ನವದೆಹಲಿ[ಮಾ.19]: ಭಾರತದಲ್ಲಿ ಕೊರೋನಾ ವೈರಸ್‌ಗೆ ನಾಲ್ಕನೇ ಬಲಿಯಾಗಿದೆ. ಜರ್ಮನಿಯಿಂದ ಇಟಲಿ ಮೂಲಕ ಪಂಜಾಬ್‌ಗೆ ಬಂದಿದ್ದ 72 ವರ್ಷದ ವೃದ್ಧ ಗುರುವಾರದಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಈ ವೃದ್ಧನನ್ನು ಬುಧವಾರದಂದು ಬಂಗಾ ಕಮ್ಯೂನಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತನಿಗೆ ಕೊರೋನಾ ಟೆಸ್ಟ್ ಮಾಡಿದ್ದು, ಪಾಸಿಟಿವ್ ಎಂದು ವರದಿ ಬಂದಿತ್ತು.

ಕೊರೋನಾ ವೈರಸ್ ಸಂಬಂಧಿತ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸದ್ಯ ಭಾರತದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 4ಕ್ಕೇರಿದ್ದು, ಸೋಂಕಿತರ ಸಂಖ್ಯೆ 186ಕ್ಕೆ ಏರಿಕೆಯಾಗಿದೆ. ಒಂದೇ ದಿನ ದೇಶದಲ್ಲಿ ಸೋಂಕಿತರ ಸಂಖ್ಯೆ 30ಕ್ಕೇಯಾಗಿದೆ.