'ಮಹಾ' ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ; ಶರದ್ ಪವಾರ್‌ಗೆ ಮತ್ತೆ ಸೆಡ್ಡು; 9 ಎನ್‌ಸಿಪಿ ನಾಯಕರ ಸಾಥ್
ಅಜಿತ್ ಪವಾರ್ ಡಿಸಿಎಂ ಆಗಿ ಇಂದೇ ಪ್ರಮಾಣ ವಚನ ಸ್ವೀಕರಿಸಲಿದ್ದು, ಮಹಾರಾಷ್ಟ್ರ ಸರ್ಕಾರದ ಜತೆ ಕೈಜೋಡಿಸಲಿದ್ದಾರೆ.
ಮುಂಬೈ (ಜುಲೈ 2, 2023): ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ರಾಜಕೀಯ ಬಿರುಗಾಳಿ ಉಂಟಾಗಿದೆ. ಶರತ್ ಪವಾರ್‌ಗೆ ಅಜಿತ್ ಪವಾರ್ ಮತ್ತೆ ಸೆಡ್ಡು ಹೊಡೆದಿದ್ದು, ಎನ್‌ಸಿಪಿಯಲ್ಲಿ ರಾಜಕೀಯ ಬಿರುಕುಂಟಾಗಿದೆ. ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಅಜಿತ್ ಪವಾರ್ ಏಕನಾಥ್ ಶಿಂಧೆ ಹಾಗೂ ಫಡ್ನವೀಸ್ ಸರ್ಕಾರದ ಜತೆ ಕೈ ಜೋಡಿಸಿದ್ದಾರೆ.
ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಲದೆ, ಅವರ ಜತೆ 9 ಜನ ಎನ್‌ಸಿಪಿ ನಾಯಕರು ಸಹ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ದೇವೇಂದ್ರ ಫಡ್ನವೀಸ್ ಅವರೊಂದಿಗೆ ಅಜಿತ್ ಪವಾರ್ 2ನೇ ಡಿಸಿಎಂ ಆಗಿರಲಿದ್ದಾರೆ.
ಇದನ್ನು ಓದಿ: ಶರದ್ ಪವಾರ್‌ಗೆ ಬಿಜೆಪಿ ಕಾರ್ಯಕರ್ತನಿಂದ್ಲೇ ಜೀವ ಬೆದರಿಕೆ: ಅಜಿತ್ ಪವಾರ್ ಸ್ಫೋಟಕ ಹೇಳಿಕೆ
ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಅಜಿತ್ ಪವಾರ್ ಬೆಂಬಲ ಘೋಷಿಸಿದ್ದು, 9 ಶಾಸಕರ ಬೆಂಬಲದೊಂದಿಗೆ ಅಜಿತ್ ಪವಾರ್ ಮೈತ್ರಿ ಸರ್ಕಾರದ ಭಾಗವಾಗಿದ್ದಾರೆ. ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಎನ್‌ಸಿಪಿ ಪ್ರಮುಖ ನಾಯಕ ಛಗನ್ ಭುಜಬಲ್ ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಾಗೂ ದಿಲೀಪ್ ವಾಲ್ಸೆ ಪಾಟೀಲ್ ಸಹ ಸಚಿವರಾಗಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್ ನೂತನ ಡಿಸಿಎಂ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಅಜಿತ್ ಪವಾರ್ ಹೊಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಯುವ ಇಚ್ಛೆಯನ್ನು ಶ್ರೀ ಪವಾರ್ ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಕ್ರಮವು ಬಂದಿದೆ.
ಇದನ್ನೂ ಓದಿ: ಮಹಾ ರಾಜಕೀಯದಲ್ಲಿ ಮತ್ತೊಂದು ಟ್ವಿಸ್ಟ್: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ
ಇಂದು ಬೆಳಗ್ಗೆ, ಎನ್‌ಸಿಪಿ ಶಾಸಕರ ಗುಂಪು ಅಜಿತ್ ಪವಾರ್ ಅವರ ಮುಂಬೈ ನಿವಾಸದಲ್ಲಿ ಸಭೆ ನಡೆಸಿದ್ದು, ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಮತ್ತು ಹಿರಿಯ ನಾಯಕ ಛಗನ್ ಭುಜಬಲ್ ಕೂಡ ಈ ವೇಳೆ ಹಾಜರಿದ್ದರು. ಆದರೆ, ಪಕ್ಷದ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಸಭೆಗೆ ಹಾಜರಾಗಿರಲಿಲ್ಲ.
ಈ ಮಧ್ಯೆ, ಮುಂಬೈನಲ್ಲಿ ನಡೆದ ಸಭೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಶರದ್ ಪವಾರ್ ಪುಣೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು. "ಈ ಸಭೆಯನ್ನು ಏಕೆ ಕರೆಯಲಾಗಿದೆ ಎಂದು ನನಗೆ ನಿಖರವಾಗಿ ತಿಳಿದಿಲ್ಲ. ಆದರೆ ವಿರೋಧ ಪಕ್ಷದ ನಾಯಕರಾಗಿರುವ ಅವರಿಗೆ (ಅಜಿತ್ ಪವಾರ್) ಶಾಸಕರ ಸಭೆ ಕರೆಯುವ ಹಕ್ಕಿದೆ. ಅವರು ಅದನ್ನು ನಿಯಮಿತವಾಗಿ ಮಾಡುತ್ತಾರೆ. ಈ ಸಭೆಯ ಬಗ್ಗೆ ನನಗೆ ಹೆಚ್ಚಿನ ವಿವರಗಳಿಲ್ಲ’’ ಎಂದೂ ಅಜಿತ್ ಪವಾರ್ ಹೇಳಿದರು.
ಇದನ್ನೂ ಓದಿ: 2ಕ್ಕಿಂತ ಹೆಚ್ಚು ಮಕ್ಕಳಿರುವ ಸಂಸದ, ಶಾಸಕರನ್ನು ಅನರ್ಹಗೊಳಿಸಿ: ಅಜಿತ್ ಪವಾರ್
2019 ರಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ವಿಫಲವಾದ ಪ್ರಯತ್ನವನ್ನು ಮಾಡಿದ ಮತ್ತು ಮುಂಜಾನೆ ಸಮಾರಂಭದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅಜಿತ್ ಪವಾರ್, ಪಕ್ಷದಲ್ಲಿ ತನ್ನ ಕ್ಷೀಣಿಸುತ್ತಿರುವ ಸ್ಥಾನಮಾನವನ್ನು ಪುನರುತ್ಥಾನಗೊಳಿಸಲು ರಾಜ್ಯಾಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದರು.
ಅವರು ಪಕ್ಷದ ಯಾವುದೇ ಹುದ್ದೆಯನ್ನು ಹೊಂದಿಲ್ಲದಿದ್ದರೂ, ಶ್ರೀಮತಿ ಸುಪ್ರಿಯಾ ಸುಳೆ ಮತ್ತು ಪಕ್ಷದ ನಾಯಕ ಪ್ರಫುಲ್ ಪಟೇಲ್ ಅವರನ್ನು ಜೂನ್ 10 ರಂದು ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಯ್ತು.
ಇದನ್ನೂ ಓದಿ: ‘ಮಹಾ’ ಬಿಜೆಪಿಗೆ ಅಜಿತ್ ಪವಾರ್ ಹಾಗೂ 40 ಶಾಸಕರ ಬೆಂಬಲ? ಎನ್‌ಸಿಪಿ ನಾಯಕನ ಪ್ರತಿಕ್ರಿಯೆ ಹೀಗಿದೆ..