ರೈತ ಮಸೂದೆ ವಿರುದ್ಧ ಪ್ರತಿಭಟನೆ, ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಆಸ್ಪತ್ರೆಯಲ್ಲಿ ಸಾವು!

ಕೇಂದ್ರ ಸರ್ಕಾರದ ಕೃಷಿ ಮಸೂದೆಗೆ ಪರ ವಿರೋಧಗಳು ಕೇಳಿ ಬರುತ್ತಿದೆ. ದೇಶದ ಕೆಲವೆಡೆ ರೈತ ವಿರೋಧಿ ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಪ್ರತಿಭಟನೆಗಳು ನಡೆಯುತ್ತಿದ. ಹೀಗೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ವಿಷ ಸೇವೆಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿದ್ದಾನೆ.

70 year old farmer died after consuming poisonous during protest against new farm Bills in Punjab ckm

ಪಂಜಾಬ್(ಸೆ.19): ಕೇಂದ್ರ ಸರ್ಕಾರದ ಕೃಷಿ ಮಸೂದೆಗೆ ಭಾರಿ ಸಂಚಲನ ಸೃಷ್ಟಿಸಿದೆ.  ಮಸೂದೆ ವಿರೋಧಿಸಿ ಹರ್ಸಿಮ್ರತ್ ಕೌರ್ ಬಾದಲ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತ ರೈತರು ದೇಶದ ಹಲೆವಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪಂಜಾಬ್‌ನ ಮುಕ್ತಸರ್ ಜಿಲ್ಲೆಯಲ್ಲಿ ಪ್ರತಿಭಟೆನೆ ಕಾವು ಹೆಚ್ಚಾಗಿದೆ. ಪ್ರತಿಭಟನೆ ವೇಳೆ ವಿಷ ಸೇವಿಸಿದ್ದ ರೈತನೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

'ರೈತರೇ ಬೆಲೆ ನಿಗದಿಪಡಿಸುವ ವ್ಯವಸ್ಥೆ ಬರಲಿ

ಮುಕ್ತಸರ್‌ ಜಿಲ್ಲೆಯ ಬಾದಲ್ ಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಭಾರತೀಯ ಕಿಸಾನ್ ಒಕ್ಕೂಟ ಈ ಪ್ರತಿಭಟನೆ ಆಯೋಜಿಸಿದೆ. ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಪ್ರೀತಂ ಸಿಂಗ್ ಅನ್ನೋ ರೈತ ನಿನ್ನೆ(ಸೆ.18) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ರೈತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. 

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಇಂದು(ಸೆ.19) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೆಪ್ಟೆಂಬರ್ 15 ರಿಂದ ಪ್ರತಿಭಟನೆ ನಡೆಯುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಸೆ.15 ರಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ದಿಢೀರ್ ಆತ್ಮಹತ್ಯೆಗೆ ಕಾರಣ ಏನು ಅನ್ನೋದು ತಿಳಿದುಬಂದಿಲ್ಲ ಎಂದು ಮುಕ್ತಸರ್ ಪೊಲೀಸರು ಹೇಳಿದ್ದಾರೆ. 

ರೈತ ಪ್ರೀತಂ ಸಿಂಗ್ ಅತಿಯಾದ ಸಾಲ ಮಾಡಿಕೊಂಡಿದ್ದರು. ಆದರೆ ಬೆಳೆ ನಾಶ, ಬೆಳೆದ ಬೆಳೆಗೆ ಕೊರೋನಾ ಕಾರಣ ಮಾರುಕಟ್ಟೆಯೂ ಸಿಗಲಿಲ್ಲ. ಹೀಗಾಗಿ ಸಾಲ ಹಿಂತುರಿಗಿಸಲು ಕಷ್ಟವಾಗಿತ್ತು ಎಂದು ರೈತನ ಕುಟುಂಬ ಸದಸ್ಯರು ಹೇಳಿದ್ದಾರೆ. 

ರೈತರು ಆದಾಯ ತೆರಿಗೆ ವ್ಯಾಪ್ತಿಗೆ? ಎಪಿಎಂಸಿಗಳು ಬಂದ್? ಕೇಂದ್ರಕ್ಕೆ ಪ್ರಜ್ವಲ್ ಖಡಕ್ ಸವಾಲು

"

 

Latest Videos
Follow Us:
Download App:
  • android
  • ios