ದೆಹಲಿಯಲ್ಲಿನ ಸೇವೆಯ ಅಧಿಕಾರವನ್ನು ತನ್ನ ಬಳಿಯೇ ಉಳಿಸಿಕೊಳ್ಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. 

ನವದೆಹಲಿ: ದೆಹಲಿಯಲ್ಲಿನ ಸೇವೆಯ ಅಧಿಕಾರವನ್ನು ತನ್ನ ಬಳಿಯೇ ಉಳಿಸಿಕೊಳ್ಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಸುಗೀವಾಜ್ಞೆಗೆ ತಡೆ ಕೋರಿ ಆಮ್‌ಆದ್ಮಿ ಪಕ್ಷದ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಾಲಯ, ತಡೆ ನೀಡಲು ನಿರಾಕರಿಸಿತು. ಆದರೆ ಈ ಕುರಿತು ಪ್ರತಿಕ್ರಿಯೆ ಬಯಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿತು. ಅಲ್ಲದೆ ಪ್ರಕರಣದಲ್ಲಿ ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ಅವರನ್ನೂ ಪಕ್ಷಗಾರರನ್ನಾಗಿ ಮಾಡುವಂತೆ ಆಪ್‌ ಪರ ವಕೀಲರಿಗೆ ಸೂಚಿಸಿತು. ಮುಂದಿನ ವಿಚಾರಣೆ ಜು.17ಕ್ಕೆ ನಿಗದಿಯಾಗಿದೆ.