಕಟ್ಟಡ ಕುಸಿತವಾಗಿದೆ. ಕಟ್ಟಡದ ಅವಶೇಷಗಳಡಿಯಲ್ಲಿ ಜನರು ಸಿಲುಕಿರುವ ಸಾಧ್ಯತೆಗಳಿದ್ದು, ಅಗ್ನಿಶಾಮಕದಳ ಹಾಗೂ ಪೊಲೀಸ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಇದು ಆರು ಮಹಡಿಯ ಕಟ್ಟಡವಾಗಿದ್ದು, ಅಧಿಕಾರಿಗಳ ಪ್ರಕಾರ ಬಿಲ್ಡಿಂಗ್ ಕೆಟ್ಟ ಸ್ಥಿತಿಯಲ್ಲಿತ್ತು. ಕಳೆದ 15 ದಿನಗಳಿಂದ ಸೂರತ್ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಟ್ಟಡ ಅಪಾಯದ ಹಂತಕ್ಕೆ ತಲುಪಿತ್ತು. ಸದ್ಯದ ಮಾಹಿತಿ ಪ್ರಕಾರ ಆರು ಜನರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ಆರು ಮಹಡಿಯ ಕಟ್ಟಡ ಕುಸಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಟ್ಟಡದ ನಾಲ್ಕರಿಂದ ಐದು ಫ್ಲಾಟ್ ವಶಕ್ಕೆ ಪಡೆದುಕೊಳ್ಳಲಾಗಿದೆ, ಸದ್ಯ ಓರ್ವ ಮಹಿಳೆರನ್ನು ರಕ್ಷಣೆ ಮಾಡಲಾಗಿದೆ. ಅವಶೇಷಗಳಡಿ ಸುಮಾರು 3-4 ಜನರು ಸಿಲುಕಿರುವ ಸಾಧ್ಯತೆಗಳಿವೆ. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಸಹ ಘಟನಾ ಸ್ಥಳಕ್ಕೆ ತೆರಳಲಿದ್ದು, ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಸದ್ಯ ಸ್ಥಳದಲ್ಲಿ ಹಿರಿಯ ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಸೂರತ್ ಜಿಲ್ಲಾಧಿಕಾರಿ ಸೌರೌಭ್ ಪಾರಧಿ ಪಿಟಿಐಗೆ ಮಾಹಿತಿ ನೀಡಿದ್ದಾರೆ.
ಮುಸ್ಲಿಮರು ತಮ್ಮ ಅಂಗಡಿಗಳಿಗೆ ಹಿಂದೂ ದೇವತೆಗಳ ಹೆಸರಿಡಬೇಡಿ ಎಂದ ಬಿಜೆಪಿ ಸಚಿವ
