ಇಲ್ಲಿನ ಮೋಪಾ ಮನೋಹರ್ ಪರಿಕ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಏರ್‌ಪೋರ್ಟ್‌ನಲ್ಲಿ ಬಾಂಬ್ ಇದೆ ಎಂದು ಹುಸಿ ಬಾಂಬ್ ಕರೆ ಮಾಡಿದ ಘಟನೆ ಶನಿವಾರ ನಡೆದಿದೆ.
ಪಣಜಿ: ಇಲ್ಲಿನ ಮೋಪಾ ಮನೋಹರ್ ಪರಿಕ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಏರ್‌ಪೋರ್ಟ್‌ನಲ್ಲಿ ಬಾಂಬ್ ಇದೆ ಎಂದು ಹುಸಿ ಬಾಂಬ್ ಕರೆ ಮಾಡಿದ ಘಟನೆ ಶನಿವಾರ ನಡೆದಿದೆ. ವ್ಯಕ್ತಿಯೊಬ್ಬ ಸಂಜೆ 4.45ಕ್ಕೆ ಪೊಲೀಸ್ ನಿಯಂತ್ರಣಾ ಕೊಠಡಿಗೆ ಕರೆ ಮಾಡಿ ನಿಲ್ದಾಣದಲ್ಲಿ ಬಾಂಬ್ ಇದೆ ಎಂದು ಹೇಳಿದ್ದ. ಕರೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಮಾನ ನಿಲ್ದಾಣ ಹಾಗೂ ಮನೋಹರ್ ಪರಿಕ್ಕರ್ ನಿಲ್ದಾಣದಲ್ಲಿ ಕೂಲಂಕಶವಾಗಿ ಪರಿಶೀಲನೆ ನಡೆಸಿದಾಗ, ಇದು ಹುಸಿ ಕರೆ ಎಂದು ತಿಳಿದು ಬಂದಿದೆ. ಬಳಿಕ ಕರೆ ಮಾಡಿದ ಸಂಖ್ಯೆಯನ್ನು ಟ್ರಾಕ್ ಮಾಡಿದಾಗ ಕುಡಿದ ಮತ್ತಿನಲ್ಲಿ ಕುಂದನ್ ಕುಮಾರ್ ಎಂಬ ಸಿಬ್ಬಂದಿಯೇ ಕರೆ ಮಾಡಿದ್ದ ಎಂದು ಗೊತ್ತಾಗಿದ್ದು, ಆತನನ್ನು ಬಂಧಿಸಿದ್ದಾರೆ.
ಗೋವಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ!
ಏರ್’ಪೋರ್ಟ್’ನಲ್ಲೇ ಬಿಜೆಪಿಯಿಂದ ರಾಜಕೀಯ ಸಭೆ; ತನಿಖೆಗೆ ಕಾಂಗ್ರೆಸ್ ಆಗ್ರಹ
