ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ| ನಾಳೆ(ಡಿ.11) ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಮಂಡನೆ| ಮಸೂದೆ ಪ್ರತಿ ಹರಿದು ಹಾಕಿದ ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ| ಚರ್ಚೆಯ ವೇಳೆ ಮಸೂದೆ ಪ್ರತಿ ಹರಿದ ಅಸದುದ್ದೀನ್ ಒವೈಸಿ| ಪೌರತ್ವ ತಿದ್ದುಪಡಿ ಮಸೂದೆ ಅಸಾಂವಿಧಾನಿಕ ಎಂದ ಎಐಎಂಐಎಂ ಸಂಸದ| ಒವೈಸಿ ನಡೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಸದಸ್ಯರು| 

ನವದೆಹಲಿ(ಡಿ.11): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ನಾಳೆ(ಡಿ.11) ರಾಜ್ಯಸಭೆಯಲ್ಲಿ ಮಸೂದೆ ಚರ್ಚೆಗೆ ಬರಲಿದೆ.

ಅಮಿತ್ ಶಾ CAB: ವಾಷಿಂಗ್ಟನ್ ಟು ದಿಲ್ಲಿ, ಪಿಕ್ಚರ್ ಅಬಿ ಬಾಕಿ ಹೈ....!

ಈ ಮಧ್ಯೆ ಲೋಕಸಭೆಯಲ್ಲಿ ಮಸೂದೆ ಕುರಿತು ಚರ್ಚೆ ನಡೆಯುತ್ತಿರುವ ವೇಳೆ, ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ ಮಸೂದೆ ಪ್ರತಿಯನ್ನು ಹರಿದು ಹಾಕಿದ್ದಾರೆ.

ಚರ್ಚೆಯ ಸಂದರ್ಭದಲ್ಲಿ ಮಸೂದೆ ಪ್ರತಿ ಹರಿದು ಹಾಕಿದ ಒವೈಸಿ, ಇದು ಭಾರತವನ್ನು ಒಡೆಯಲಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

Scroll to load tweet…

ಪೌರತ್ವ ತಿದ್ದುಪಡಿ ಮಸೂದೆ ಅಸಾಂವಿಧಾನಿಕ ಎಂದಿರುವ ಒವೈಸಿ, ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಕಿಡಿಕಾರಿದರು.

ಇನ್ನು ಮಸೂದೆ ಪ್ರತಿ ಹರಿದು ಹಾಕಿರುವ ಒವೈಸಿ ನಡೆಯನ್ನು ಆಡಳಿತಾರೂಢ ಬಿಜೆಪಿ ಸದಸ್ಯರು ತೀವ್ರವಾಗಿ ವಿರೋಧಿಸಿದ್ದಾರೆ. ಒವೈಸಿ ಸದನದಲ್ಲಿ ನಡಾವಳಿಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.