ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 9 ಜನರು ಮೃತಪಟ್ಟು, 29 ಮಂದಿ ಗಾಯಗೊಂಡಿದ್ದಾರೆ. ವಶಪಡಿಸಿಕೊಂಡಿದ್ದ ಸ್ಫೋಟಕಗಳ ಪರಿಶೀಲನೆ ವೇಳೆ ಈ ದುರಂತ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಶ್ರೀನಗರ: ಶುಕ್ರವಾರ ತಡರಾತ್ರಿ ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ದೊಡ್ಡಪ್ರಮಾಣದ ಸ್ಫೋಟ ಸಂಭವಿಸಿದ್ದು, 9 ಜನರು ಮೃತರಾಗಿದ್ರೆ, 29 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದೆಹಲಿಯ ಕೆಂಪುಕೋಟೆಯ ಸ್ಪೋಟಕ ಸಂಬಂಧಿಸಿದ ಸ್ಫೋಟಕಗಳನ್ನು ಈ ಸ್ಥಳದಲ್ಲಿ ಸಂಗ್ರಹಿಸಲಾಗಿತ್ತು. ಸುಮಾರು 30 ಕಿಲೋ ಮೀಟರ್ ದೂರದವರೆಗೆ ಸ್ಪೋಟದ ಶಬ್ದ ಕೇಳಿಸಿದೆ. ಪೊಲೀಸ್ ಠಾಣೆಯ ಬಳಿಯಲ್ಲಿದ್ದ ವಾಹನಗಳು ಬೆಂಕಿಗಾಹುತಿಯಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ, ಭದ್ರತಾ ಅಧಿಕಾರಿಗಳು ಆಗಮಿದ್ದಾರೆ. ಮುಂಜಾಗ್ರತ ಕ್ರಮವಾಗಿ ಈ ಭಾಗದ ರಸ್ತೆಗಳನ್ನು ಮುಚ್ಚಲಾಗಿದೆ.
ತನಿಖೆ ಆರಂಭ
ಪೊಲೀಸ್ ಠಾಣೆಯಲ್ಲಿ ವಶಕ್ಕೆಪಡಿಸಿಕೊಳ್ಳಲಾದ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು. ಸ್ಪೋಟಕಗಳ ಪರಿಶೀಲನೆ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆಯಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಮ್ಯಾಜಿಸ್ಟ್ರೇಟ್ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಪೋಟಕಗಳ ತಪಾಸಣೆ ನಡೆಯಬೇಕಿತ್ತು.
Scroll to load tweet…
Scroll to load tweet…
