ಈಶಾನ್ಯ ದೆಹಲಿಯ ಮುಸ್ತಫಾಬಾದ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದೆಹಲಿ ಸಿಎಂ ತನಿಖೆಗೆ ಆದೇಶಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕಟ್ಟಡ ಕುಸಿದು ದುರಂತವವೊಂದು ನಡೆದಿದ್ದು ಒಟ್ಟು 8 ಜನ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈಶಾನ್ಯ ದೆಹಲಿಯ ಮುಸ್ತಫಾಬಾದ್‌ನಲ್ಲಿ ಈ ಅವಘಡ ಸಂಭವಿಸಿದೆ. ನಾಲ್ಕಂತಸ್ಥಿನ ಕಟ್ಟಡವು ಇದಕ್ಕಿದ್ದಂತೆ ತರಗೆಲೆಯಂತೆ ಕುಸಿದು ಬಿದ್ದಿದ್ದು ಪರಿಣಾಮ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಮುಸ್ತಫಾಬಾದ್‌ನ ಗಾಲಿ ನಂಬರ್ 1 ಪ್ರದೇಶದಲ್ಲಿ ಈ ಘಟನೆ ಮುಂಜಾನೆ 3 ಗಂಟೆಗೆ ಸಂಭವಿಸಿದ್ದು, ಮೃತರ ಸಂಖ್ಯೆ 8ಕ್ಕೇರಿದೆ. ಇನ್ನೂ ಈ ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಇತರ ಸಂಸ್ಥೆಗಳು ಉಳಿದವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ.

ದುರಂತದಲ್ಲಿ ಮೃತರಾದವನ್ನು ಚಾಂದನಿ (23), ಡ್ಯಾನಿಶ್ (23), ನವೇದ್ (17), ರೇಷ್ಮಾ (38) ಹಾಗೂ ಇತರ ನಾಲ್ವರು ಎಂದು ಗುರುತಿಸಲಾಗಿದೆ. ಶಾಹಿದ್ (45), ರೆಹಾನಾ (38), ಅಹ್ಮದ್ (45), ತನು (15), ಮತ್ತು ಜೀನತ್ (58) ಎಂಬ ಐದು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ ಗಾಯಗೊಂಡ ಚಾಂದ್ (25), ಶಾನ್ (4), ಸನ್ಯಾ (2), ನೇಹಾ (19), ಅಲ್ಫೆಜ್ (20), ಮತ್ತು ಅಲಿಯಾ (17) ಎಂಬ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಕಳಚುತ್ತಾ ಬೆಂಗಳೂರಿನ ನಂ.1 ಕಿರೀಟ, ಹೈದರಾಬಾದ್‌ನಲ್ಲಿ 450 ಎಕರೆ ಹೈಟೆಕ್ ಐಟಿ ಹಬ್

ಈ ಕಟ್ಟಡ ಕುಸಿತದ ಬಗ್ಗೆ ತನಿಖೆಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಆದೇಶಿಸಿದ್ದಾರೆ, ಇದರಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ), ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್), ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಮತ್ತು ಇತರ ಸಂಸ್ಥೆಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಗಳಲ್ಲಿ ತೊಡಗಿವೆ ಎಂದು ಗುಪ್ತಾ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಅಧಿಕಾರಿಯೊಬ್ಬರು ಈ ಪ್ರದೇಶವು ಜನದಟ್ಟಣೆಯಿಂದ ಕೂಡಿರುವುದರಿಂದ ರಕ್ಷಣಾ ಕಾರ್ಯಾಚರಣೆ ಸವಾಲಾಗುತ್ತಿದೆ ಎಂದು ಹೇಳಿದ್ದಾರೆ. ಸ್ಥಳೀಯರಿಂದ ಬಂದ ಮಾಹಿತಿಯ ಪ್ರಕಾರ, ಸುಮಾರು 12 ಜನರು ಇನ್ನೂ ಸಿಕ್ಕಿಬಿದ್ದಿದ್ದಾರೆ. ನಮ್ಮ ಎನ್‌ಡಿಆರ್‌ಎಫ್ ತಂಡ ಮತ್ತು ಇತರ ಸಂಸ್ಥೆಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಇದು ಜನದಟ್ಟಣೆಯ ಹಾಗೂ ಬಹಳ ಇಕ್ಕಟ್ಟಿನ ಪ್ರದೇಶವಾಗಿದ್ದು, ಭಾರೀ ಯಂತ್ರೋಪಕರಣಗಳ ಸಾಗಿಸಲು ನಾವು ತೊಂದರೆಗಳನ್ನು ಎದುರಿಸುತ್ತಿದ್ದೇವೆ ನಾವು ಕಟ್ಟಡದಡಿ ಸಿಲುಕಿರುವ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಎನ್‌ಡಿಆರ್‌ಎಫ್‌ನ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮೊಹ್ಸೆನ್ ಶಹೇದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮದುವೆಗೆ ಮುನ್ನವೇ ಮರಣ; ಕೆಂಪು ಸೀರೆ ಬದಲು ಬಿಳಿ ಬಟ್ಟೆ ಬಂತು! ಅಯ್ಯೋ ವಿಧಿಯೇ..

ಘಟನೆಯಲ್ಲಿ ಮೃತರಾದವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ದೆಹಲಿ ವಿಧಾನಸಭೆಯ ಉಪಸಭಾಪತಿ ಮೋಹನ್ ಸಿಂಗ್ ಬಿಶ್ತ್ ಹೇಳಿದ್ದಾರೆ. ಮುಸ್ತಫಾಬಾದ್‌ನ ಶಾಸಕ ಬಿಶ್ಟ್ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾ, ಇಂತಹ ಘಟನೆಗಳು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಏನು ಎಂಬುದನ್ನು ಜಗತ್ತಿಗೆ ತೋರಿಸುತ್ತಿದೆ. ಇತ್ತೀಚೆಗೆ ಆ ಪ್ರದೇಶಕ್ಕೆ ಭೇಟಿ ನೀಡಿದ್ದಾಗ ತಾವು ಅವಘಡ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾಗಿ ಹೇಳಿದ್ದಾರೆ. 

ಅವಘಡ ನಡೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಮೂರು ತಿಂಗಳ ಹಿಂದೆ, ನಾನು ಚುನಾವಣೆಯಲ್ಲಿ ಗೆದ್ದಾಗ, ನಾನು ಈ ಪ್ರದೇಶದಲ್ಲಿದ್ದೆ. ಆ ಸಮಯದಲ್ಲಿ ಈ ಕಟ್ಟಡ ಅವಘಡಕ್ಕೆ ಕಾರಣವಾಗಬಹುದು ಎಂದು ನಾನು ಹೇಳಿದ್ದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕಾಗಿ ಕ್ರಮ ಕೈಗೊಳ್ಳಬೇಕೆಂದು ದೆಹಲಿ ಲೆಫ್ಟಿನೆಂಟ್ ಲೆಫ್ಟಿನೆಂಟ್ (ವಿಕೆ ಸಕ್ಸೇನಾ) ಮತ್ತು ಎಂಸಿಡಿ ಆಯುಕ್ತರಿಗೆ ಹೇಳಿದ್ದೇನೆ ಎಂದು ಹೇಳಿದರು. ಮುಸ್ತಫಾಬಾದ್‌ನಲ್ಲಿ ಬಲಿಗಾಗಿ ಕಾದಿರುವ ಕಟ್ಟಡಗಳು ಹೆಚ್ಚಾಗಿವೆ ಎಂದು ಅವರು ಆರೋಪಿಸಿದ್ದಾರೆ.