ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಸೋಮವಾರ ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಭಾನುವಾರ ಹೇಳಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಅಂದಾಜಿಸಿದೆ.
ಚೆನ್ನೈ: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಸೋಮವಾರ ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಭಾನುವಾರ ಹೇಳಿದೆ.
ತಮಿಳುನಾಡಿನ ಘಟ್ಟ ಪ್ರದೇಶಗಳಾದ ಕೊಯಮತ್ತೂರು, ನೀಲಗಿರಿ, ಈರೋಡ್, ತಿರುಪ್ಪೂರ್, ತೇಣಿ, ತೆಂಕಶಿ, ಕೇರಳ ಪ್ರದೇಶಗಳಲ್ಲೂ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಅಂದಾಜಿಸಿದೆ.
ಆದರೆ ಚೆನ್ನೈ ಮತ್ತು ಅದರ ಸುತ್ತಮುತ್ತ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಈಶಾನ್ಯ ಮುಂಗಾರು ಆರಂಭವಾದಾಗಿನಿಂದ ತಮಿಳುನಾಡು 2-3 ದಿನಗಳಲ್ಲಿ ಭಾರಿ ಮಳೆ ಪಡೆದಿದೆ.
ದೀಪಾವಳಿಗೆ ಬೆಂಗಳೂರು ಸೇರಿ ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಹಲೆವೆಡೆ ಭಾರಿ ಮಳೆ
ಬೆಂಗಳೂರು : ದೀಪಾವಳಿ ಸಂಭ್ರಮದಲ್ಲಿರುವ ಕರ್ನಾಟಕ ಮಂದಿಗೆ ಮಳೆರಾಯ ಅಡ್ಡಿಯಾಗಿದ್ದಾನೆ. ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ರಾಜ್ಯಕ್ಕೆ ಮಳೆ ಅಲರ್ಟ್ ನೀಡಿದೆ. ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ನೀಡಿದೆ. ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ಉತ್ತರಕನ್ನಡ, ಮಂಗಳೂರು, ಉಡುಪಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆಗಳ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿಗೆ ಇಂದು ನಾಳೆ ಯಲ್ಲೋ ಆರ್ಲಟ್ ಘೋಷಣೆ
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ. ಇನ್ನೆರಡು ದಿನ ಇದೇ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇಂದು ಹಾಗೂ ನಾಳೆ ಬೆಂಗಳೂರಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸಂಜೆ ವೇಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಚುರುಕುಗೊಂಡಿದೆ. ಉತ್ತರಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುತ್ತಿದೆ. ಇಂದು ಸಂಜೆ ಆಗುತ್ತಿದ್ದಂತೆ ಮಳೆ ಪ್ರಾರಂಭಗೊಂಡಿದೆ. ದೀಪಾವಳಿ ಖರೀದಿಯಲ್ಲಿ ತೊಡಗಿದ್ದ ಗ್ರಾಹಕರಿಗೂ, ವ್ಯಾಪಾರಸ್ಥರಿಗೂ ಸಮಸ್ಯೆಯಾಗಿದೆ. ಅನಿರೀಕ್ಷಿತವಾಗಿ ಸುರಿದ ಈ ಮಳೆಯಿಂದ ತಾತ್ಕಾಲಿಕವಾಗಿ ವ್ಯಾಪಾರ ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿದೆ.ಇತ್ತ ರಸ್ತೆಗಳಲ್ಲಿ ನೀರು ತುಂಬಿದ ಕಾರಣ ವಾಹನ ಸವಾರರು ಪರದಾಡಿದರು
