ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಗೆ ಓವೈಸಿ ಕೆಂಡ, ಇದು ಗುಜರಾತ್ ಚುನಾವಣಾ ಗಿಮಿಕ್ ಎಂದ AIMIM!

ಗುಜರಾತ್ ಸರ್ಕಾರ, ಅತ್ಯಾಚಾರಿ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವ ಮೂಲಕ ಬಿಜೆಪಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದೀಗ ಓವೈಸಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

AIMIM chief Asaduddin Owais slams pm modi and bjp over release of convicts of Bilkis Bano gang rape and murder ckm

ಅಹಮ್ಮದಾಬಾದ್(ಆ.16) ಬಿಲ್ಕಿಸ್ ಬಾನೊ ಮೇಲಿನ ಅತ್ಯಾಚಾರ ಹಾಗೂ ಬಾನೊ ಕುಟುಂಬದ ಸದಸ್ಯರ ಹತ್ಯೆ ಪ್ರಕರಣಧಲ್ಲಿ ಕಳೆದ 15 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಗಳನ್ನು ಸನ್ನಡತೆ ಆಧಾರದ ಮೇಲೆ ಗುಜರಾತ್ ಸರ್ಕಾರ ಬಿಡುಗಡೆ ಮಾಡಿದೆ. ಇದು ಭಾರಿ ವಿವಾದಕ್ಕೆ ಕಾರಣಾಗಿದೆ. ಬಿಡುಗಡೆ ಕುರಿತು ಮಾತನಾಡಿರುವ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈಸಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.  ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿ ಈ ತಂತ್ರ ಉಪಯೋಗಿಸಿದೆ. ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ನರೇಂದ್ರ ಮೋದಿ, ನಾರಿ ಶಕ್ತಿ ಸೇರಿದಂತೆ ಮಹಿಳೆಯರ ಕುರಿತು ಹಲವು ಮಾತನಗಳನ್ನಾಡಿದ್ದಾರೆ. ಆದರೆ ಗುಜರಾತ್ ಸರ್ಕಾರ, ಅತ್ಯಾಚಾರಿ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವ ಮೂಲಕ ಎಲ್ಲವೂ ಮಾತುಗಳಲ್ಲಿ ಮಾತ್ರ ಅನ್ನೋದನ್ನು ಸಾಬೀತುಪಡಿಸಿದೆ ಎಂದು ಓವೈಸಿ ಹೇಳಿದ್ದಾರೆ.

2022ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಇನ್ನು ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಈ ಪ್ರಕರಣದಲ್ಲಿ 11 ಅತ್ಯಾಚಾರಿಗಳು ಕಳೆದ 15 ವರ್ಷದಿಂದ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದಾರೆ.  ಸ್ವಾತಂತ್ರ್ಯ ದಿನಾಚರೆಯಂದು ಕೇಂದ್ರ ಸರ್ಕಾರದ ನಿಯಮದ ಪ್ರಕಾರ, ಸನ್ನಡತೆ ಆಧಾರದಲ್ಲಿ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಈ ನಿಯಮದಡಿ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಗುಜರಾತ್ ಬಿಜೆಪಿ ಸರ್ಕಾರ ಈ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

 

Bilkis Bano Case: 11 ಅತ್ಯಾಚಾರಿಗಳಿಗೆ ಬಿಡುಗಡೆ ಭಾಗ್ಯ, ಗುಜರಾತ್‌ ಸರ್ಕಾರದ ವಿರುದ್ಧ ಆಕ್ರೋಶ

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಮೋದಿ ಮಹಿಳೆಯರ ಕುರಿತು ಹಲವು ಮಾತುಗಳನ್ನು ಹೇಳಿದ್ದಾರೆ. ಮಹಿಳೆಯರಿಗೆ ಅಗೌರವ ತೂರುವ, ಮಹಿಳೆ ವಿರುದ್ಧ ಕೆಟ್ಟದಾಗಿ ನಡೆದುಕೊಳ್ಳದಂತೆ ಪ್ರತಿಜ್ಞೆ ಮಾಡಬೇಕು. ದೇಶದ ನಾರಿ ಶಕ್ತಿಯನ್ನು ಬಲಪಡಿಸಬೇಕು ಎಂದು ಭಾಷಣ ಮಾಡಿದ್ದಾರೆ. ಆದರೆ ಅದರಂತೆ ಮೋದಿ ನಡೆದುಕೊಳ್ಳುತ್ತಿಲ್ಲ. ಅತ್ಯಾಚಾರ ಆರೋಪಿಗಳನ್ನು ಬಿಡುಗಡೆ ಮಾಡಿದ್ದಾರೆ.  ಬಿಜೆಪಿಯ ನಡೆಯನ್ನು ದೇಶ ಗಮನಿಸುತ್ತಿದೆ ಎಂದು ಓವೈಸಿ ಹೇಳಿದ್ದಾರೆ

ಬಿಲ್ಕಿಸ್ ಬಾನೊ ಪ್ರಕರಣ
ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆ ವೇಳೆ 5 ತಿಂಗಳ ಗರ್ಭಿಣಿ ಬಿಲ್ಕಿಸ್‌ ಬಾನು ಮೇಲೆ ಅತ್ಯಾಚಾರ ಎಸಗಿದ್ದ ಬಹುಸಂಖ್ಯಾತ ಕೋಮಿನ 11 ದೋಷಿಗಳನ್ನು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ‘ಅವಧಿಪೂರ್ವ ಬಿಡುಗಡೆ’ ಮಾಡಲಾಗಿದೆ. ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಕೋರಿ ದೋಷಿಯೊಬ್ಬ ಸುಪ್ರೀಂ ಕೋರ್ಚ್‌ಗೆ ಅರ್ಜಿ ಹಾಕಿದ್ದ. ಇದನ್ನು ಪರಿಶೀಲಿಸುವಂತೆ ಕೋರ್ಟು, ಗುಜರಾತ್‌ ಸರ್ಕಾರಕ್ಕೆ ಸೂಚಿಸಿತ್ತು. ಅದಕ್ಕೆ ಸರ್ಕಾರ ಈಗ ಅಸ್ತು ಎಂದಿದೆ. ಆದರೆ ಅತ್ಯಾಚಾರದಂಥ ಹೀನ ಕೃತ್ಯ ಎಸಗಿದವರ ಬಿಡುಗಡೆ ಏಕೆ ಎಂದು ಅನೇಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಜೀವಾವಧಿಗೆ ಶಿಕ್ಷೆಗೆ ಗುರಿಯಾಗಿದ್ದ 11 ಜನರು, ತಮಗೆ 14 ವರ್ಷ ಜೈಲು ಶಿಕ್ಷೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಬೇಕು ಎಂದು ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಚ್‌, ಮನವಿ ಪರಿಗಣಿಸುವಂತೆ ಗುಜರಾತ್‌ ಸರ್ಕಾರಕ್ಕೆ ಸೂಚಿಸಿತ್ತು. ಅದರನ್ವಯ, 11 ಕೈದಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ.

Latest Videos
Follow Us:
Download App:
  • android
  • ios