Asianet Suvarna News Asianet Suvarna News

ಮೆರವಣಿಗೆ ಸಾಗುತ್ತಿದ್ದವರ ಮೇಲೆ ಹರಿದ ಟ್ರಕ್ : ಮಕ್ಕಳು ಸೇರಿ 12 ಜನರ ದಾರುಣ ಸಾವು

ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ಸಾಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ಕೊಂದು ಮೆರವಣಿಗೆ ಸಾಗುತ್ತಿದ್ದವರ ಮೇಲೆ ಹರಿದ ಪರಿಣಾಮ ಮಕ್ಕಳು ಮಹಿಳೆಯರು ಸೇರಿದಂತೆ 12 ಜನ ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ.

A truck plowed into the marchers, 12 people including children and woman died in Vaishali District of Bihar akb
Author
First Published Nov 21, 2022, 9:37 AM IST

ಹಾಜಿಪುರ,ಬಿಹಾರ: ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ಸಾಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ಕೊಂದು ಮೆರವಣಿಗೆ ಸಾಗುತ್ತಿದ್ದವರ ಮೇಲೆ ಹರಿದ ಪರಿಣಾಮ ಮಕ್ಕಳು ಮಹಿಳೆಯರು ಸೇರಿದಂತೆ 12 ಜನ ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ಬಿಹಾರದ ವೈಶಾಲಿ ಜಿಲ್ಲೆಯ ದೆಸ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಒಂಭತ್ತು ಗಂಟೆ ಸುಮಾರಿಗೆ ರಸ್ತೆ ಬದಿ ಪೀಪಲ್ ಟ್ರೀ ಬಳಿ ಅಲ್ಲಿನ ಗ್ರಾಮ ದೇವರೆನಿಸಿದ ಭುಮಿಯಾ ಬಾಬಾ ಅವರಿಗೆ ಪೂಜೆ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ.  ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶೋಕ ವ್ಯಕ್ತಪಡಿಸಿದ್ದು, 2 ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡ ಪ್ರತಿಯೊಬ್ಬರಿಗೂ 50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ. 

ಬಿಹಾರದ (Bihar) ವೈಶಾಲಿ (Vaishali) ಜಿಲ್ಲೆಯಲ್ಲಿ ನಡೆದ ಘಟನೆ ದುಖಃಕರ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು. ಹಾಗೆಯೇ ಗಾಯಾಳುಗಳಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಟ್ವಿಟ್ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮರ್ಮು ಕೂಡ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇದು ತುಂಬಾ ಖೇದಕರ ವಿಚಾರ ಎಂದು ಅವರು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಮಹೌ ವಿಧಾನಸಭಾ ಕ್ಷೇತ್ರದ ಆರ್‌ಜೆಡಿ ಶಾಸಕ ಮುಕೇಶ್ ರೋಷನ್ (Mukesh Roushan) ಭೇಟಿ ನೀಡಿದ್ದು, ಘಟನೆಯಲ್ಲಿ ಕನಿಷ್ಠ 9 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಅವರನ್ನು ಹಾಜಿಪುರದ (Hajipur) ಸರ್ದಾರ್ ಆಸ್ಪತ್ರೆಗೆ (Sadar hospital) ದಾಖಲಿಸಲಾಗಿದೆ. ಈ ವೇಳೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೂವರು ಮೃತಪಟ್ಟಿದ್ದಾರೆ. ಅಲ್ಲದೇ ಗಂಭೀರವಾಗಿ ಗಾಯಗೊಂಡ ಕೆಲವರನ್ನು ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

 

ವೈಶಾಲಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಮನೀಶ್ ಕುಮಾರ್ (Manish Kumar), ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮದುವೆಗೆ ಸಂಬಂಧಿಸಿದ ಸಂಪ್ರದಾಯಗಳ ಭಾಗವಾಗಿ ಈ ಮೆರವಣಿಗೆ ನಡೆಯುತ್ತಿತ್ತು. ಸುಲ್ತಾನ್‌ಪುರದ ಗ್ರಾಮ ನಿವಾಸಿಯೊಬ್ಬರ ಮದುವೆ ಕೆಲ ದಿನಗಳಲ್ಲಿ ನಡೆಯಬೇಕಿತ್ತು. ಆದರೆ ವೇಗವಾಗಿ ಬಂದ ಟ್ರಕ್ ಚಾಲಕ ಮಹ್ನಾರ್-ಹಾಜಿಪುರ ಹೆದ್ದಾರಿಯಲ್ಲಿ (Mahnar-Hajipur highway) ತನ್ನ ನಿಯಂತ್ರಣ ಕಳೆದುಕೊಂಡು ಈ ಮೆರವಣಿಗೆ ಮೇಲೆ ಟ್ರಕ್ ಹರಿಸಿದ್ದಾನೆ. ಪರಿಣಾಮ ಟ್ರಕ್ ಕೂಡ ನಜ್ಜುಗುಜ್ಜಾಗಿದ್ದು ಚಾಲಕ ಅದರೊಳಗೆ ಸಿಲುಕಿದ್ದ. ನಾವು ಆತ ಮೃತಪಟ್ಟಿದ್ದಾನೆ ಎಂದು ಭಾವಿಸಿದ್ದೆವು ಎಂದು ಹೇಳಿದರು. ಇನ್ನು ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಅನೇಕರು ಘಟನಾ ಸ್ಥಳದತ್ತ ಧಾವಿಸಿ ಬಂದು ಗೋಳಾಡಲು ಶುರು ಮಾಡಿದ್ದರು. ಕೆಲವರು ಪೊಲೀಸರು ಘಟನಾ ಸ್ಥಳಕ್ಕೆ ಬಹಳ ವಿಳಂಬವಾಗಿ ತೆರಳಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು. 

 

ರಕ್ಷಣಾ ಕಾರ್ಯ ಚುರುಕುಗೊಳಿಸುವಂತೆ ನಾವು ಸಮೀಪದ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ಸೂಚಿಸಿದ್ದೇವೆ ಎಂದು ಎಸ್ಪಿ ಹೇಳಿದರು. ಬಿಹಾರ ಸಿಎಂ (Chief Minister) ನಿತೀಶ್ ಕುಮಾರ್ (Nitish Kumar) ಕೂಡ ಘಟನೆ ಬಗ್ಗೆ ಶೋಕ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತಕ್ಕೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಶೀಘ್ರ ಪರಿಹಾರ ಸಿಗಲು ಎಲ್ಲಾ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ. ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಕೂಡ ಘಟನೆ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ.

 

Follow Us:
Download App:
  • android
  • ios