ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಕೋಲ್ಕತಾ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಕೋಲ್ಕತಾದಿಂದ 30 ಕಿಲೋಮೀಟರ್‌ ದೂರದಲ್ಲಿರುವ ನಿಲ್ಜುಂಗ್‌ ಮೋಶ್ಪೋಲ್‌ನಲ್ಲಿನ ಮನೆಯನ್ನೇ ಕಾರ್ಖಾನೆ ರೀತಿ ಪರಿವರ್ತಿಸಿ ಅಲ್ಲಿ ಪಟಾಕಿಗಳನ್ನು ಉತ್ಪಾದಿಸಿ ಸಂಗ್ರಹಿಸಲಾಗಿತ್ತು. ಭಾನುವಾರ ಬೆಳಗ್ಗೆ ಈ ಸ್ಫೋಟ ಸಂಭವಿಸಿದೆ. ಘಟನೆ ಸಂಬಂಧ ಅಗ್ನಿ ಶಾಮಕ ದಳ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, 5 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿ ಆಶಿಷ್‌ ಘೋಷ್‌ ತಿಳಿಸಿದ್ದಾರೆ.

ಪಟಾಕಿ ಕಾರ್ಖಾನೆಗೆ ಬೆಂಕಿ, ಮೂವರು ಮಹಿಳೆ ಸೇರಿ 8 ಮಂದಿ ಸುಟ್ಟು ಕರಕಲು!

ಅಭಿಮಾನಿಗಳು ಹಚ್ಚಿದ ಪಟಾಕಿ ಸಿಡಿದು ಸಚಿವ ರಾಜಣ್ಣ ಕಣ್ಣಿಗೆ ಗಾಯ

Scroll to load tweet…
Scroll to load tweet…