* ಜಂತರ್ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ * ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ನಾಯಕ ಸೇರಿ 6 ಮಂದಿ ಸೆರೆ
ನವದೆಹಲಿ(ಆ.11): ಜಂತರ್ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ವಕ್ತಾರ ಅಶ್ವಿನಿ ಉಪಾಧ್ಯಾಯ ಹಾಗೂ ಇತರೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ಜಂತರ್‌ಮಂತರ್‌ನಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದಾಗ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಲಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆದ ಬೆನ್ನಿಗೇ ಪೊಲೀಸರು ಬಿಜೆಪಿ ವಕ್ತಾರರಾದ ಉಪಾಧ್ಯಾಯ ಸೇರಿ ಆರು ಮಂದಿಯನ್ನು ಬಂಧಿಸಿದ್ದಾರೆ.
ಉಪಾಧ್ಯಾಯ ನಡೆಸಿದ ಸಭೆಯಲ್ಲೇ ಈ ಘೋಷಣೆಗಳನ್ನು ಕೂಗಲಾಗಿತ್ತು. ಇದು ಭಾರೀ ಟೀಕೆ ಟಿಪ್ಪಣಿಗೆ ಕಾರಣವಾಗಿತ್ತು.
