Asianet Suvarna News Asianet Suvarna News

Congress Working Committee Meet ಇಂದು ಐತಿಹಾಸಿಕ ಘಟನೆ ನಡೆವ ಬಗ್ಗೆ ಭಾರಿ ವದಂತಿ

- ಸೋನಿಯಾ, ಪ್ರಿಯಾಂಕಾ ಇಂದು ರಾಜೀನಾಮೆ?

- ಪಂಚರಾಜ್ಯ ಸೋಲು ಕಾರಣ ಅಧ್ಯಕ್ಷೆ, ಉತ್ತರಪ್ರದೇಶ ಮುಖಭಂಗದಿಂದ ಪುತ್ರಿ ತ್ಯಾಗಪತ್ರ ಸಂಭವ

- ಅಂತಹ ಸಾಧ್ಯತೆಯೇ ಇಲ್ಲ: ಕಾಂಗ್ರೆಸ್‌

- ಕಾಂಗ್ರೆಸ್‌ ಮುಖ್ಯ ಕಚೇರಿಯಲ್ಲಿ ಇಂದು ಸಂಜೆ 4ಕ್ಕೆ ಸಿಡಬ್ಲ್ಯುಸಿ ಸಭೆ

a new era of indian national congress without gandhis is on cards after five state election results san
Author
Bengaluru, First Published Mar 13, 2022, 5:15 AM IST

ನವದೆಹಲಿ (ಮಾ.13): ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ (Five State Election Results) ಹೀನಾಯ ಸೋಲು ಕಂಡ ಕಾಂಗ್ರೆಸ್‌ ಪಕ್ಷವು (Congress Party)ಈ ಬಗ್ಗೆ ಪರಾಮರ್ಶೆ ನಡೆಸಲು ಭಾನುವಾರ ಮಹತ್ವದ ಕಾರ‍್ಯಕಾರಿ ಸಮಿತಿ (ಸಿಡಬ್ಲ್ಯುಸಿ) (Congress Working Committee Meet) ಸಭೆ ಕರೆದಿದೆ. ಈ ಸಭೆಯಲ್ಲಿ ಪಂಚರಾಜ್ಯ ಚುನಾವಣೆಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi), ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ಪ್ರಿಯಾಂಕಾ ವಾದ್ರಾ(Priyanka Gandhi Vadra)  ಮತ್ತು ರಾಹುಲ್‌ ಗಾಂಧಿ (Rahul Gandhi) ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ಇಂಥ ರಾಜೀನಾಮೆ ನಿರ್ಧಾರವನ್ನು ಗಾಂಧಿ ಕುಟುಂಬ ಪ್ರಕಟಿಸಿ, ಅದಕ್ಕೆ ಬದ್ಧವಾಗಿ ಉಳಿದರೆ ಅದು ಪಕ್ಷದ ಇತಿಹಾಸದಲ್ಲೇ ಐತಿಹಾಸಿಕ ಘಟನೆಗೆ ಕಾರಣವಾಗುವ ಎಲ್ಲಾ ಸಾಧ್ಯತೆಗಳಿವೆ. ಆದರೆ ಇಂಥದ್ದೊಂದು ಸಾಧ್ಯತೆಯನ್ನು ಪಕ್ಷದ ವಕ್ತಾರ ರಣದೀಪ್‌ ಸುರ್ಜೇವಾಲಾ (randeep surjewala) ತಳ್ಳಿಹಾಕಿದ್ದಾರೆ.

ಪಕ್ಷದ ಮುಖ್ಯ ಕಚೇರಿಯಲ್ಲಿ ಭಾನುವಾರ ಸಂಜೆ 4 ಗಂಟೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯುಸಿ ( CWC )  ಸಭೆ ನಡೆಯಲಿದೆ. ಸಭೆಯಲ್ಲಿ ಪಂಚರಾಜ್ಯ ಚುನಾವಣೆ ಸೋಲಿಗೆ ಕಾರಣಗಳನ್ನು ಪರಾಮರ್ಶಿಸುವ ಸಾಧ್ಯತೆ ಇದೆ. ಜೊತೆಗೆ ಸತತ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಕಾರಣ ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಆಂತರಿಕ (ಅಧ್ಯಕ್ಷೀಯ) ಚುನಾವಣೆಯನ್ನು ಅದಕ್ಕೂ ಮುನ್ನವೇ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಲ್ಲದೆ ಪುದುಚೇರಿ, ಅಸ್ಸಾಂ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲುಂಡಾಗ ಜಿ-23 ಬಂಡಾಯ ನಾಯಕರು ಪಕ್ಷದೊಳಗೆ ಆಮೂಲಾಗ್ರ ಸಾಂಸ್ಥಿಕ ಬದಲಾವಣೆ ಆಗ್ರಹಿಸಿದ್ದರು. ಆದರೆ ಯಾವುದೇ ಬದಲಾವಣೆ ಅಗತ್ಯವಿಲ್ಲ ಎಂದು ಸೋನಿಯಾ ಗಾಂಧಿ ಖಂಡತುಂಡವಾಗಿ ಹೇಳಿದ್ದರು. ಆದರೆ ಈ ಬಾರಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್‌ ಅಸ್ತಿತ್ವವೇ ಇಲ್ಲದಂತೆ ದಯನೀಯ ಸೋಲು ಕಂಡಿದೆ. ಹೀಗಾಗಿ ಈಗ ಜಿ-23 ನಾಯಕರು ಮತ್ತೊಮ್ಮೆ ಸಿಡಿದೇಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Election 2022 ಪಂಚ ರಾಜ್ಯ ಸೋಲಿನ ಹೊಣೆ ಹೊತ್ತು ಸೋನಿಯಾ, ರಾಹುಲ್, ಪ್ರಿಯಾಂಕಾ ರಾಜೀನಾಮೆ ಸಾಧ್ಯತೆ, ಕಾಂಗ್ರೆಸ್ ಗರಂ!
ಇದೇ ವೇಳೆ, ಪಂಚರಾಜ್ಯ ಚುನಾವಣೆಯಲ್ಲಿನ ಸೋಲಿಗೆ ಹೊಣೆ ಯಾರು ಎಂಬ ಬಗ್ಗೆಯೂ ಚರ್ಚೆ ನಡೆಯಲಿದ್ದು, ಸೋಲಿನ ಹೊಣೆಯನ್ನು ನಿರ್ದಿಷ್ಟನಾಯಕರಿಗೆ ಹೊರಿಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ. ಈ ನಡುವೆ ಪಕ್ಷದೊಳಗೆ ಸಾಂಸ್ಥಿಕ ಬದಲಾವಣೆಗೆ ಆಗ್ರಹಿಸುತ್ತಿರುವ ಜಿ-23 ನಾಯಕರು ಶುಕ್ರವಾರ ಸಂಜೆ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರ ನಿವಾಸದಲ್ಲಿ ಸಭೆ ನಡೆಸಿ ನಿರ್ಣಾಯಕ ಸಿಡಬ್ಲ್ಯುಸಿ ಸಭೆಗೆ ಮುನ್ನ ತಮ್ಮ ಕಾರ್ಯತಂತ್ರವನ್ನು ರೂಪಿಸಿದ್ದಾರೆ. ಪಕ್ಷದ ಪುನರುಜ್ಜೀವನಕ್ಕೆ ಯಾವ ಕ್ರಮ ಕೈಗೊಳ್ಳಬಹುದೂ ಎಂಬ ಬಗ್ಗೆ ಚರ್ಚೆ ಸಹ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ನಾಳೆ ಚುನಾವಣೆ ಆದ್ರೂ ನಾವ್ ರೆಡಿ: ಸಿದ್ದರಾಮಯ್ಯ
5 ರಾಜ್ಯಗಳಲ್ಲಿ ಸರ್ಕಾರ ರಚನೆ ಕಸರತ್ತು ಆರಂಭ
ನವದೆಹಲಿ:
ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಐದೂ ರಾಜ್ಯಗಳಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆಗಳು ಆರಂಭವಾಗಿವೆ. ಪಂಜಾಬ್‌ನಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಆಮ್‌ ಆದ್ಮಿ ಪಕ್ಷ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಮಾ.16ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಉತ್ತರಪ್ರದೇಶದಲ್ಲಿ ಪುನರಾಯ್ಕೆಯಾಗಿರುವ ಯೋಗಿ ಆದಿತ್ಯನಾಥ್‌ ಭಾನುವಾರ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

Follow Us:
Download App:
  • android
  • ios