ಅಪಘಾತದಿಂದ ಕುಖ್ಯಾತಿ ಗಳಿಸಿರುವ ಥಾಣೆಯ ಸಮೃದ್ಧಿ ಹೆದ್ದಾರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕ್ರೇನ್ ಕುಸಿದು 16 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಮಹಾರಾಷ್ಟ್ರ: ಅಪಘಾತದಿಂದ ಕುಖ್ಯಾತಿ ಗಳಿಸಿರುವ ಥಾಣೆಯ ಸಮೃದ್ಧಿ ಹೆದ್ದಾರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕ್ರೇನ್ ಕುಸಿದು 16 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಹೆದ್ದಾರಿಯಲ್ಲಿ ಸೇತುವೆ ನಿರ್ಮಾಣ ಕಾರ್ಯಕ್ಕಾಗಿ ಈ ಕ್ರೇನ್‌ನ್ನು ಬಳಸಲಾಗುತ್ತಿತ್ತು. 

ಅಪಘಾತ ಸಂಭವಿಸಿದ ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಎರಡು ತಂಡಗಳನ್ನು ನಿಯೋಜಿಸಲಾಗಿತ್ತು. ಥಾಣೆ ಜಿಲ್ಲೆಯ ಶಹಾಪುರ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಈ ದುರಂತ ಸಂಭವಿಸಿದೆ. ದುರಂತದಲ್ಲಿ 16 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಎರಡು ತಂಡಗಳು ಇದುವರೆಗೆ 16 ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಕ್ರೇನ್ ಮೂಲಕ ಕೋವಿಡ್ ರೋಗಿಯ ಸ್ಥಳಾಂತರಿಸಿದ ಚೀನಾ: ವಿಡಿಯೋ ವೈರಲ್ 

ಟ್ರಕ್ ಮೇಲೆತ್ತುವಾಗ ನೀರಿಗೆ ಬಿದ್ದ ಕ್ರೇನ್!