Asianet Suvarna News Asianet Suvarna News

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲರು, ಒಬ್ಬ ಯೋಧ ಬಲಿ

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳ ಭದ್ರತಾ ಸಿಬ್ಬಂದಿಗಳ ಜಂಟಿ ತಂಡವು ಅಬುಜ್ಮದ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರ ಗುಂಪು ಎದುರಾಗಿದೆ. ಈ ವೇಳೆ ಉಭಯ ಬಣಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ 8 ನಕ್ಸಲರು ಹತರಾಗಿದ್ದಾರೆ. ಇದೇ ವೇಳೆ ನಕ್ಸಲರ ಗುಂಡಿಗೆ ಓರ್ವ ಭದ್ರತಾ ಸಿಬ್ಬಂದಿ ಕೂಡಾ ಹುತಾತ್ಮರಾಗಿದ್ದಾರೆ. 

8 Naxals killed in Encounter at Chhattisgarh grg
Author
First Published Jun 16, 2024, 7:27 AM IST

ನಾರಾಯಣಪುರ(ಜೂ.16):  ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ 8 ಮಂದಿ ನಕ್ಸಲರು ಮತ್ತು ವಿಶೇಷ ಕಾರ್ಯಪಡೆಯ(ಎಸ್‌ಟಿಎಫ್‌)ಯ ಓರ್ವ ಸಿಬ್ಬಂದಿ ಹತರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಎಸ್‌ಟಿಎಫ್‌ ಸಿಬ್ಬಂದಿ ಗಾಯಗೊಂಡಿದ್ದಾರೆ.

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳ ಭದ್ರತಾ ಸಿಬ್ಬಂದಿಗಳ ಜಂಟಿ ತಂಡವು ಅಬುಜ್ಮದ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರ ಗುಂಪು ಎದುರಾಗಿದೆ. ಈ ವೇಳೆ ಉಭಯ ಬಣಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ 8 ನಕ್ಸಲರು ಹತರಾಗಿದ್ದಾರೆ. ಇದೇ ವೇಳೆ ನಕ್ಸಲರ ಗುಂಡಿಗೆ ಓರ್ವ ಭದ್ರತಾ ಸಿಬ್ಬಂದಿ ಕೂಡಾ ಹುತಾತ್ಮರಾಗಿದ್ದಾರೆ. ಘಟನಾ ಸ್ಥಳದಿಂದ ನಕ್ಸಲರಿಗೆ ಸೇರಿದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಛತ್ತೀಸ್‌ಗಢದಲ್ಲಿ 12 ನಕ್ಸಲರ ಹತ್ಯೆ: ಐದೇ ತಿಂಗಳಲ್ಲಿ 100 ಬಲಿ..!

ಈ ವರ್ಷದಲ್ಲಿ ರಾಜ್ಯದಲ್ಲಿ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಭಾರೀ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದು, ಇದರಲ್ಲಿ 131 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.

Latest Videos
Follow Us:
Download App:
  • android
  • ios