ದೆಹಲಿ ಯೂನಿವರ್ಸಿಟಿ ವಿದ್ಯಾರ್ಥಿ ಚುನಾವಣೆಯಲ್ಲಿ ಎಬಿವಿಪಿ ಜಯಭೇರಿ, 4ರಲ್ಲಿ 3 ಸ್ಥಾನ ಗೆಲುವು!
ದೆಹಲಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಚುನಾವಣೆಯಲ್ಲಿ ಎಬಿವಿಬಿ ಘಟಕ ಭರ್ಜರಿ ಜಯಭೇರಿ ಬಾರಿಸಿದೆ. 4 ಸ್ಥಾನಗಳ ಪೈಕಿ 3 ಸ್ಥಾನ ಗೆದ್ದಿರುವ ABPV ಅಧ್ಯಕ್ಷಪಟ್ಟಕ್ಕೇರಿದರೆ, ಇತ್ತ ಎನ್‌ಎಸ್‌ಯುಐ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ನವದೆಹಲಿ(ಸೆ.23) ದೆಹಲಿ ವಿಶ್ವವಿದ್ಯಾಲದಯ ವಿದ್ಯಾರ್ಥಿ ಚುನಾವಣೆಯಲ್ಲಿ ಎಬಿವಿಪಿ ಭರ್ಜರಿ ಗೆಲುವು ಸಾಧಿಸಿದೆ. 4 ಸ್ಥಾನಗಳ ಪೈಕಿ 3 ಸ್ಥಾನ ಗೆದ್ದುಕೊಂಡಿರುವ ವಿದ್ಯಾರ್ಥಿ ಘಟಕ ಎಬಿವಿಪಿ ಅಧ್ಯಕ್ಷ ಚುಕ್ಕಾಣಿ ಹಿಡಿದಿದೆ. ಇನ್ನು ಎನ್‌ಎಸ್‌ಯುಐ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಎಬಿವಿಪಿ ನಾಯಕ ತುಷಾರ್ ದೇಧಾ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಘಟಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಕಾರ್ಯದರ್ಶಿಯಾಗಿ ಅಪರಾಜಿತ ಹಾಗೂ ಸಚಿನ್ ಬೈಸ್ಲಾ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
2019ರ ಬಳಿಕ ದೆಹಲಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆದಿಲ್ಲ. ಮೂರು ವರ್ಷಗಳ ಬಳಿಕ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್( ಎಬಿವಿಪಿ) ಜಯಭೇರಿ ಬಾರಿಸುವಲ್ಲಿ ಯಶಸ್ವಿಯಾಗಿದೆ. ರಾಷ್ಟ್ರೀಯ ವಿದ್ಯಾರ್ಥಿಸಂಘದ(ಎನ್‌ಎಸ್‌ಯುಐ) ಅಭಿ ದಹಿಯಾ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದಿದ್ದಾರೆ.
ಒಟ್ಟು 24 ವಿದ್ಯಾರ್ಥಿ ನಾಯಕರು ಚನಾವಣೆಯಲ್ಲಿ ಸ್ಪರ್ಧಿಸಿದ್ದರು. 52 ವಿವಿಧ ಕಾಲೇಜುಗಳ ಈ ಚುನಾವಣೆಯಲ್ಲಿ ಪಾಲ್ಗೊಂಡಿತ್ತು. ಇವಿಎಂ ಮೂಲಕ ಮತದಾನ ನಡೆಸಲಾಗಿತ್ತು. ಶೇಕಡಾ 42 ರಷ್ಟು ಮತದಾನ ನಡೆದಿತ್ತು. ಸರಿಸುಮಾರು 1 ಲಕ್ಷ ವಿದ್ಯಾರ್ಥಿಗಳು ಮತದಾನ ನಡೆಸಿದ್ದರು.