Asianet Suvarna News Asianet Suvarna News

ಉದಯ್‌ಪುರ ಬಳಿಕ ಮಹಾದಲ್ಲೂ ಭಯಾನಕ ಕೃತ್ಯ: ನೂಪುರ್‌ ಬೆಂಬಲಿಸಿದ್ದಕ್ಕೆ ವ್ಯಕ್ತಿಯ ಇರಿದು ಕೊಲೆ

ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಮಹಾರಾಷ್ಟ್ರದಲ್ಲೂ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರಸಾಯನಶಾಸ್ತ್ರಜ್ಞ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

after udaypur now in maharashtra man stabbed to death for alleged online post supporting Nupur Sharma akb
Author
Bangalore, First Published Jul 2, 2022, 3:14 PM IST

ಮಹಾರಾಷ್ಟ್ರ: ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಮಹಾರಾಷ್ಟ್ರದಲ್ಲೂ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರಸಾಯನಶಾಸ್ತ್ರಜ್ಞ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪ್ರವಾದಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಉದಯ್‌ಪುರದಲ್ಲಿ ಮುಸ್ಲಿಂ ಆತಂಕವಾದಿಗಳು ವ್ಯಕ್ತಿಯ ತಲೆ ಕಡಿದು ಕೊಲೆ ಮಾಡಿದ್ದರು. ಆ ಘಟನೆ ಮಾಸುವ ಮುನ್ನವೇ ಇನ್ನೊಂದು ಅದೇ ರೀತಿಯ ಅಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆದರೆ ಈ ಘಟನೆ ಜೂನ್‌ 21 ರಂದೇ ನಡೆದಿದೆ ಎನ್ನಲಾಗುತ್ತಿದೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ರಸಾಯನಶಾಸ್ತ್ರಜ್ಞನ ಹತ್ಯೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಮತ್ತು ಎನ್‌ಜಿಒ ನಡೆಸುತ್ತಿರುವ ಪ್ರಮುಖ ಆರೋಪಿ 32 ವರ್ಷದ ಇರ್ಫಾನ್ ಖಾನ್ (Irfan Khan) ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಮರಾವತಿ (Amravati city) ಪೊಲೀಸ್ ಕಮಿಷನರ್ ಡಾ.ಆರತಿ ಸಿಂಗ್ ಶನಿವಾರ ತಿಳಿಸಿದ್ದಾರೆ.

ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಅಮರಾವತಿ ನಗರದಲ್ಲಿ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು. ನೂಪುರ್ ಶರ್ಮಾ (Nupur Sharma) ಅವರ  ಹೇಳಿಕೆಗೆ ಬೆಂಬಲವಾಗಿ ಅವರು ಕೆಲವು ವಾಟ್ಸಾಪ್ ಗುಂಪುಗಳಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ತಮ್ಮ ಗ್ರಾಹಕರು ಸೇರಿದಂತೆ ಕೆಲವು ಮುಸ್ಲಿಮರು ಸಹ ಸದಸ್ಯರಾಗಿರುವ ವಾಟ್ಸಾಪ್ ಗುಂಪಿನಲ್ಲಿ ಪೋಸ್ಟ್ ಅನ್ನು  ಹಂಚಿಕೊಂಡಿದ್ದರು ಎಂದು ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯ (Kotwali police station) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿ: ಹಿಂದೂ ಯುವಕನ ತಲೆ ಕತ್ತರಿಸಿದ ಇಬ್ಬರು ಹಂತಕರ ಬಂಧನ, ಭಾರಿ ಪ್ರತಿಭಟನೆ!

ಅದರ ನಂತರ, ಆರೋಪಿಗಳು ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಯವರ ಹತ್ಯೆಗೆ ಸಂಚು ರೂಪಿಸಿದರು ಮತ್ತು ಅದಕ್ಕಾಗಿ ಇರ್ಫಾನ್‌ ಖಾನ್‌ ಐದು ಜನ ಹಂತಕರ ತಂಡ ರಚಿಸಿದ್ದ. ಅವರಿಗೆ 10 ಸಾವಿರ ರೂಪಾಯಿ ನೀಡಿ ಕೆಲಸ ಮುಗಿದ ನಂತರ ಸುರಕ್ಷಿತವಾಗಿ ಕಾರಿನಲ್ಲಿ ತಪ್ಪಿಸಿಕೊಂಡು ಹೋಗಲು ಅನುವು ಮಾಡಿಕೊಡುವುದಾಗಿ ಪ್ರಮುಖ ಆರೋಪಿ ಭರವಸೆ ನೀಡಿದ್ದ ಎನ್ನಲಾಗಿದೆ. 

ಜೂನ್ 21 ರಂದು ರಾತ್ರಿ 10 ರಿಂದ ರಾತ್ರಿ 10.30 ರ ನಡುವೆ  ಕೊಲ್ಹೆ ತನ್ನ ಅಂಗಡಿಯನ್ನು ಮುಚ್ಚಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದೇ ಸಮಯದಲ್ಲಿ ಇವರ ಮಗ 27 ವರ್ಷದ ಸಂಕೇತ್ (Sanket) ಹಾಗೂ ಪತ್ನಿ ವೈಷ್ಣವಿ (Vaishnavi) ಬೇರೆ ವಾಹನದಲ್ಲಿ ಅವರೊಂದಿಗೆ ಬರುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹಿಂದೂ ವ್ಯಕ್ತಿಯ ಶಿರಚ್ಛೇದ, ಭಾರತಕ್ಕೂ ಕಾಲಿಡ್ತು ಐಸಿಸ್ ಕ್ರೌರ್ಯ
 

ಅವರೆಲ್ಲರೂ ಮಹಿಳಾ ಕಾಲೇಜಿನ ಗೇಟ್ ಬಳಿ ತಲುಪಿದಾಗ, ಹಿಂದಿನಿಂದ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ಹಂತಕರು ಕೋಲ್ಹೆಯವರ ವಾಹನವನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ದ್ವಿಚಕ್ರವಾಹನದಿಂದ ಕೆಳಗಿಳಿದ ಕೋಲ್ಹೆ ಅವರ ಕುತ್ತಿಗೆಗೆ ಹರಿತವಾದ ಆಯುಧದಿಂದ ಇರಿದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಧುತ್ತನೇ ಎದುರಾದ ಈ ಭಯಾನಕ ದಾಳಿಯಿಂದ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಕುಸಿದು ಬಿದ್ದ ಕೊಲ್ಹೆ  ಅವರನ್ನು ಪುತ್ರ ಸಂಕೇತ್‌ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸಾಕೇತ್ ಅವರು ನೀಡಿದ ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಿ ಐವರನ್ನು ಬಂಧಿಸಲಾಗಿದೆ.  ಮುದ್ದ್‌ಸಿರ್ ಅಹಮದ್ (22), ಶಾರುಖ್ ಪಠಾಣ್ (25), ಅಬ್ದುಲ್ ತೌಫಿಕ್ (24) ಶೋಯಬ್ ಖಾನ್ (22) ಮತ್ತು ಅತಿಬ್ ರಶೀದ್ (22) ಬಂಧಿತ ಆರೋಪಿಗಳು. ಐವರು ದಿನಗೂಲಿ ಕೆಲಸ ಮಾಡುವವರು ಎಂದು ತಿಳಿದು ಬಂದಿದೆ.

ಪೊಲೀಸರು ಅಪರಾಧಕ್ಕೆ ಬಳಸಿದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಘಟನೆ ನಡೆದ ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಕೊಲೆಯ ಹಿಂದಿನ ನಿಖರವಾದ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಸಿಂಗ್ ಹೇಳಿದ್ದಾರೆ.

 

Follow Us:
Download App:
  • android
  • ios