Asianet Suvarna News Asianet Suvarna News

ಹಿಮಾಚಲ ಬಿರುಗಾಳಿ ನಡುವೆ ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ಶಾಕ್, ಪಕ್ಷ ತೊರೆದ ರಾಜ್ಯಾಧ್ಯಕ್ಷ!

ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರವಾಗಿದೆ. ಸಿಎಂ ರಾಜೀನಾಮೆ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಅಸ್ಸಾಂ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎದ್ದಿದೆ. ಅಸ್ಸಾಂ ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿಢೀರ್ ಪಕ್ಷಕ್ಕೆ ಹಾಗೂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 

Assam Congress President Rana Gowswami resign from party and post likely to join BJP says Report ckm
Author
First Published Feb 28, 2024, 1:43 PM IST

ಗುವ್ಹಾಟಿ(ಫೆ.28) ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಆಡಳಿತರೂಢ ಕಾಂಗ್ರೆಸ್‌ನಲ್ಲಿ ಅಲ್ಲೋಲಕಲ್ಲೋವಾಗಿದೆ. ತೀವ್ರ ರಾಜಕೀಯ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಅಸ್ಸಾಂ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎದ್ದಿದೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಣಾ ಗೋಸ್ವಾಮಿ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇದೀಗ ರಾಣಾ ಗೋಸ್ವಾಮಿ ಬಿಜೆಪಿ ಸೇರಿಕೊಳ್ಳಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.

ಮೂರು ಸಾಲುಗಳ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ಗೆ ಕಳುಹಿಸಿದ್ದಾರೆ. ನಾನು ಈ ಮೂಲಕ ನಿಮ್ಮಲ್ಲಿ ವಿನಿಂತಿಸಿಕೊಳ್ಳುವುದೇನೆಂದರೆ, ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತಿತ್ತಿದ್ದೇನೆ. ಧನ್ಯವಾದಗಳು ಎಂದು ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ?

ಭಾರತೀಯ ಜನತಾ ಪಕ್ಷ ಸೇರಿಕೊಳ್ಳಲು ರಾಣಾ ಗೋಸ್ವಾಮಿ ರಾಜೀನಾಮೆ ನೀಡಿದ್ದಾರೆ ಅನ್ನೋ ಮಾಹಿತಿಗಳು ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಅಸ್ಸಾಂ ಮುಖ್ಯಮಂತ್ರಿ ಹಾಗೂ ಈಶಾನ್ಯ ರಾಜ್ಯಗಳ ಬಿಜೆಪಿ ಪ್ರಬಲ ನಾಯಕ ಹಿಮಂತ ಬಿಸ್ವಾ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ರಾಣಾ ಗೋಸ್ವಾಮಿಯಂತ ಪ್ರಬಲ ನಾಯಕರು ಬಿಜೆಪಿಗೆ ಆಗಮಿಸುವುದಾದರೆ ಸ್ವಾಗತ ಎಂದಿದ್ದಾರೆ. ರಾಣಾ ಗೋಸ್ವಾಮಿ ರಾಜಕೀಯ ಜೀವನವನ್ನು ನೋಡಿದ್ದೇವೆ. ಉತ್ತಮ ನಾಯಕನಾಗಿ ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡಿದ್ದಾರೆ. ಜೋಹ್ರತ್ ಕ್ಷೇತ್ರದಲ್ಲಿ ರಾಣಾ ಗೋಸ್ವಾಮಿಯ ರಾಜಕೀಯ ಜೀವನ ಎಲ್ಲರಿಗೂ ಮಾದರಿಯಾಗಿದೆ. ಈ ನಾಯಕ ಬಿಜಜೆಪಿ ಸೇರಲು ಇಚ್ಚಿಸಿದರೆ ನಮ್ಮ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಹಿಮಾಚಲ ಪ್ರದೇಶದಲ್ಲಿ ಆಡಳಿತ ಉಳಿಸಿಕೊಳ್ಳುವ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಅಸ್ಸಾಂನಲ್ಲಿ ವಿಕೆಟ್ ಪತನವಾಗಿದೆ. ಹಿಮಾಚಲ ಪ್ರದೇಶದಲ್ಲಿ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ ವರದಿಯನ್ನು ಸಿಎಂ ಸಲಹೆಗಾರ ತಳ್ಳಿ ಹಾಕಿದ್ದಾರೆ. ಸ್ವತಃ ಸಿಎಂ ಸುಖ್ವಿಂದರ್ ಸಿಂಗ್ ಸುಖು ಈ ಕುರಿತು ಪ್ರತಿಕ್ರಿಯೆನೀಡಿದ್ದಾರೆ. ನಾನು ಹೋರಾಟಗಾರ, ರಾಜೀನಾಮೆ ನೀಡಲ್ಲ. ಅವಧಿ ಪೂರ್ಣಗೊಳಿಸುತ್ತೇನೆ ಎಂದಿದ್ದಾರೆ. ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸರ್ಕಾರ ಬೀಳುವ ಭೀತಿಯ ನಡುವೆ 15 ಬಿಜೆಪಿ ಶಾಸಕರನ್ನು ಸದನದಿಂದ ಉಚ್ಚಾಟಿಸಿದ ಸ್ಪೀಕರ್

Follow Us:
Download App:
  • android
  • ios