ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ, 8 ರೋಗಿಗಳು ಸಜೀವ ದಹನ!
ಕೊರೋನಾ ಆಸ್ಪತರೆಯಲ್ಲಿ ಅಗ್ನಿ ದುರಂತ| ನೊಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಆಸ್ಪತ್ರೆ| ದುರಂತದಲ್ಲಿ ಎಂಟು ಮಂದಿ ಸಜೀವ ದಹನ
ಅಹಮದಾಬಾದ್(ಆ.06): ಗುಜರಾತ್‌ನ ಅಹಮದಾಬಾದ್‌ನ ನವರಂಗಪುರದ ಕೊರೋನಾ ಚಿಕಿತ್ಸೆ ನೀಡುತ್ತಿದ್ದ ಶ್ರೇಯ್ ಆಸ್ಪತ್ರೆಯಲ್ಲಿ ಬುಧವಾರ ತಡ ರಾತ್ರಿ ಭಾರೀ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಟು ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ.
ಶ್ರೇಯ ಆಸ್ಪತ್ರೆಯನ್ನು ಕೋವಿಡ್ -19ಆಸ್ಪತ್ರೆ ಎಂದು ಘೋಷಿಸಲಾಗಿದ್ದು ಕರೋನಾ ರೋಗಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಐಸಿಯುನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಆಸ್ಪತ್ರೆ ಸಿಬ್ಬಂದಿ 35ಕ್ಕೂ ಅಧಿಕ ಮಂದಿ ರೋಗಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
ಇನ್ನು ಮಾಹಿತಿ ಪಡೆದ ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕೆ ಆಗಮಿಸಿದೆಯಾದರೂ ಅಷ್ಟರಲ್ಲಿ ಎಂಟು ಮಂದಿ ಸಜೀವ ದಹನವಾಗಿದ್ದಾರೆ. ಇನ್ನು ಈ ಅವಘಡಕ್ಕೆ ಕಾರಣವೇನು ಎಂಬುವುದು ಈವರೆಗೂ ತಿಳಿದ ಬಂದಿಲ್ಲ.
ಇನ್ನು ಈ ದುರಂತದಲ್ಲಿ ಮಡಿದ ರೋಗಿಗಳ ಕುಟುಂಬಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದು, ಗಾಯಾಳುಗಳಿಗೆ 50 ಸಾವಿರ ರೂಪಾಯಿ ಘೋಷಿಸಿದ್ದಾರೆ. ಘಟನೆ ಬಗ್ಗೆ ಕೂಲಂಕುಶ ತನಿಖೆಗೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಆದೇಶಿಸಿದ್ದಾರೆ.