ಕೆಂಪುಕೋಟೆಯಲ್ಲಿ ಮೋದಿ ಭಾಷಣ: ಖಾಲಿ ಸೀಟು 3 ನೀಡಿದ ಸಂದೇಶವೇನು?
ದೇಶ 77ನೇ ಸ್ವಾತಂತ್ರೋತ್ಸವದ ಸಂಭ್ರಮದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪು ಕೋಟೆಯಲ್ಲಿ ಧ್ವಜರೋಹಣ ನೆರವೇರಿಸಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಆದರೆ ಈ ವೈಭವಯುತ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಗೈರಾಗಿ ಗಮನ ಸೆಳೆದಿದ್ದಾರೆ.

ನವದೆಹಲಿ: ದೇಶ 77ನೇ ಸ್ವಾತಂತ್ರೋತ್ಸವದ ಸಂಭ್ರಮದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪು ಕೋಟೆಯಲ್ಲಿ ಧ್ವಜರೋಹಣ ನೆರವೇರಿಸಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಆದರೆ ಈ ವೈಭವಯುತ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಗೈರಾಗಿ ಗಮನ ಸೆಳೆದಿದ್ದಾರೆ. ಜೊತೆಗೆ ಅವರು ಹಿಂದಿನ ಪ್ರಧಾನಿ ದೇಶಕ್ಕೆ ನೀಡಿದ ಕೊಡುಗೆಗಳನ್ನು ಉಲ್ಲೇಖಿಸಿ ಧ್ವನಿ ಮುದ್ರಿತ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ.
ಐತಿಹಾಸಿಕ ಕೆಂಪುಕೋಟೆ ಬಳಿ ಸ್ವಾತಂತ್ರ ದಿನಾಚರಣೆ ಸಂಭ್ರಮಕ್ಕೆ ಬಂದ ಅತಿಥಿಗಳಿಗೆ ಮೀಸಲಿರಿಸಿದ ಚೇರುಗಳಲ್ಲಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೀಸಲಿರಿಸಿದ್ದ ಸೀಟು ಖಾಲಿ ಹೊಡೆಯುತ್ತಿತ್ತು. ಆದರೆ ಅಸೌಖ್ಯದ ಕಾರಣ ಅವರು ಈ ಸಮಾರಂಭಕ್ಕೆ ಆಗಮಿಸಿಲ್ಲ ಎಂದು ಕಾಂಗ್ರೆಸ್ ಅವರ ಗೈರಿಗೆ ಕಾರಣ ನೀಡಿದೆ.
ಸಮಾರಂಭಕ್ಕೆ ಗೈರಾಗಿದ್ದರೂ ಮಲ್ಲಿಕಾರ್ಝುನ್ ಖರ್ಗೆ ಅವರು ಧ್ವನಿಮುದ್ರಿತ ವೀಡಿಯೋ ಸಂದೇಶ ಕಳುಹಿಸಿದ್ದು, ಅದರಲ್ಲಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ನೇತಾಜಿ ಸುಭಾಷ್ ಚಂದ್ರ ಬೋಸ್ (Subhash Chandra Bose), ಮೌಲಾನಾ ಆಜಾದ್ (Maulana Azad), ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು (Sarojini Naidu) ಮತ್ತು ಬಿ.ಆರ್. ಅಂಬೇಡ್ಕರ್ ಅವರಂತಹ ಸ್ವಾತಂತ್ರ್ಯ ಸೇನಾನಿಗಳಿಗೆ ಗೌರವ ನಮನ ಸಲ್ಲಿಸಿದರು.
ಮುಂದಿನ ವರ್ಷಇದೇ ಸ್ಥಳ, ಇದೇ ಸಮಯ; ಕೆಂಪುಕೋಟೆಯಲ್ಲಿ ಮತ್ತೆ ಮೋದಿ ಸರ್ಕಾರದ ಭರವಸೆ!
ಇದೇ ವೇಳೆ ಅವರು ಭಾರತದ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು (Jawaharlal Nehru), ಇಂದಿರಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ, ಪಿವಿ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ನೆನೆದರು ಜೊತೆಗೆ ಬಿಜೆಪಿ ಐಕಾನ್ ಅಟಲ್ ಬಿಹಾರಿ ವಾಜಪೇಯಿ ಅವರನ್ನೂ ಸ್ಮರಿಸಿದರು. ದೇಶದ ಪ್ರತಿಯೊಬ್ಬ ಪ್ರಧಾನ ಮಂತ್ರಿಯೂ (Prime Minister) ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಿದ್ದಾರೆ. ಆದರೆ ಇಂದು ಕೆಲವರು ಭಾರತವು ಕಳೆದ ಕೆಲವು ವರ್ಷಗಳಲ್ಲಿ ಮಾತ್ರ ಪ್ರಗತಿಯನ್ನು ಕಂಡಿದೆ ಎಂದು ಹೇಳಲು ಪ್ರಯತ್ನಿಸುತ್ತಿದ್ದಾರೆ ಪ್ರಧಾನಿ ಮೋದಿ ಅವರನ್ನು ಪರೋಕ್ಷವಾಗಿ ಟೀಕಿಸಿದರು.
ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ದೇಶದ ಎಲ್ಲಾ ಪ್ರಧಾನಿಗಳು ರಾಷ್ಟ್ರದ ಬಗ್ಗೆ ಚಿಂತಿಸಿದ್ದರು ಮತ್ತು ಅಭಿವೃದ್ಧಿಗಾಗಿ ಹಲವಾರು ಹೆಜ್ಜೆಗಳನ್ನು ಇಟ್ಟರು. ಆದರೆ ಇಂದು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸ್ವಾಯತ್ತ ಸಂಸ್ಥೆಗಳು ಗಂಭೀರ ಅಪಾಯದಲ್ಲಿದೆ ಎಂದು ನಾನು ನೋವಿನಿಂದ ಹೇಳುತ್ತೇನೆ. ವಿರೋಧ ಪಕ್ಷಗಳ ಧ್ವನಿ ಉಡುಗಿಸಲು ಹೊಸ ಸಾಧನಗಳನ್ನು ಬಳಸಲಾಗುತ್ತಿದೆ. ಕೇವಲ ಸಿಬಿಐ (CBI), ಜಾರಿ ನಿರ್ದೇಶನಾಲಯ (Enforcement Directorate) , ಆದಾಯ ತೆರಿಗೆ ದಾಳಿಗಳು (Income Tax raids) ಮಾತ್ರವಲ್ಲ, ಚುನಾವಣಾ ಆಯೋಗವನ್ನೂ ದುರ್ಬಲಗೊಳಿಸಲಾಗುತ್ತಿದೆ. ಮೈಕ್‌ಗಳನ್ನು ಮ್ಯೂಟ್ ಮಾಡಲಾಗುತ್ತಿದೆ ಭಾಷಣವನ್ನು ಹತ್ತಿಕ್ಕಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.