ಭಾರತೀಯ ಸೇನಾಪಡೆ ಚಲಿಸುತ್ತಿದ್ದ ಟ್ರಕ್ ವೊಂದು  ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ16 ಯೋಧರು ಹುತಾತ್ಮರಾಗಿರುವ ದಾರುಣ ಘಟನೆ ನಡೆದಿದೆ.  ಘಟನೆಯಲ್ಲಿ ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ.

ಸಿಕ್ಕಿಂ (ಡಿ.23): ಭಾರತೀಯ ಸೇನಾಪಡೆ ಚಲಿಸುತ್ತಿದ್ದ ಟ್ರಕ್ ವೊಂದು ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ16 ಯೋಧರು ಹುತಾತ್ಮರಾಗಿರುವ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ. ತವಾಂಗ್ ಬರುವಾಗ ಝೀಮಾ ಪ್ರದೇಶದಲ್ಲಿ ಪ್ರಯಾಣ ಬೆಳೆಸುತ್ತಿದ್ದ ಸೇನಾ ವಾಹನ ತಿರುವು ಪಡೆಯುವಾಗ ತೀವ್ರ ಕಡಿದಾದ ಪ್ರದೇಶದಲ್ಲಿ ಕಂದಕಕ್ಕೆ ಜಾರಿ ಬಿದ್ದು ದುರಂತ ಸಂಭವಿಸಿದ್ದು, ಸೇನಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ವರದಿ ತಿಳಿಸಿದೆ. ಯೋಧರೆಲ್ಲರೂ ಮರಳಿ ಗೌಹಾಟಿಗೆ ಬರುತ್ತಿದ್ದರು. ಹುತಾತ್ಮರಾದವರಲ್ಲಿ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 13 ಯೋಧರು ಎಂದು ತಿಳಿದುಬಂದಿದೆ.

ರಕ್ಷಣಾ ಸಚಿವರ ಸಂತಾಪ: ಈ ದುರಂತದ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆ ತುಂಬಾ ನೋವಿನ ಸಂಗತಿಯಾಗಿದೆ. ಹುತಾತ್ಮರಾದ ಯೋಧರ ಸೇವೆಯನ್ನು ಸದಾ ಸ್ಮರಿಸುತ್ತದೆ. ಹುತಾತ್ಮರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಗಾಯಳುಗಳು ಶೀಘ್ರ ಗುಣಮುಖರಾಗಲು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.


Scroll to load tweet…