ಭಾರತದ ರಾಜತಾಂತ್ರಿಕತೆಗೆ ದೊಡ್ಡ ಗೆಲುವು: ಗಲ್ಲುಶಿಕ್ಷೆ ಘೋಷಿಸಲ್ಪಟ್ಟಿದ್ದನೌಕಾಪಡೆಯ 8 ಮಾಜಿ ಅಧಿಕಾರಿಗಳ ಬಿಡುಗಡೆಗೊಳಿಸಿದ ಕತಾರ್

ಕತಾರ್‌ನಲ್ಲಿ ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕತಾರ್ ಸರ್ಕಾರ ಬಿಡುಗಡೆ ಗೊಳಿಸಿದೆ. ಬಿಡುಗಡೆಗೊಂಡು ದೇಶಕ್ಕೆ ಆಗಮಿಸಿ ಮಾಜಿ ಅಧಿಕಾರಿಗಳು, ವೈಯಕ್ತಿಕವಾಗಿ ಪ್ರಧಾನಿ ಮೋದಿ ಈ ವಿಚಾರದಲ್ಲಿ ತೆಗೆದುಕೊಂಡು ಮುತುವರ್ಜಿಯನ್ನು ಕೊಂಡಾಡಿದ್ದಾರೆ. 

A win for Indian diplomacy and PM modi personal interfere Qatar released 8 Indian Navy officers who had been to be hanged akb

ನವದೆಹಲಿ: ಕತಾರ್‌ನಲ್ಲಿ ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕತಾರ್ ಸರ್ಕಾರ ಬಿಡುಗಡೆ ಗೊಳಿಸಿದೆ. ಬಿಡುಗಡೆಗೊಂಡು ದೇಶಕ್ಕೆ ಆಗಮಿಸಿ ಮಾಜಿ ಅಧಿಕಾರಿಗಳು, ವೈಯಕ್ತಿಕವಾಗಿ ಪ್ರಧಾನಿ ಮೋದಿ ಈ ವಿಚಾರದಲ್ಲಿ ತೆಗೆದುಕೊಂಡು ಮುತುವರ್ಜಿಯನ್ನು ಕೊಂಡಾಡಿದ್ದಾರೆ. 

ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಾದ ಕ್ಯಾಪ್ಟನ್‌ ನವತೇಜ್‌ ಸಿಂಗ್‌ ಗಿಲ್‌(Captain Navtej Singh Gill), ಕ್ಯಾಪ್ಟನ್‌ ಬೀರೇಂದ್ರ ಕುಮಾರ್‌ ವರ್ಮಾ(Captain Birendra Kumar Verma), ಕ್ಯಾಪ್ಟನ್‌ ಸೌರಭ್‌ ವಸಿಷ್ಠ(Captain Saurabh Vasistha), ಕಮಾಂಡರ್‌ ಅಮಿತ್‌ ನಾಗಪಾಲ್‌(Commander Amit Nagpal), ಕಮಾಂಡರ್‌ ಪೂರ್ಣೇಂದು ತಿವಾರಿ(Commander Purnendu Tiwari), ಕಮಾಂಡರ್‌ ಸುಗುಣಾಕರ್‌ ಪಾಕಳ(Commander Sugunakar Pakala), ಕಮಾಂಡರ್‌ ಸಂಜೀವ್‌ ಗುಪ್ತಾ (Commander Sanjeev Gupta) ಹಾಗೂ ಸೈಲರ್‌ ರಾಗೇಶ್‌ (Sailor Ragesh) ವಿರುದ್ಧ ಕತಾರ್ ನ್ಯಾಯಾಲಯವೂ ಕಳೆದ ವರ್ಷದ ಆಕ್ಟೋಬರ್‌ನಲ್ಲಿ ಗಲ್ಲುಶಿಕ್ಷೆಯ ತೀರ್ಪು ನೀಡಿ ಆದೇಶಿಸಿತ್ತು.

ಕತಾರ್‌ನ ಸೇನೆಯ ಯೋಧರಿಗೆ ತರಬೇತಿ ಮತ್ತು ಇತರೆ ವಿಷಯದಲ್ಲಿ ಅಲ್‌ ದಹ್ರಾ (Al Dahra) ಎಂಬ ಕಂಪನಿ ಸೇವೆ ನೀಡುತ್ತದೆ. ಈ ಕಂಪನಿಯಲ್ಲಿ ನೌಕರರಾಗಿದ್ದ 8 ಭಾರತೀಯರನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು. ಬಳಿಕ ಭಾರತ ಸರ್ಕಾರಕ್ಕಾಗಲೀ(Indian government), ಭಾರತದಲ್ಲಿರುವ ಅವರ ಕುಟುಂಬಕ್ಕಾಗಲೀ ಯಾವುದೇ ಮಾಹಿತಿ ನೀಡದೆ ಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿತ್ತು. ಗಲ್ಲುಶಿಕ್ಷೆಗೆ ಗುರಿಯಾದ ಎಂಟು ಮಂದಿಯ ವಿರುದ್ಧ ಕತಾರ್‌ ಪೊಲೀಸರು ಇಸ್ರೇಲ್‌ನ ಪರ ಗೂಢಚರ್ಯೆ (spying for Israel) ನಡೆಸಿದ ಆರೋಪ ಹೊರಿಸಿದ್ದರು. ಅದನ್ನು ಸಾಬೀತುಪಡಿಸಲು ಅವರ ಬಳಿ ಎಲೆಕ್ಟ್ರಾನಿಕ್‌ ಸಾಕ್ಷ್ಯಗಳಿವೆ ಎಂದು ಪತ್ರಿಕೆಯೊಂದು ಈ ಹಿಂದೆ ವರದಿ ಮಾಡಿತ್ತು.

 

ಇವರೆಲ್ಲರೂ ದಹ್ರಾ ಗ್ಲೋಬಲ್‌ ಟೆಕ್ನಾಲಜೀಸ್‌ನಲ್ಲಿ (Dahra Global Technologies) ನೌಕರಿ ಮಾಡುತ್ತಿದ್ದರು. ಇಟಲಿ ಮೂಲದ ತಂತ್ರಜ್ಞಾನ ಬಳಸಿ ರಹಸ್ಯವಾಗಿ ದಾಳಿ ನಡೆಸುವ ಸಬ್‌ಮರೀನ್‌ಗಳನ್ನು ಉತ್ಪಾದಿಸುವ ಯೋಜನೆಯಲ್ಲಿ ಇವರು ತೊಡಗಿದ್ದರು. ಈ ವೇಳೆ ಇವರೆಲ್ಲಾ ಗೂಢಚರ್ಯೆ ನಡೆಸಿ ಕತಾರ್‌ ಸೇನೆಯ ಕುರಿತ ರಹಸ್ಯ ಮಾಹಿತಿಗಳನ್ನು ಇಸ್ರೇಲ್‌ಗೆ ರವಾನಿಸಿದ್ದಾರೆ ಎಂಬ ಆರೋಪ ಹೊರಿಸಲಾಗಿದೆ.

ಭಾರತಕ್ಕೆ ರಾಜತಾಂತ್ರಿಕ ಗೆಲುವು, ನೌಕಾಸೇನೆ ಮಾಜಿ ಅಧಿಕಾರಿಗಳ ಗಲ್ಲುಶಿಕ್ಷೆ ರದ್ದುಗೊಳಿಸಿದ ಕತಾರ್!

ಆ ಸಂದರ್ಭದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ಇಲಾಖೆ ಆರೋಪಿಗಳ ಕುಟುಂಬದ ಜೊತೆ ಹಾಗೂ ಕಾನೂನು ತಂಡದ ಜೊತೆಗೆ ಸಂಪರ್ಕದಲ್ಲಿದ್ದೇವೆ. ಗಲ್ಲುಶಿಕ್ಷೆ ಎದುರಿಸುತ್ತಿರುವ ಭಾರತೀಯರನ್ನು ರಕ್ಷಿಸಲು ಎಲ್ಲಾ ಕಾನೂನು ಆಯ್ಕೆಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಈ ವಿಚಾರದಲ್ಲಿ ವ್ಯಯಕ್ತಿಕವಾಗಿ ಕತಾರ್ ಅಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದರು, ಜೊತೆಗೆ ಭಾರತೀಯ ವಿದೇಶಾಂಗ ಇಲಾಖೆಯೂ ಅಗತ್ಯ ಕ್ರಮ ಕೈಗೊಂಡಿತ್ತು. ಪರಿಣಾಮ ಈಗ ಭಾರತೀಯ ನೌಕಾಸೇನೆಯ 8 ಅಧಿಕಾರಿಗಳು ಬಿಡುಗಡೆಯಾಗಿದ್ದಾರೆ.

Latest Videos
Follow Us:
Download App:
  • android
  • ios