ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ರಾಜೀನಾಮೆಯಿಂದಾಗಿ ಪ್ರಸ್ತುತ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮಾತ್ರವೇ ಇದ್ದಾರೆ.
ನವದೆಹಲಿ (ಮಾ.9): 2024 ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಇರುವಾಗಲೇ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ. ಇದರಿಂದಾಗಿ ಕೇಂದ್ರ ಚುನಾವಣಾ ಆಯೋಗದಲ್ಲೀಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಏಕೈಕ ಸದಸ್ಯರಾಗಿದ್ದು, ಉಳಿದ ಯಾವುದೇ ಸದಸ್ಯರು ಉಳಿದುಕೊಂಡಿಲ್ಲ."ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಕಾಯಿದೆ, 2023 ರ ಸೆಕ್ಷನ್ 11 ರ ಷರತ್ತು (1) ರ ಅನುಸಾರವಾಗಿ, 2024ರ ಮಾರ್ಚ್ 9 ರಿಂದ ಜಾರಿಗೆ ಬರುವಂತೆ ಆಯುಕ್ತ ಅರುಣ್ ಗೋಯೆಲ್ ಅವರು ಆಯೋಗಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ಸ್ವೀಕರಿಸಲು ರಾಷ್ಟ್ರಪತಿಯಾಗಿ ಸಂತೋಷಪಡುತ್ತೇನೆ' ಎಂದು ಶನಿವಾರ ಹೊರಡಿಸಿದ ಗೆಜೆಟ್ ಅಧಿಸೂಚನೆಯನ್ನು ತಿಳಿಸಲಾಗಿದೆ.
1985ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅರುಣ್ ಗೋಯೆಲ್ ಇದಕ್ಕೂ ಮುನ್ನ ಬೃಹತ್ ಕೈಗಾರಿಕಾ ಇಲಾಖೆಯ ಕಾರ್ಯದರ್ಶನಿಯಾಗಿ ಕಾರ್ಯನಿವರ್ಹಿಸಿದ್ದರು. ಅರುಣ್ ಗೋಯೆಲ್ ರಾಜೀನಾಮೆಗೆ ಕಾರಣವೇನು ಅನ್ನೋದು ಇನ್ನೂ ಬಹಿರಂಗವಾಗಿಲ್ಲ. ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆ ತಯಾರಿಯ ಉತ್ತುಂಗದ ನಡುವೆಯೇ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯುವ ಚುನಾವಣೆಯ ಸಿದ್ಧತೆಯನ್ನು ಪರಿಶೀಲಿಸಲು ತಂಡಗಳು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದರೂ ಚುನಾವಣಾ ದಿನಾಂಕಗಳನ್ನು ಇನ್ನೂ ಘೋಷಿಸಲಾಗಿಲ್ಲ.
ರಾಜ್ಯಸಭಾ ಚುನಾವಣಾ ದಿನಾಂಕ ಪ್ರಕಟಿಸಿದ ಆಯೋಗ, ಫೆ.27 ಮತದಾನ, ಅಂದೆ ಫಲಿತಾಂಶ!
ಶುಕ್ರವಾರ, ಚುನಾವಣಾ ಆಯೋಗವು ದೇಶಾದ್ಯಂತ ಭದ್ರತಾ ಸಿಬ್ಬಂದಿಯ ನಿಯೋಜನೆ ಮತ್ತು ಚಲನೆಗಾಗಿ ಕೇಂದ್ರ ಗೃಹ ಸಚಿವಾಲಯ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಭದ್ರತಾ ಸಭೆಯನ್ನು ನಡೆಸಿತು.ಲೋಕಸಭೆ ಚುನಾವಣೆಯ ಜೊತೆಗೆ, ಆಯೋಗವು ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ರಾಜ್ಯ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ.
Breaking: ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ!
ಚುನಾವಣಾ ಆಯುಕ್ತರ ನೇಮಕ ಹೇಗೆ?: ಅರುಣ್ ಗೋಯೆಲ್ ಚುನಾವಣಾ ಆಯುಕ್ತ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡುವುದರೊಂದಿಗೆ, ಸದ್ಯ ಆಯೋಗದಲ್ಲಿ ಎರಡು ಸ್ಥಾನ ಖಾಲಿ ಉಳಿದಂಯಾಗಿದೆ. ಅರುಣ್ ಗೋಯೆಲ್‌ಗೂ ಮುನ್ನ ಇನ್ನೊಂದು ಸ್ಥಾನ ಖಾಲಿ ಉಳಿದಿತ್ತು. ಇದರಿಂದಾಗಿ ಪ್ರಸ್ತುತ ಕೇಂದ್ರ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತ್ರವೇ ಇದ್ದಾರೆ.
