ಪಾಕುಡ್(ಡಿ.16): ಸುಪ್ರೀಂಕೋರ್ಟ್ ಆದೇಶದನ್ವಯ ಇನ್ನು ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಜಾರ್ಖಂಡ್'ನ ಪಾಕುಡ್'ನಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಶಾ, ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಆದೇಶದ ಪಾಲನೆಗೆ ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ ಎಂದು ಹೇಳಿದರು.


‘ರಾಮಮಂದಿರ ನಿರ್ಮಾಣಕ್ಕೆ ಪ್ರತೀ ಕುಟುಂಬ 11 ರುಪಾಯಿ, ಒಂದು ಕಲ್ಲು ಕೊಡಿ’

ದಶಕಗಳಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಭಾರತೀಯರ ಬೇಡಿಕೆಯಾಗಿದೆ. ಅದರಂತೆ ಇನ್ನು ಕೇವಲ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಅಮಿತ್ ಶಾ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಗೃಹ ಸಚಿವ, ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ಧಿ ಮಾಡುವ, ದೇಶವನ್ನು ಸುರಕ್ಷಿತವಾಗಿರುವ ಶಕ್ತಿ ಇಲ್ಲ ಎಂದು ಲೇವಡಿ ಮಾಡಿದರು.

ಅಯೋಧ್ಯೆಯಲ್ಲಿ 1008 ಅಡಿ ಎತ್ತರದ ಚಿನ್ನದ ರಾಮಮಂದಿರ ನಿರ್ಮಾಣ?

ಜನರ ಭಾವನೆಗಳನ್ನು ಗೌರವಿಸುವ ಉದಾರ ಮನಸ್ಸು ಕಾಂಗ್ರೆಸ್ ಪಕ್ಷಕ್ಕಿಲ್ಲ. ಇಲ್ಲದಿದ್ದರೆ ದಶಕಗಳ ಹಿಂದೆಯೇ ರಾಮ ಮಂದಿರ ನಿರ್ಮಾಣವಾಗುತ್ತಿತ್ತು ಎಂದು ಅಮಿತ್ ಶಾ ಗುಡುಗಿದ್ದಾರೆ.