ED ದಾಳಿ ಬಳಿಕ ಆತ್ಮಹತ್ಯೆಗೆ ಶರಣಾದ ಉದ್ಯಮಿ ಮನೋಜ್ ಪಾರ್ಮರ್ & ಪತ್ನಿ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಹಣ ನೀಡಿದ್ದ ಉದ್ಯಮಿ ಮನೋಜ್ ಪಾರ್ಮರ್ ಮತ್ತು ಅವರ ಪತ್ನಿ ಶವವಾಗಿ ಪತ್ತೆಯಾಗಿದ್ದಾರೆ. ED ದಾಳಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ.
ಭೋಪಾಲ್: ಭಾರತ್ ಜೋಡೋ ಯಾತ್ರೆಯಲ್ಲಿ ಸಿಹೋರ್ ನಿವಾಸಿಯಾಗಿದ್ದ ಉದ್ಯಮಿ ಮನೋಜ್ ಪಾರ್ಮರ್ ಅವರ ಮಕ್ಕಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ತಮ್ಮ ಹಣದ ಹುಂಡಿಯನ್ನು ನೀಡಿದ್ದರು. ಇದೀಗ ಇದೇ ಮನೋಜ್ ಪಾರ್ಮರ್ ಮತ್ತ ಅವರ ಪತ್ನಿ ಶವ ಅನುಮಾನಸ್ಪಾದ ರೀತಿಯಲ್ಲಿ ಪತ್ತೆಯಾಗಿದೆ. ಡಿಸೆಂಬರ್ 5ರಂದು ಮನೋಜ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಡಿಸೆಂಬರ್ 13ರಂದು ಪತ್ನಿ ಜೊತೆ ಮನೋಜ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಸ್ಥಳದಲ್ಲಿ ಪೊಲೀಸರಿಗೆ ಡೆತ್ ನೋಟ್ ಲಭ್ಯವಾಗಿದೆ. ಮನೋಜ್ ಪಾರ್ಮರ್ ಮತ್ತು ಪತ್ನಿ ಆತ್ಮಹತ್ಯೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದೊಂದು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಧ್ಯಪ್ರದೇಶದ ಪ್ರಮುಖ ಕಾಂಗ್ರೆಸ್ ನಾಯಕರು ಸಿಹೋರ್ ನಗರದತ್ತ ಪ್ರಯಾಣ ಬೆಳೆಸಿದ್ದಾರೆ.
ಇದನ್ನೂ ಓದಿ: ವೀರ್ ಸಾವರ್ಕರ್‌ಗೆ ಅವಮಾನ, ರಾಹುಲ್ ಗಾಂಧಿಗೆ ಲಖನೌ ಕೋರ್ಟ್‌ನಿಂದ ಸಮನ್ಸ್!
ಸಿಹೋರ್‌ನ ಶಾಂತಿ ನಗರದ ನಿವಾಸದಲ್ಲಿ ಗಂಡ-ಹೆಂಡತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ಮೃತದೇಹಗಳನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಲಾಗಿದೆ. ಸ್ಥಳದಲ್ಲಿ ಸೂಸೈಡ್ ನೋಟ್, ಮನೆಯೆಲ್ಲಾ ಪರಿಶೀಲನೆ ನಡೆಸಲಾಗುತ್ತಿದೆ. ವಿಷಯ ತಿಳಯುತ್ತಿದ್ದಂತೆ ಬೆಳಗ್ಗೆ ಸುಮಾರು 8.30ಕ್ಕೆ ನಮ್ಮ ಸಿಬ್ಬಂದಿ ಇಲ್ಲಿಗೆ ಬಂದಿದ್ದಾರೆ. ಕುಟುಂಬಸ್ಥರಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಡಿಪಿ ಆಕಾಶ್ ಅಮಲ್ಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿ ಬಳಿಕ ಮನೋಜ್ ಪಾರ್ಮರ್ ಮತ್ತು ಅವರ ಕುಟುಂಬ ಒತ್ತಡದಲ್ಲಿತ್ತು ಎಂದು ಕುಟುಂಬಸ್ಥರು ಹೇಳಿದ್ದಾರೆ. ಆದ್ರೆ ಸೂಸೈಡ್ ನೋಟ್‌ನಲ್ಲಿ ಏನಿತ್ತು ಎಂಬುದರ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ.
ಇದನ್ನೂ ಓದಿ: ಸಂವಿಧಾನ ಆರ್‌ಎಸ್‌ಎಸ್ ಪುಸ್ತಕ ಅಲ್ಲ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಚಾಟಿ