ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ 6 ಸಾವಿರ ರೂ. ಸಹಾಯಧನದ ಜೊತೆಗೆ ಇದನ್ನು ನೀಡಲಾಗುತ್ತಿದೆ. ಹೀಗಾಗಿ ರೈತರಿಗೆ ನೀಡಲಾಗುವ ವಾರ್ಷಿಕ ಸಹಾಯಧನ 12 ಸಾವಿರ ರೂ.ಗೆ ಹೆಚ್ಚಳವಾಗಿದೆ ಎಂದು ಮಧ್ಯ ಪ್ರದೇಶ ಸಿಎಂ ಹೇಳಿದರು.

ಭೋಪಾಲ್‌ (ಜೂನ್ 14, 2023): ಚುನಾವಣೆಯ ಹೊಸ್ತಿಲಲ್ಲಿರುವ ಮಧ್ಯಪ್ರದೇಶದಲ್ಲಿ ಸರ್ಕಾರ ಜನರಿಗಾಗಿ ಮತ್ತೊಂದು ಯೋಜನೆಯನ್ನು ಘೋಷಣೆ ಮಾಡಿದ್ದು, ರೈತರಿಗೆ ನೀಡಲಾಗುತ್ತಿದ್ದ ವಾರ್ಷಿಕ ಆರ್ಥಿಕ ಸಹಾಯವನ್ನು 6 ಸಾವಿರ ರೂ. ಗೆ ಹೆಚ್ಚಳ ಮಾಡಿದೆ.

ಮಂಗಳವಾರ ಈ ಯೋಜನೆಯನ್ನು ಘೋಷಣೆ ಮಾಡಿದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಈಗಾಗಲೇ ಮುಖ್ಯಮಂತ್ರಿ ಕಿಸಾನ್‌ ಕಲ್ಯಾಣ್‌ ಯೋಜನೆಯಡಿಯಲ್ಲಿ ನೀಡಲಾಗುತ್ತಿದ್ದ ಆರ್ಥಿಕ ಸಹಾಯಧನವನ್ನು 4 ಸಾವಿರ ರೂ.ನಿಂದ 6 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ. ಇದನ್ನು ವಾರ್ಷಿಕವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. 
ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ 6 ಸಾವಿರ ರೂ. ಸಹಾಯಧನದ ಜೊತೆಗೆ ಇದನ್ನು ನೀಡಲಾಗುತ್ತಿದೆ. ಹೀಗಾಗಿ ರೈತರಿಗೆ ನೀಡಲಾಗುವ ವಾರ್ಷಿಕ ಸಹಾಯಧನ 12 ಸಾವಿರ ರೂ.ಗೆ ಹೆಚ್ಚಳವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿ: ಚುನಾವಣಾ ಗಿಫ್ಟ್‌ ಸಮರ: ಅಂಗನವಾಡಿ ಕಾರ‍್ಯಕರ್ತೆಯರ ಗೌರವಧನ 13000 ರೂ.ಗೆ ಏರಿಕೆ

ಇದಕ್ಕೂ ಮೊದಲು ರಾಜ್ಯ ಬಿಜೆಪಿ ಸರ್ಕಾರ ‘ಲಾಡ್ಲಿ ಬೆಹೆನಾ’ ಯೋಜನೆಯಡಿ ಎಲ್ಲಾ ಮಹಿಳೆಯರಿಗೂ ಮಾಸಿಕ 1 ಸಾವಿರ ರೂ. ಸಹಾಯಧನ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 13 ಸಾವಿರ ರೂ.ಗೆ ಹೆಚ್ಚಳ ಮಾಡಿತ್ತು.

ಚುನಾವಣೆಯ ಹೊಸ್ತಿಲಲ್ಲಿರುವ ಮಧ್ಯಪ್ರದೇಶದಲ್ಲಿ ರಾಜ್ಯ ಸರ್ಕಾರ ಮತ್ತೊಂದು ಯೋಜನೆಯನ್ನು ಜಾರಿಗೊಳಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು 3 ಸಾವಿರ ರೂ. ಹೆಚ್ಚಳ ಮಾಡಿದೆ. ಈ ಮೂಲಕ ಅವರ ವೇತನ 13 ಸಾವಿರ ರೂ.ಗೆ ಏರಿಕೆಯಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಶಿವರಾಜ್‌ಸಿಂಗ್‌, ವೇತನ ಹೆಚ್ಚಳದ ಜೊತೆಗೆ ಲಾಡ್ಲಿ ಬೆಹೆನಾ ಯೋಜನೆಯಡಿ ಹೆಚ್ಚುವರಿ 1 ಸಾವಿರ ರೂ. ಸಹಾಯಧನವನ್ನೂ ಸಹ ಅಂಗನವಾಡಿ ಕಾರ್ಯಕರ್ತೆಯರು ಪಡೆದುಕೊಳ್ಳಲಿದ್ದಾರೆ ಎಂದು ಹೇಳಿದರು. ಪ್ರಸ್ತುತ ಮಧ್ಯಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಗೌರವಧನ ನೀಡಲಾಗುತ್ತಿತ್ತು. ಈಗ ಅದನ್ನು 13 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ. 

ಇದನ್ನೂ ಓದಿ: ಈಗ ಬಿಜೆಪಿಯಿಂದಲೂ ಫ್ರೀ ಸ್ಕೀಂ: ಈ ರಾಜ್ಯದ ಸ್ತ್ರೀಯರಿಗೆ 1000 ರೂ. ಬಂಪರ್‌

ಚುನಾವಣಾ ವರ್ಷದಲ್ಲಿ ಮಹಿಳಾ ಮತದಾರರ ಸೆಳೆಯಲು ಮುಂದಾಗಿರುವ ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಉಚಿತ ಕೊಡುಗೆಗಳ ಜಾರಿಗೆ ಮುಂದಾಗಿದೆ. ಇದರ ಭಾಗವಾಗಿ ತನ್ನ ಮಹತ್ವಕಾಂಕ್ಷೆಯ ಲಾಡ್ಲಿ ಬೆಹೆನಾ (ಪ್ರಿಯ ಸೋದರಿ) ಯೋಜನೆಗೆ ಅದು ಶನಿವಾರ ಚಾಲನೆ ನೀಡಲಿದೆ. ಈ ಯೋಜನೆಯನ್ವಯ ರಾಜ್ಯದ 1.25 ಕೋಟಿ ಮಹಿಳೆಯರಿಗೆ ಮಾಸಿಕ 1000 ರೂ. ಭತ್ಯೆ ಲಭಿಸಲಿದೆ.ಮಧ್ಯಪ್ರದೇಶ ರಾಜ್ಯದ 1.25 ಕೋಟಿ ಮಹಿಳೆಯರ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 1000 ರೂ. ಜಮೆ ಮಾಡುವ ಯೋಜನೆಗೆ ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ಚೌಹಾಣ್‌ ಶನಿವಾರ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ 'ಕೈ' ದಿಗ್ವಿಜಯ ಬೆನ್ನಲ್ಲೇ ಮಧ್ಯ ಪ್ರದೇಶದಲ್ಲೂ ಗೆಲುವಿಗೆ ಪ್ಲ್ಯಾನ್‌: ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ