ನವದೆಹಲಿ(ಮೇ.11): ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂಗಾಳದಿಂದ ಬಂದಿದ್ದ ಮಹಿಳೆಯೊಬ್ಬಳ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.

ಏ.10ರಂದು ದೆಹಲಿಗೆ ರೈತರ ತಂಡದ ಜೊತೆ ಬಂದಿದ್ದ ಮಹಿಳೆಗೆ ಏ.26ರಂದು ಕೋವಿಡ್‌ ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಆಕೆ ಏ.30ರಂದು ಸಾವನ್ನಪ್ಪಿದ್ದಳು. ಈ ನಡುವೆ ಸಾವಿಗೂ ಮುನ್ನ ತನ್ನ ತಂದೆಗೆ ಕರೆ ಮಾಡಿದ್ದ ಮಹಿಳೆ, ಪ್ರತಿಭಟನೆಗೆ ಬಂದಿದ್ದ ಇಬ್ಬರು ವ್ಯಕ್ತಿಗಳು ತನ್ನ ಮೇಲೆ ಅತ್ಯಾಚಾರ ನಡೆಸಿದ್ದರು ಎಂಬ ಮಾಹಿತಿ ನೀಡಿದ್ದಾಳೆ.

ಈ ಹಿನ್ನೆಲೆಯಲ್ಲಿ ಇದೀಗ ಆಕೆಯ ಆಕೆಯ ತಂದೆ ಅತ್ಯಾಚಾರದ ದೂರು ಸಲ್ಲಿಸಿದ್ದು, ಪೊಲೀಸರು ಇದೀಗ ರೇಪ್‌ ಕೇಸು ದಾಖಲಿಸಿಕೊಂಡು ಇಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona