ಕಾಶ್ಮೀರದಲ್ಲಿ ಸೇನೆ ಹಾಗೂ ಉಗ್ರರ ಮಧ್ಯೆ ಗುಂಡಿನ ಚಕಮಕಿ6 ಜೆಇಎಂ ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ

ಜಮ್ಮು ಕಾಶ್ಮೀರ: ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ 6 ಜೆಇಎಂ ಉಗ್ರರು ಹತರಾಗಿದ್ದಾರೆ. ದಕ್ಷಿಣ ಕಾಶ್ಮೀರದ (south Kashmir) ಅನಂತ್‌ನಾಗ್‌ ಜಿಲ್ಲೆಯಲ್ಲಿ ಹಾಗೂ ಕುಲ್ಗಮ್‌ ಜಿಲ್ಲೆಯಲ್ಲಿ ಉಗ್ರರು ಹಾಗೂ ಸೇನಾಪಡೆ ನಡುವೆ ಪ್ರತ್ಯೇಕ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್(Anantnag) ಮತ್ತು ಕುಲ್ಗಾಮ್(Kulgam) ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಆರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯ 6 ಭಯೋತ್ಪಾದಕರು ಕೊಲ್ಲಲ್ಪಟ್ಟರು. ಹತರಾದ ಭಯೋತ್ಪಾದಕರಲ್ಲಿ 4 ಮಂದಿಯನ್ನು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಪಾಕಿಸ್ತಾನಿಗಳು ಹಾಗೂ ಇಬ್ಬರು ಸ್ಥಳೀಯ ಭಯೋತ್ಪಾದಕರು ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಭಯೋತ್ಪಾದಕರ ಗುರುತನ್ನು ಇನ್ನಷ್ಟೇ ಕಂಡುಹಿಡಿಯಬೇಕಿದೆ. ಇದು ನಮಗೆ ಸಿಕ್ಕಿದ ದೊಡ್ಡ ಯಶಸ್ಸು ಎಂದು ಕಾಶ್ಮೀರದ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿಕೆ ಉಲ್ಲೇಖಿಸಿ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

Scroll to load tweet…

ಅಧಿಕಾರಿಗಳ ಪ್ರಕಾರ, ಒಂದು ಗುಂಡಿನ ಚಕಮಕಿ ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತು ಇನ್ನೊಂದು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದಿದೆ. 
ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶ (Mirhama area)ದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನೀಡಿದ ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಮರು ವೇಷದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಅಡಗಿಕೊಂಡಿದ್ದ ಉಗ್ರರು ಮಾರುವೇಷದಲ್ಲಿದ್ದ ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಕೂಡ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮತ್ತೊಂದು ಗುಂಡಿನ ಚಕಮಕಿಯು ನೆರೆಯ ಅನಂತನಾಗ್‌ ಜಿಲ್ಲೆಯ ಡೂರು ಸಮೀಪದ ನೌಗಾಮ್ ಶಹಾಬಾದ್ ಪ್ರದೇಶದಲ್ಲಿ ನಡೆದಿದೆ. ಈ ದುರಂತದಲ್ಲಿ ಓರ್ವ ಪೊಲೀಸ್ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Kashmir tribute to Rawat: ರಾವತ್ ನಿಧನಕ್ಕೆ ಕಾಶ್ಮೀರಿ ಜನರ ಬೆಳಕಿನ ನಮನ

ಕೆಲ ದಿನಗಳ ಹಿಂದೆ ಜಮ್ಮು ಕಾಶ್ಮೀರದಲ್ಲಿ ಪೊಲೀಸ್‌ ಬಸ್‌(Police bus) ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಉಗ್ರರ ದಾಳಿಯ ಹಿಂದೆ ಜೈಷ್‌ ಎ ಮೊಹಮ್ಮದ್‌ ಸಂಘಟನೆ(Jaish A Mohammed Organization)ಯ ಕೈವಾಡವಿದೆ ಎಂದು ಪೊಲೀಸರು ತಿಳಿಸಿದ್ದರು. ನಿತ್ಯದ ಕರ್ತವ್ಯ ಮುಗಿಸಿ ಬರುತ್ತಿದ್ದ 25 ಪೊಲೀಸ್‌ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್‌ ಮೇಲೆ ಜೈಷ್‌-ಎ-ಮೊಹಮ್ಮದ್‌ ಸಂಘಟನೆಯ ಮೂವರು ಉಗ್ರರು ಗುಂಡಿನ ಸುರಿಮಳೆಗೆರೆದಿದ್ದರು. ಈ ದಾಳಿಯಲ್ಲಿ ಒಟ್ಟು ಮೂರು ಪೊಲೀಸರು ಬಲಿಯಾಗಿದ್ದರು. ಪೊಲೀಸ್‌ ಸಿಬ್ಬಂದಿಯ ನಿತ್ಯದ ಕೆಲಸದ ಮೇಲೆ ನಿಗಾ ವಹಿಸಿದ್ದ ಉಗ್ರರು, ಸಂಚು ರೂಪಿಸಿ ಈ ದಾಳಿ ನಡೆಸಿದ್ದರು. ಈ ಮೂವರು ಉಗ್ರರ ಪೈಕಿ ಓರ್ವ ಸ್ಥಳೀಯನಾಗಿದ್ದು, ಇನ್ನಿಬ್ಬರು ವಿದೇಶಿಗರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್‌(IGP Vijaya kumar) ತಿಳಿಸಿದ್ದರು. 

Terror Attack On Police Bus: ದಾಳಿ ಹಿಂದೆ ಜೈಷ್‌ ಎ ಮೊಹಮ್ಮದ್‌ ಸಂಘಟನೆ ಕೈವಾಡ