ಎನ್’ಸಿಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಅಜಿತ್ ಪವಾರ್ ಉಚ್ಛಾಟನೆ| ಬಿಜೆಪಿ ಬೆಂಬಲಿಸಿದ ಅಜಿತ್ ಪವಾರ್ ವಿರುದ್ಧ ಕೆಂಡಾಮಂಡಲವಾದ ಶರದ್ ಪವಾರ್| ಅಜಿತ್ ಪವಾರ್ ನಡೆ ಒಪ್ಪಲು ಸಾಧ್ಯವಿಲ್ಲ ಎಂದ ಶರದ್ ಪವಾರ್| ‘ಅಜಿತ್ ಪವಾರ್ ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿ ಜೊತೆ ಸೇರಿದ್ದಾರೆ’|  ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್|

ಮುಂಬೈ(ನ.23): ಮಹಾರಾಷ್ಟ್ರದಲ್ಲಿ ಇನ್ನೇನು ಶಿವಸೇನೆ, ಎನ್’ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಬೇಕು ಎನ್ನುವಷ್ಟರಲ್ಲಿ ಎನ್’ಸಿಪಿಯ ಅಜಿತ್ ಪವಾರ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಉಪ ಮುಖ್ಯಮಂತ್ರಿಯಾಗಿದ್ದಾರೆ.

'ಮಹಾ' ರಾಜಕೀಯದಲ್ಲಿ ರೋಚಕ ತಿರುವು: 'ಸೇನೆ'ಗೆ ಶಾಕ್, ಫಡ್ನವೀಸ್ ಮತ್ತೆ ಸಿಎಂ!

ಅಜಿತ್ ಪವಾರ್ ನಡೆಯಿಂದ ತೀವ್ರ ಬೇಸರಗೊಂಡಿರುವ ಶರದ್ ಪವಾರ್, ಈ ಬೆಳವಣಿಗೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Scroll to load tweet…

ಈ ಮಧ್ಯೆ ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಪರಿಣಾಮ ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಉಚ್ಛಾಟನೆಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಶಿವಸೇನೆ, ಎನ್’ಸಿಪಿ-ಕಾಂಗ್ರೆಸ್ ಮೈತ್ರಿಗೂ ಮೊದಲೇ ಬಿಜೆಪಿ ಜೊತೆ ಸೇರಿರುವ ಅಜಿತ್ ಪವಾರ್, ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Scroll to load tweet…

ಅಜಿತ್ ಪವಾರ್ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶರದ್ ಪವಾರ್, ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರಿಗೆ ಪಕ್ಷದಲ್ಲಿ ಸ್ಥಾನವಿಲ್ಲ ಎಂದು ಗುಡಗಿದ್ದಾರೆ.

'ಮಹಾಶಯರು 9 ಗಂಟೆವರೆಗೆ ನಮ್ಮೊಂದಿಗೇ ಇದ್ರು ಬಳಿಕ ನಾಪತ್ತೆ, ಮೊಬೈಲೂ ಸ್ವಿಚ್ ಆಫ್'!

ನಿನ್ನೆ(ನ.22) ಏಕಾಏಕಿ ಬಿಜೆಪಿಗೆ ಬೆಂಬಲ ಘೋಷಿಸಿದ್ದ ಅಜಿತ್ ಪವಾರ್, 54 ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

Scroll to load tweet…