Asianet Suvarna News Asianet Suvarna News

ಜಾತಿಗಣತಿ ವಿರೋಧಕ್ಕೆ ಎಲ್ಲ ಮೇಲ್ವರ್ಗದವರು ಒಂದಾಗಿದ್ದಾರೆ: ಖರ್ಗೆ

ರಾಜ್ಯಸಭೆಯಲ್ಲಿ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ ಮಸೂದೆ ಮೇಲಿನ ಚರ್ಚೆಯ ಸಮಯದಲ್ಲಿ, ‘ಮೇಲ್ವರ್ಗದವರೆಲ್ಲಾ ಒಟ್ಟಾಗಿ ಜಾತಿ ಸಮೀಕ್ಷೆ ವರದಿಯನ್ನು ತಡೆಯುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದರು. ಇದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯ್ತು

All Upper Castes United in Opposition to Caste Census Says Mallikarjun Kharge grg
Author
First Published Dec 13, 2023, 4:16 AM IST

ನವದೆಹಲಿ(ಡಿ.13): ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಎಲ್ಲಾ ಮೇಲ್ವರ್ಗದವರು ಒಟ್ಟಾಗಿ ವಿರೋಧ ಮಾಡುತ್ತಿದ್ದಾರೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜನ ಖರ್ಗೆ ಕಿಡಿಕಾರಿದ್ದಾರೆ. ವಿಶೇಷವೆಂದರೆ ಇತ್ತೀಚೆಗೆ ಕರ್ನಾಟಕ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಜಾತಿ ಗಣತಿ ಸ್ವೀಕಾರ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವನ್ನು ವಿರೋಧಿಸಿದ್ದರು.

ರಾಜ್ಯಸಭೆಯಲ್ಲಿ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ ಮಸೂದೆ ಮೇಲಿನ ಚರ್ಚೆಯ ಸಮಯದಲ್ಲಿ, ‘ಮೇಲ್ವರ್ಗದವರೆಲ್ಲಾ ಒಟ್ಟಾಗಿ ಜಾತಿ ಸಮೀಕ್ಷೆ ವರದಿಯನ್ನು ತಡೆಯುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದರು. ಇದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯ್ತು. ಈ ವೇಳೆ ಎದ್ದು ನಿಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ಸಂಸದ ಸುಶೀಲ್‌ ಕುಮಾರ್‌ ಮೋದಿ ‘ಕರ್ನಾಟಕದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ ಅವರು ಸಹ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಬಾರದು ಎಂಬ ನಿವೇದನಾ ಪತ್ರಕ್ಕೆ ಈ ಹಿಂದೆ ಸಹಿ ಹಾಕಿದ್ದರು. ಜೊತೆಗೆ ಜಾತಿ ಗಣತಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದರೆ ನಾವು ವಿರೋಧಿಸುತ್ತೇವೆ ಎಂದು ಎಚ್ಚರಿಕೆ ಕೂಡಾ ನೀಡಿದ್ದರು’ ಎಂದು ತಿರುಗೇಟು ನೀಡಿದರು.

ಜಾತಿಗಣತಿ ನಡೆದರೆ ಮಾತ್ರ ರಾಷ್ಟ್ರದ ಸಂಪತ್ತು ಸಮಾನವಾಗಿ ಹಂಚಿಕೆ

ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಖರ್ಗೆ, ‘ನಮ್ಮ ಉಪಮುಖ್ಯಮಂತ್ರಿಯೂ ಇದನ್ನು ವಿರೋಧಿಸಿದ್ದಾರೆ. ನೀವು (ಬಿಜೆಪಿ) ಇದನ್ನು ವಿರೋಧಿಸುತ್ತಲೇ ಇದ್ದೀರಿ. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಮೇಲ್ವರ್ಗದ ಜನರು ಆಂತರಿಕವಾಗಿ ಒಂದಾಗಿದ್ದೀರಿ. ಅದರಲ್ಲಿ ನೀವು ಇದ್ದೀರಿ, ಅವರೂ ಇದ್ದಾರೆ’ ಎಂದು ಹೇಳಿದರು.

ಬಳಿಕ ಪ್ರತಿಕ್ರಿಯಿಸಿದ ಸುಶೀಲ್‌ ಮೋದಿ, ‘ಖರ್ಗೆ ಅವರಿಗೆ ಧೈರ್ಯವಿದ್ದರೆ, ಜಾತಿ ಗಣತಿ ವರದಿಯನ್ನು ಒಂದು ತಿಂಗಳೊಳಗೆ ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಾಗಿ ಘೋಷಿಸಿ’ ಎಂದು ಸವಾಲು ಹಾಕಿದರು.

Follow Us:
Download App:
  • android
  • ios