ರಾಂಚಿ(ಡಿ.15): ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮೇಘಾಲಯದಲ್ಲಿ ಪ್ರತಿಭಟನೆ ಜೋರಾಗಿದ್ದು, ಕಾಯ್ದೆಯ ವಿಮರ್ಶಾತ್ಮಕ ಚರ್ಚೆಗೆ ಸಿಎಂ ಕೋನಾರ್ಡ್ ಸಂಗ್ಮಾ ಜೊತೆ ಮಾತುಕತೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಜಾರ್ಖಂಡ್’ನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಯ್ದೆಯ ಪ್ರಯೋಜನಗಳ ಕುರಿತು ಈಶಾನ್ಯ ರಾಜ್ಯಗಳಲ್ಲಿ ಜನಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

CAB: ಈಶಾನ್ಯಕ್ಕೆ ರಾ‘ಜೀವ’ ತುಂಬಿದ ಚಂದ್ರಶೇಖರ್!

ಮೇಘಾಲಯ ಸಿಎಂ ಕೋನಾರ್ಡ್ ಸಂಗ್ಮಾ ಅವರನ್ನು ಭೇಟಿಯಾಗಿ ಕಾಯ್ದೆಯ ವಿಮರ್ಶಾತ್ಮಕ ಚರ್ಚೆ ನಡೆಸುವುದಾಗಿ ಶಾ ಸ್ಪಷ್ಟಪಡಿಸಿದ್ದಾರೆ.

ಪೌರತ್ವ ಕಾಯ್ದೆ ಕಿಡಿ: ಶಿಲ್ಲಾಂಗ್ ಭೇಟಿ ರದ್ದುಗೊಳಿಸಿದ ಅಮಿತ್ ಶಾ!

ಕಾಯ್ದೆಯಲ್ಲಿ ಕೆಲವು ಬದಲಾವಣೆ ಮಾಡಲು ಸಂಗ್ಮಾ ಮನವಿ ಮಾಡಿದ್ದು, ಈ ಕುರಿತು ಕೇಂದ್ರ ಸರ್ಕಾರ ಸಕಾರಾತ್ಮಕ ನಿಲುವು ಹೊಂದಿದೆ ಎಂಧು ಶಾ ಭರವಸೆ ನೀಡಿದರು.

ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಯಿಂದಾಗಿ ಈಶಾನ್ಯ ರಾಜ್ಯಗಳ ಜನತೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ ಅಮಿತ್ ಶಾ, ಕಾಯ್ದೆಯ ಎಲ್ಲ ಆಯಾಮಗಳ ಕುರಿತು ಚರ್ಚೆಗೆ ನಾವು ಸಿದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.

ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!

ಡಿಸೆಂಬರ್ 15ರ ಟಾಪ್ 10 ಸುದ್ದಾಗಾಗಿ ಇಲ್ಲಿ ಕ್ಲಿಕ್ ಮಾಡಿ: