ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರ್‌ಡಬ್ಲ್ಯುಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಸಿಂಗ್ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ಪಟನಾ: ಬಿಹಾರದಲ್ಲಿ (Bihar) ಮತ್ತೊಂದು ಕಾಮಗಾರಿ ಹಂತದ ಸೇತುವೆ (under-construction small bridge) ಕುಸಿತವಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಕುಸಿತವಾಗುತ್ತಿರುವ ಮೂರನೇ ಸೇತುವೆ ಇದಾಗಿದೆ. ಶನಿವಾರ ಸೀವಾನ್ ಜಿಲ್ಲೆಯ ಕಾಲುವೆ ಮೇಲೆ ನಿರ್ಮಿಸಲಾಗಿದ್ದ, ಸೇತುವೆ ನೀರಿನ ರಭಸಕ್ಕೆ ಕುಸಿದಿತ್ತು. ಇಂದು ಪೂರ್ವ ಚಂಪಾರಣ್ ಜಿಲ್ಲೆಯ (East Champaran district) ಗೋರಸನ ವ್ಯಾಪ್ತಿಯ ಮೋತಿಹಾರಿ ಎಂಬಲ್ಲಿ ಕಾಮಗಾರಿ ಹಂತದ ಚಿಕ್ಕ ಸೇತುವೆ ನೆಲ ಕಚ್ಚಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಒಂದೂವರೆ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಸೇತುವೆ
ರಾಜ್ಯ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮೋತಿಹಾರಿ ಎಂಬಲ್ಲಿ ಕಾಲುವೆ ಮೇಲೆ 16 ಮೀಟರ್ ಉದ್ದದ ಸೇತುವೆ ನಿರ್ಮಾಣ ಮಾಡಲಾಗುತ್ತಿತ್ತು. ಈ ಸೇತುವೆ 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿತ್ತು ಎಂದು ಅಧಿಕಾರಿಗಹಳು ಮಾಹಿತಿ ನೀಡಿದ್ದಾರೆ. ಸೇತುವೆ ಕುಸಿತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಇಲಾಖೆಗೆ ತನಿಖೆಗೆ ಆದೇಶ ನೀಡಿದೆ ಎಂದು ವರದಿಯಾಗಿದೆ.
ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳಿಂದ ಪರಿಶೀಲನೆ
ಇದೊಂದು ಗಂಭೀರ ವಿಷಯವಾಗಿದ್ದು, ಇಲಾಖೆ ಪ್ರತಿಯೊಂದು ಮಾಹಿತಿಯನ್ನು ಕೇಳಿದೆ. ಸಮಗ್ರವಾದ ತನಿಖೆಗೆ ಆದೇಶ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರ್‌ಡಬ್ಲ್ಯುಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಸಿಂಗ್ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ಇತ್ತ ವಿಷಯ ತಿಳಿಯುತ್ತಿದ್ದಂತೆ ಸೇತುವೆ ಕುಸಿತ ಸ್ಥಳಕ್ಕೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆ ಕಾಮಗಾರಿ ನಡೆಸುತ್ತಿದ್ದ ಅಧಿಕಾರಿಗಳು ಹಾಗೂ ಕಾರ್ಮಿಕರಿಂದಲೂ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಉದ್ಘಾಟನೆಗೆ ದಿನ ಮೊದಲು ಕುಸಿದು ಬಿತ್ತು 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆ
ಸೇತುವೆಯ ಕೆಲ ಪಿಲ್ಲರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಪೊಲೀಸರು ಸಹ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಸಹ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದುಕೊಂಡಿದ್ದು, ತನಿಖೆ ಆರಂಭವಾಗಿದೆ. ಸೇತುವೆ ಕುಸಿತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಜಿಲ್ಲಾಧಿಕಾರಿಗಳು ಸುದ್ದಿಸಂಸ್ಥೆಗೆ ಹೇಳಿದ್ದಾರೆ.
ಸೀವಾನ್ ಜಿಲ್ಲೆಯಲ್ಲಿಯೂ ಸೇತುವೆ ಕುಸಿತ
ಸೀವಾನ್ ಜಿಲ್ಲೆಯಲ್ಲಿಯೂ ಇದೇ ರೀತಿಯ ಘಟನೆ ನಡೆದಿತ್ತು. ಕೆಲ ವರ್ಷಗಳ ಹಿಂದೆ ಕಾಲುವೆ ಮೇಲೆ ನಿರ್ಮಿಸಲಾಗಿದ್ದ, 180 ಮೀಟರ್ ಉದ್ದದ ಸೇತುವೆ ಕುಸಿದಿತ್ತು. ಸೇತುವೆ ಕುಸಿಯುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸೇತುವೆ ನಿರ್ಮಾಣದ ವೇಳೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೇತುವೆ ಕುಸಿದಿದೆ. ಈ ಸಂಬಂಧ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದರು.
5 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ದೇಶದ ಅತೀ ಉದ್ದದ ಸೀ ಬ್ರಿಡ್ಜ್ ಅಟಲ್ ಸೇತುವಿನಲ್ಲಿ ಬಿರುಕು
