370ನೇ ವಿಧಿ ರದ್ದು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ತೀರ್ಪಿನ ವಿರುದ್ಧ ಮೇಲ್ಮನವಿ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ವಿಧಿ 370ರನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ್ದು ಸರಿ ಇದೆ ಎಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅವಾಮಿ ನ್ಯಾಷನಲ್‌ ಕಾನ್ಫರೆನ್ಸ್‌ ಹೇಳಿದೆ.

Article 370 Awami National Conference mulling filing review petition before supreme court gow

ಶ್ರೀನಗರ (ಡಿ.29): ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ವಿಧಿ 370ರನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ್ದು ಸರಿ ಇದೆ ಎಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅವಾಮಿ ನ್ಯಾಷನಲ್‌ ಕಾನ್ಫರೆನ್ಸ್‌ ಹೇಳಿದೆ. ಈ ಬಗ್ಗೆ ಮಾತನಾಡಿದ ಎಎನ್‌ಸಿ ಹಿರಿಯ ಉಪಾಧ್ಯಕ್ಷ ಮುಜ್ಜಾಫರ್‌ ಶಾ,‘ ತೀರ್ಪು ಹಲವು ದೋಷಗಳಿಂದ ಕೂಡಿದೆ ಎಂದು ಕಾನೂನು ಪರಿಣಿತರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ನಾವು ಈ ತೀರ್ಪನ್ನು ಮರುಪರಿಶೀಲಿಸಲು ಶೀಘ್ರವೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದೇವೆ. ಅದಕ್ಕಾಗಿ ನಮ್ಮ ತಂಡ ತಯಾರಿ ನಡೆಸುತ್ತಿದೆ. ಬಿಜೆಪಿ ಸರ್ಕಾರದ ನಿಷೇಧ ಕ್ರಮವನ್ನು ಜಮ್ಮು ಕಾಶ್ಮೀರ ಜನತೆ ಒಪ್ಪಿಲ್ಲ. ನಾವು ಇನ್ನು ಈ ವಿಷಯವನ್ನು ಮುಗಿಸಿಲ್ಲ. ಇನ್ನು ಹೋರಾಡುತ್ತೇವೆ’ ಎಂದು ಹೇಳಿದ್ದಾರೆ.

ಸಂಬಂಧವನ್ನು ಮುಚ್ಚಿಟ್ಟು ಕಸಿನ್‌ ಜೊತೆ ಗುಟ್ಟಾಗಿ ಮದುವೆಯಾದ ಭಾರತೀಯ ಚಿತ್ರರಂಗದ ಶ್ರೇಷ್ಠ ತಾರೆ

ಕೇಂದ್ರ ಸರ್ಕಾರ 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ (ಆರ್ಟಿಕಲ್ 270) ರದ್ದು ಮಾಡಿ ಐತಿಹಾಸ ನಿರ್ಧಾರವನ್ನು ಘೋಷಿಸಿತ್ತು. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿತ್ತು. ಇದು ಕೋಲಾಹಲವನ್ನೇ ಸೃಷ್ಟಿಸಿತ್ತು. ಹಲವು ವಿಪಕ್ಷಗಳು ಕೇಂದ್ರದ ನಿರ್ಧಾರವನ್ನು ವಿರೋಧಿಸಿತ್ತು. ಕೇಂದ್ರದ ಸರ್ಕಾರದ ನಿರ್ಧಾರದ ವಿರುದ್ದ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿತ್ತು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರದ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಡಿಸೆಂಬರ್ 11ಕ್ಕೆ  ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು. 370ನೇ ವಿಧಿ ತಾತ್ಕಾಲಿಕ ನಿಬಂಧನೆಯಾಗಿತ್ತು ಎಂದು ಪಂಚ ಸದಸ್ಯ ಸಾಂವಿಧಾನಿಕ ಪೀಠ ಹೇಳಿತ್ತು.

370ನೇ ವಿಧಿಯು ಜಮ್ಮು ಮತ್ತು ಕಾಶ್ಮೀರವನ್ನು ಒಕ್ಕೂಟದೊಂದಿಗೆ ಸಾಂವಿಧಾನಿಕ ಏಕೀಕರಣಕ್ಕಾಗಿ ಉದ್ದೇಶಿಸಲಾಗಿತ್ತು ಮತ್ತು ಅದು ವಿಭಜನೆಗಾಗಿ ಅಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು ಮತ್ತು 370ನೇ ವಿಧಿ ಅಸ್ತಿತ್ವದಲ್ಲಿಲ್ಲ ಎಂದು ರಾಷ್ಟ್ರಪತಿ ಘೋಷಿಸಬಹುದು ಎಂದೂ ಹೇಳಿತ್ತು. ಪ್ರಮುಖವಾಗಿ, 2024 ರ ಸೆಪ್ಟೆಂಬರ್ 30 ರೊಳಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಚುನಾವಣೆಗಳನ್ನು ನಡೆಸಲು ಕೇಂದ್ರ ಚುನಾವಣಾ ಆಯೋಗವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ನಿರ್ದೇಶಿಸುತ್ತೇವೆ ಎಂದು ಸಿಜೆಐ ತೀರ್ಪು ಓದುವಾಗ ಹೇಳಿದ್ದರು.

ನಿರುದ್ಯೋಗಿಗಳಿಗೆ 2024ರ ವರ್ಷ ಲಕ್‌, ಭಾರತದಲ್ಲಿ 3.9 ಮಿಲಿಯನ್ ಉದ್ಯೋಗ ಸೃಷ್ಟಿ

2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿತ್ತು. ಇದೇ ವೇಳೆ ಕಾಶ್ಮೀರವನ್ನು ವಿಭಜಿಸಿ, ಪ್ರತ್ಯೇಕ ಲಡಾಖ್‌ ಕೇಂದ್ರಾಡಳಿತ ಪ್ರದೇಶವನ್ನೂ ಸೃಷ್ಟಿಸಲಾಗಿತ್ತು ಹಾಗೂ ಲಡಾಖ್‌ ಮತ್ತು ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶ ಎಂದು ಸಾರಲಾಗಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರದ ಈ ಕ್ರಮದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ 23 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ 16 ದಿನ ಇವುಗಳ ವಿಚಾರಣೆ ನಡೆಸಿತ್ತು. ಸುದೀರ್ಘ ವಾದ-ಪ್ರತಿವಾದದ ಬಳಿಕ ನ್ಯಾಯಪೀಠ ಸೆಪ್ಟೆಂಬರ್ 5ರಂದು ತೀರ್ಪು ಕಾಯ್ದಿರಿಸಿತ್ತು. ಇದರ ಅಂತಿಮ ತೀರ್ಪು ಡಿಸೆಂಬರ್ 11ಕ್ಕೆ ಪ್ರಕಟಿಸಿತ್ತು.

 

Latest Videos
Follow Us:
Download App:
  • android
  • ios