ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ಸಹೋದರಿ ವೈಎಸ್‌ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆ?

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಯಶಸ್ಸಿನ ಹಿನ್ನೆಲೆಯಲ್ಲಿ ವೈಎಸ್ ಶರ್ಮಿಳಾ ಜನವರಿ 4 ರಂದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ತೆಲಂಗಾಣ ಚುನಾವಣೆಗೂ ಮುನ್ನ ಅವರು ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿದ್ದರು.

Andhra Pradesh Chief Minister Jagan Mohan Reddys sister YS Sharmila likely to join Congress on January 4 san

ಹೈದರಾಬಾದ್‌ (ಜ.2):  ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಜನವರಿ 4 ರಂದು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ವೈಎಸ್ ಶರ್ಮಿಳಾ ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಮತ್ತು ಅಧ್ಯಕ್ಷರೂ ಆಗಿದ್ದಾರೆ. ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪ್ರಾಬಲ್ಯವನ್ನು ಕೊನೆಗೊಳಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಈ ನಡುವೆ, ವೈಎಸ್ ಶರ್ಮಿಳಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಪಕ್ಷದ ಎಲ್ಲಾ ನಾಯಕರೊಂದಿಗೆ ಸಭೆ ಕರೆದಿದ್ದು, ಇದರಲ್ಲಿ ಪಕ್ಷ ವಿಲೀನ ಮತ್ತು ಮುಂದಿನ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ತೆಲಂಗಾಣದಲ್ಲಿ ಇತ್ತೀಚೆಗಷ್ಟೇ ಮುಕ್ತಾಯವಾದ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ವೈಎಸ್ ಶರ್ಮಿಳಾ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಘೋಷಣೆ ಮಾಡಿದ್ದರು.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆಯನ್ನು ತಡೆಯಲು ತೆಲಂಗಾಣದಲ್ಲಿ ನವೆಂಬರ್ 30 ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ನಿರಾಕರಿಸಿದ್ದರು. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಅವಕಾಶವಿರುವುದರಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದರು.

ಮೇಕ್‌ ಇನ್‌ ಇಂಡಿಯಾ ಇಂಪ್ಯಾಕ್ಟ್‌, 1.24 ಲಕ್ಷ ಕೋಟಿ ದಾಟಲಿದೆ ಭಾರತದ ಮೊಬೈಲ್‌ ಫೋನ್‌ ರಫ್ತು!

"ಕೆಸಿಆರ್ ಅವರು ತಮ್ಮ 9 ವರ್ಷಗಳ ಅಧಿಕಾರಾವಧಿಯಲ್ಲಿ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಮತ್ತು ಕೆಸಿಆರ್ ಅಧಿಕಾರಕ್ಕೆ ಬರುವುದು ನನಗೆ ಇಷ್ಟವಿಲ್ಲ ಎಂಬ ಏಕೈಕ ಕಾರಣಕ್ಕಾಗಿ. ವೈಎಸ್ಆರ್ ಅವರ ಮಗಳಾಗಿ ನಾನು ಕಾಂಗ್ರೆಸ್‌ ಅಪಾಯವನ್ನು ಎದುರಿಸಲು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ. 55ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಾನು ಕಾಂಗ್ರೆಸ್ ಮತಬ್ಯಾಂಕ್ ಮೇಲೆ ಪರಿಣಾಮ ಬೀರಲಿದ್ದೇನೆ ಎಂದು ಶರ್ಮಿಳಾ ಹೇಳಿದ್ದಾರೆ.

ಆನ್‌ಲೈನ್‌ ಫುಡ್‌ ಬುಕ್ಕಿಂಗ್‌ ಇನ್ನು ದುಬಾರಿ, ಫ್ಲಾಟ್‌ಫಾರ್ಮ್‌ ಫೀ ಏರಿಸಿದ Zomato!

Latest Videos
Follow Us:
Download App:
  • android
  • ios