Asianet Suvarna News Asianet Suvarna News

ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕ ದಾಳಿ: ಓರ್ವ ಯೋಧ ಹುತಾತ್ಮ, ಮುಂದುವರಿದ ಗುಂಡಿನ ಚಕಮಕಿ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ದಾಳಿ ನಡೆದಿದ್ದು, ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, 6 ಯೋಧರಿಗೆ ಗಾಯಗಳಾಗಿವೆ.  

Another terror attack in Jammu Kashmir One soldier martyred, firing between soldier and terrorists continued akb
Author
First Published Jun 12, 2024, 10:13 AM IST

ಶ್ರೀನಗರ:  ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ದಾಳಿ ನಡೆದಿದ್ದು, ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, 6 ಯೋಧರಿಗೆ ಗಾಯಗಳಾಗಿವೆ.  ಜಮ್ಮು ಕಾಶ್ಮೀರದ ದೊಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದು ಒಂದು ಮೂರು ದಿನದೊಳಗೆ ನಡೆದ ಮೂರನೇ ಭಯೋತ್ಪಾದಕ ದಾಳಿಯಾಗಿದೆ.  ನಿನ್ನೆ ತಡರಾತ್ರಿ ದೊಡದಲ್ಲಿರುವ ಆರ್ಮಿ ಬೇಸ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಐವರು ಯೋಧರು ಹಾಗೂ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರೊಬ್ಬರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಒಬ್ಬ ನಾಗರಿಕನನ್ನು ಗಾಯಗೊಳಿಸಿದ್ದರು. ಇದಾದ ನಂತರ ಜಮ್ಮುವಿನ ರೀಯಸಿ ಬಳಿ ವೈಷ್ಣೋದೇವಿಗೆ ಯಾತ್ರೆ ತೆರಳುತ್ತಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಬಸ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಅವಘಡದಲ್ಲಿ ಬಸ್ ಕಂದಕಕ್ಕೆ ಬಿದ್ದು, 9 ಪ್ರಯಾಣಿಕರು ಸಾವನ್ನಪ್ಪಿದ್ದರು.

ಕಥುವಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ವೀರಮರಣವನ್ನಪ್ಪಿದ ಯೋಧ ಸೆಂಟ್ರಲ್ ರಿಸರ್ವ್ ಪೊಲೀಸ್ ಪಡೆಗ ಸೇರಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕನನ್ನು ಕೂಡ ಹತ್ಯೆ ಮಾಡಲಾಗಿದೆ. ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಅವರು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 

ದೊಡ್ಡ ಸೇನಾ ಕ್ಯಾಂಪ್‌ ಮೇಲೆ ಭಯೋತ್ಪಾದಕ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಭಯೋತ್ಪಾದಕರು ಛತ್ತರ್ಗಾಲಾದಲ್ಲಿರುವ, ಪೊಲೀಸರು ಹಾಗೂ ರಾಷ್ಟ್ರೀಯ ರೈಫಲ್ಸ್‌ನ ಜಂಟಿ ಕ್ಯಾಂಪ್‌ ಮೇಲೆ  ತಡರಾತ್ರಿ ದಾಳಿ ನಡೆಸಿದ್ದಾರೆ.  ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.  ಭಯೋತ್ಪಾದನೆಯಿಂದ ಮುಕ್ತವಾಗಿದೆ ಎಂದು ಹೇಳಲ್ಪಡುತ್ತಿರುವ ಜಮ್ಮು ಕಾಶ್ಮೀರವೂ ಭಯೋತ್ಪಾದಕರ ರಾಡಾರ್‌ನಲ್ಲಿದ್ದು,  ಕಳೆದ ಮೂರು ದಿನಗಳಲ್ಲಿ ಮೂರು ಬಾರಿ ಭಯೋತ್ಪಾದಕ ದಾಳಿ ನಡೆದಿದೆ. 

ಗುಜರಾತ್‌ನಲ್ಲಿ 4 ಶಂಕಿತ ಐಸಿಸ್‌ ಉಗ್ರರ ಬಂಧನ: ಭಾರೀ ದಾಳಿಗೆ ಸಂಚು ರೂಪಿಸಿದ್ದ ಉಗ್ರರು

ಕಥುವಾ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಭಾಗಿಯಾಗಿದ್ದಾರೆ. ಅದರಲ್ಲಿ ಒಬ್ಬನ ಹತ್ಯೆಯಾಗಿದೆ. ಮತ್ತೊಬ್ಬನ ಬೇಟೆಯಾಡಲು ಕಥುವಾದ ಹಿರಾನಗರದಲ್ಲಿ ಭದ್ರತಾ ಪಡೆಯವರು ಡ್ರೋನ್ ಬಳಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಭಯೋತ್ಪಾದಕನೊರ್ವ ಹಲವು ಮನೆಗಳಲ್ಲಿ ಕುಡಿಯುವುದಕ್ಕೆ ನೀರು ಕೊಡುವಂತೆ ಕೇಳಿದ್ದು, ಈ ವೇಳೆ ಗ್ರಾಮಸ್ಥರು ಅನುಮಾನಗೊಂಡು ಅಲರ್ಟ್ ಆಗುತ್ತಿದ್ದಂತೆ ಆತ ಗುಂಡಿನ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದಾನೆ. ಆದರೆ ಈ ಭಯೋತ್ಪಾದಕ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂಬ ವರದಿಯನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. 

ಕಾಶ್ಮೀರದ ದೇವಸ್ಥಾನಕ್ಕೆ ತೆರಳಿದ ಭಕ್ತರ ಬಸ್ ಮೇಲೆ ಉಗ್ರರ ದಾಳಿ, 10 ಯಾತ್ರಾರ್ಥಿಗಳು ಸಾವು!

ಕಥುವಾ ಭಯೋತ್ಪಾದಕ ದಾಳಿಯಲ್ಲಿ ಮೂವರು ಸಾವನ್ನಪ್ಪಿ ಅನೇಕರು ಗಾಯಗೊಂಡಿದ್ದಾರೆ ಎಂದು ವದಂತಿ ಹಬ್ಬಿದೆ ಆದರೆ, ಆ ರೀತಿ ಆಗಿಲ್ಲ. ಘಟನೆಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದಾನೆ. ಅದರ ಹೊರತಾಗಿ ನಾಗರಿಕರನ್ನು ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವಿಚಾರ ಕೇವಲ ವದಂತಿ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 

Latest Videos
Follow Us:
Download App:
  • android
  • ios