ನವದೆಹಲಿ(ಏ.29): ಕೊರೋನಾ ಪಾಸಿಟಿವಿಟಿ ದರ ಶೇ.15ಕ್ಕಿಂತ ಹೆಚ್ಚಿರುವ ದೇಶದ 150 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮಾಡುವ ಪ್ರಸ್ತಾಪವನ್ನು ಉನ್ನತ ಮಟ್ಟದ ತಜ್ಞರ ಸಮಿತಿಯು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ.

"

ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗಿದೆ. ಆದರೆ ಅಂತಿಮ ನಿರ್ಧಾರ ಹೊರಬಿದ್ದಿಲ್ಲ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜತೆ ಚರ್ಚಿಸಿದ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಬೇಕಿದೆ.

‘ಆದರೆ ಈ ವಿಷಯದಲ್ಲಿ ತಡ ಮಾಡುವಂತಿಲ್ಲ. ಸೋಂಕಿನ ಸರಪಳಿ ಕತ್ತರಿಸಲು ತ್ವರಿತವಾಗಿ ಈ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಏಮ್ಸ್‌ ಮುಖ್ಯಸ್ಥ ರಣದೀಪ್‌ ಗುಲೇರಿಯಾ ಕೂಡಾ ಇತ್ತೀಚೆಗೆ ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಲಾಕ್ಡೌನ್‌ ಜಾರಿ ಮಾಡಬೇಕು ಎಂದು ಸಲಹೆ ನೀಡಿದ್ದರು.

 

"

15%ಗಿಂತ ಹೆಚ್ಚಿರುವ ರಾಜ್ಯದ ಜಿಲ್ಲೆಗಳು

ಕೊಡಗು 20.7%, ರಾಯಚೂರು 18.5%, ಕೋಲಾರ 18.2%, ಬೆಂಗಳೂರು ನಗರ 17.6%, ಹಾಸನ 17.6%, ತುಮಕೂರು 17.3%, ಕಲಬುರಗಿ 16.8%, ಬಳ್ಳಾರಿ 16.3%, ಚಿಕ್ಕಮಗಳೂರು 15.3%, ಚಾಮರಾಜನಗರ 15.2%

 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona