Asianet Suvarna News Asianet Suvarna News

ಗೃಹ ಸಚಿವಾಲಯದ ಬೆನ್ನಲ್ಲೇ ಅಗ್ನಿಪಥಕ್ಕೆ ಶೇ. 10ರಷ್ಟು ಮೀಸಲಾತಿ ನೀಡಿದ ರಕ್ಷಣಾ ಸಚಿವ!

* ಸೇನಾ ನೇಮಕಾತಿಗಾಗಿ 'ಅಗ್ನಿಪಥ್' ಯೋಜನೆಯ ಘೋಷಣೆ

* ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರಾಜನಾಥ್ ಸಿಂಗ್

* ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ

Amid Agnipath protest Rajnath Singh holds meeting with service chiefs pod
Author
Bangalore, First Published Jun 18, 2022, 3:51 PM IST

ನವದೆಹಲಿ(ಜೂ.18): ಸೇನಾ ನೇಮಕಾತಿಗಾಗಿ 'ಅಗ್ನಿಪಥ್' ಯೋಜನೆಯ ಘೋಷಣೆಯಿಂದ ಉಂಟಾದ ಒಟ್ಟಾರೆ ಪರಿಸ್ಥಿತಿಯ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಉನ್ನತ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು. ಈ ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ಸಭೆಯಲ್ಲಿ ಏರ್ ಸ್ಟಾಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ಸೇನಾಪಡೆಯ ಉಪ ಮುಖ್ಯಸ್ಥ ಜನರಲ್ ಬಿಎಸ್ ರಾಜು ಉಪಸ್ಥಿತರಿದ್ದರು.

ಈ ಸಭೆಯ ನಂತರ, ರಕ್ಷಣಾ ಸಚಿವಾಲಯವು ಘೋಷಿಸಿ ಟ್ವೀಟ್ ಮಾಡಿದೆ 'ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಗತ್ಯವಿರುವ ಅರ್ಹತಾ ಮಾನದಂಡಗಳನ್ನು ಪೂರೈಸುವ 'ಅಗ್ನಿವೀರ್‌ಗಳಿಗೆ' ರಕ್ಷಣಾ ಸಚಿವಾಲಯದಲ್ಲಿ 10% ಉದ್ಯೋಗ ಖಾಲಿ ಹುದ್ದೆಗಳನ್ನು ಕಾಯ್ದಿರಿಸುವ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಡಿಫೆನ್ಸ್ ಸಿವಿಲಿಯನ್ ಹುದ್ದೆಗಳು ಮತ್ತು ಎಲ್ಲಾ 16 ರಕ್ಷಣಾ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ 10% ಮೀಸಲಾತಿಯನ್ನು ಜಾರಿಗೊಳಿಸಲಾಗುವುದು. ಮಾಜಿ ಸೈನಿಕರಿಗೆ ಈಗಿರುವ ಮೀಸಲಾತಿಗೆ ಹೆಚ್ಚುವರಿಯಾಗಿ ಈ ಮೀಸಲಾತಿ ಇರುತ್ತದೆ ಎಂದಿದ್ದಾರೆ.

ಸಭೆಯಲ್ಲಿ ಅಗ್ನಿಪಥ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವುದು ಮತ್ತು ಪ್ರತಿಭಟನಾಕಾರರನ್ನು ತಡೆಯುವ ಮಾರ್ಗೋಪಾಯಗಳ ಕುರಿತು ಗಮನಹರಿಸಲಾಯಿತು. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಅಧಿಕೃತ ಭೇಟಿಗಾಗಿ ಹೈದರಾಬಾದ್‌ನಲ್ಲಿರುವ ಕಾರಣ ಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡಿದ್ದರಿಂದ ಮುಂದಿನ ವಾರದೊಳಗೆ ಹೊಸ 'ಫಾರ್ಮ್ಯಾಟ್' ಅಡಿಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸುವುದಾಗಿ ಸೇನೆ, ನೌಕಾಪಡೆ ಮತ್ತು ವಾಯುಪಡೆ ಶುಕ್ರವಾರ ಪ್ರಕಟಿಸಿದೆ.

ಅಗ್ನಿಪಥ್ ಯೋಜನೆಯಡಿ ವಾಯುಪಡೆಯ ಆಯ್ಕೆ ಪ್ರಕ್ರಿಯೆಯು ಜೂನ್ 24 ರಿಂದ ಪ್ರಾರಂಭವಾಗಲಿದೆ ಎಂದು ವಾಯುಪಡೆಯ ಮುಖ್ಯಸ್ಥ ವಿಆರ್ ಚೌಧರಿ ಪಿಟಿಐಗೆ ತಿಳಿಸಿದ್ದಾರೆ, ಆದರೆ ಸೇನೆಯು ನೇಮಕಾತಿಗೆ ಪ್ರಾಥಮಿಕ ಅಧಿಸೂಚನೆಯನ್ನು ಹೊರಡಿಸಿ ಎರಡು ದಿನಗಳಲ್ಲಿ ಪ್ರಕ್ರಿಯೆಯನ್ನು ಔಪಚಾರಿಕಗೊಳಿಸಲಿದೆ. ಆದಾಗ್ಯೂ, ನೌಕಾಪಡೆಯು "ಅತಿ ಶೀಘ್ರದಲ್ಲಿ" ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುವುದಾಗಿ ಹೇಳಿದೆ. ಒಂದು ವಾರದೊಳಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹಿರಿಯ ನೌಕಾ ಕಮಾಂಡರ್ ತಿಳಿಸಿದ್ದಾರೆ.

"

Follow Us:
Download App:
  • android
  • ios