ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಬಂಧನ ಕಾನೂನು ಬಾಹಿರವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಕಳೆದ ವರ್ಷ ಅಕ್ಟೋಬರ್ 3 ರಂದು ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ದೆಹಲಿ ಪೊಲೀಸರು ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಬಂಧಿಸಿದ್ದರು
ನವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಬಂಧನ ಕಾನೂನು ಬಾಹಿರವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಕಳೆದ ವರ್ಷ ಅಕ್ಟೋಬರ್ 3 ರಂದು ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ದೆಹಲಿ ಪೊಲೀಸರು ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಬಂಧಿಸಿದ್ದರು. ಆದರೆ ಇವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಬಂಧಿಸಿರುವುದು ಕಾನೂನುಬಾಹಿರ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ಕೂಡಲೇ ಅವನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ದ್ವಿಸದಸ್ಯ ಪೀಠ ಹೇಳಿದೆ. ಅಲ್ಲದೇ ಬಂಧನ ವೇಳೆ ರಿಮಾಂಡ್ ಕಾಪಿಯನ್ನು ಕೂಡ ಕೊಟ್ಟಿಲ್ಲ ಇದು ಅವರ ಬಂಧನವನ್ನು ರದ್ದುಪಡಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ನ್ಯೂಸ್‌ಕ್ಲಿಕ್ ಅಕ್ರಮ ಹಣ ವರ್ಗಾವಣೆ ಕೇಸ್: ಚೀನಾದಲ್ಲಿರೋ ಉದ್ಯಮಿ ನೆವಿಲ್ಲೆ ರಾಯ್ ಸಿಂಘಮ್‌ಗೆ ಇ.ಡಿ. ಸಮನ್ಸ್
ಭಾರತದ ಸಾರ್ವಭೌಮತೆ ನಾಶಕ್ಕೆ ಚೀನಾದಿಂದ ನ್ಯೂಸ್‌ಕ್ಲಿಕ್‌ಗೆ ಹಣ: ಎಫ್‌ಐಆರ್
