140ಕ್ಕೂ ಹೆಚ್ಚು ಹೆಕ್ಟೇರ್ ಅರಣ್ಯಭೂಮಿ ಒತ್ತುವರಿ ಮಾಡಿದ ಬಾಂಗ್ಲಾ ಮೂಲದ ವಲಸೆ ಮುಸ್ಲಿಮರು ಮನೆ, ಮಸೀದಿ ನಿರ್ಮಾಣ ಮಾಡಿದ್ದಾರೆ. ಇದೀಗ ತೆರವು ಕಾರ್ಯಾಚರಣೆ ವೇಳೆ ಭಾರಿ ಘರ್ಷಣೆ ನಡೆದಿದ್ದು, ಓರ್ವ ಮೃತಪಟ್ಟರೆ, ಅರಣ್ಯಾಧಿಕಾರಿ, ಪೊಲೀಸರು ಸೇರಿ ಹಲವರು ಗಾಯಗೊಂಡಿದ್ದಾರೆ.
ಗುವ್ಹಾಟಿ (ಜು.17) ದೇಶದ ಹಲವು ರಾಜ್ಯಗಳಲ್ಲಿ ಒತ್ತುವರಿ ಭೂಮಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಪೈಕಿ ಅಸ್ಸಾಂನಲ್ಲಿ ನಡೆಯುತ್ತಿರುವ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಗೋಲಪಾರ ಜಿಲ್ಲೆಯ ಪೈಕಾನ್ ಮೀಸಲು ಅರಣ್ಯ ಪ್ರದೇಶದಲ್ಲಿ ಆಗಿದ್ದ ಒತ್ತುವರಿಯನ್ನು ಅರಣ್ಯಾಧಿಕಾರಿಗಳು ಪೊಲೀಸರ ಸಹಾಯದೊಂದಿದೆ ತೆರವು ಮಾಡಲು ಮುಂದಾಗಿದ್ದಾರೆ. ಬಾಂಗ್ಲಾ ಮೂಲದ ವಲಸೆ ಮುಸ್ಲಿಮರು ಬಹುತೇಕ ಮೀಸಲು ಅರಣ್ಯ ಒತ್ತುವರಿ ಮಸೀದಿ, ಮನೆ ಸೇರಿದಂತೆ ಹಲವು ಕಟ್ಟಡ ನಿರ್ಮಾಣ ಮಾಡಿದ್ದಾರೆ. ಅಕ್ರವಾಗಿ ನಿರ್ಮಾಣಗೊಂಡಿರುವ ಮನೆ, ಮಸೀದಿ ಸೇರಿದಂತೆ ಕಟ್ಟಡಗಳ ತೆರವು ಕಾರ್ಯಾಚರಣೆ ವೇಳೆ ಹಿಂಸಾಚಾರ ನಡೆದಿದೆ. ಅರಣ್ಯಾಧಿಕಾರಿಗಳು, ಪೊಲೀಸರ ಮೇಲೆ ವಲಸೆ ಮುಸ್ಲಿಮರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಹಲವು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದರೆ, ಪೊಲೀಸರು ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರ ನಡುವೆ ದಾಳಿ ಪ್ರತಿದಾಳಿಯಲ್ಲಿ ಓರ್ವ ಮೃತಪಟ್ಟಿದ್ದಾನೆ.
140 ಹೆಕ್ಟೇರ್ ಒತ್ತುವರಿ ತೆರವು
ಪೈಕಾನ್ ಮೀಸಲು ಅರಣ್ಯದ ಬಹುತೇಕ ಭಾಗವನ್ನು ಒತ್ತುವರ ಮಾಡಿಕೊಳ್ಳಲಾಗಿದೆ. ಮೀಸಲು ಅರಣ್ಯ ಎಂಬುದು ಎಲ್ಲಾ ದಾಖಲೆಯಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಇಲ್ಲಿ ಮನೆ, ಕಟ್ಟಡ, ಮಸೀದಿ ಸೇರಿದಂತೆ ಯಾವುದೇ ನಿರ್ಮಾಣಕ್ಕೆ ಅವಕಾಶವಿಲ್ಲ. ಇಲ್ಲಿ ರಸ್ತೆ ನಿರ್ಮಾಣಕ್ಕೂ ಅವಕಾಶವಿಲ್ಲ. ಆದರೆ ಸ್ಥಳೀಯ ಕೆಲ ಮುಖಂಡರು ಸೇರಿದಂತೆ ಕೆಲ ಅಧಿಕಾರಿಗಳ ನೆರವಿನಿಂದ ಅಕ್ರಮವಾಗಿ ಇಲ್ಲಿ ಕಟ್ಟಡಗಳು ತಲೆ ಎತ್ತಿದೆ. ಮೀಸಲು ಅರಣ್ಯದ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಈಗಾಗಲೇ 140 ಹೆಕ್ಟೇರ್ ಪ್ರದೇಶವನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆದರೆ ಇನ್ನೂ ಇಷ್ಟೇ ಪ್ರದೇಶದಲ್ಲಿ ಒತ್ತುವರಿಯಾಗಿರುವವ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ ನಡೆದಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.
ಹಲವು ಅರಣ್ಯಾಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರ. ವಲಸೆ ಮುಸ್ಲಿಮರು ಅರಣ್ಯಾಧಿಕಾರಿಗಳು, ಪೊಲೀಸರು ಮೇಲೆ ದಾಳಿ ನಡೆಸಿದ್ದಾರೆ. ಕಲ್ಲು, ಬಡಿಗೆ ಸೇರಿದಂತೆ ಸಿಕ್ಕ ಸಿಕ್ಕ ವಸ್ತುಗಳ ಮೂಲಕ ದಾಳಿ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ದಾಳಿ ತೀವ್ರಗೊಂಡಿದೆ.ಸಾವಿರಾರು ಮಂದಿ ಆಗಮಿಸಿ ದಾಳಿ ನಡೆಸಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ಗಾಳಿಯಲ್ಲಿ ಗುಂಡು
ಪರಿಸ್ಥಿತಿ ಕೈಮೀರುತ್ತಿದ್ದಂತೆ ಹೆಚ್ಚಿನ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿದೆ. ಮೈಕ್ ಮೂಲಕ ಸ್ಥಳೀಯರು ತಕ್ಷಣವೇ ದಾಳಿ ನಿಲ್ಲಿಸಿ ಶಾಂತವಾಗುವಂತೆ ಸೂಚನೆ ನೀಡಲಾಗಿದೆ. ಆದರೆ ದಾಳಿ ತೀವ್ರಗೊಂಡಿದೆ. ಹೀಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ಪೊಲೀಸರು ಹಾಗೂ ಸ್ಥಳೀಯರ ನಡುವೆ ಘರ್ಷಣೆ ಜೋರಾಗಿದೆ. ಈ ದಾಳಿ ಪ್ರತಿದಾಳಿಯಲ್ಲಿ ಓರ್ವ ಸ್ಥಳೀಯ ಮೃತಪಟ್ಟಿದ್ದಾನೆ. ಇನ್ನು ಕೆಲ ಸ್ಥಳೀಯರು ಗಾಯಗೊಂಡಿದ್ದಾರೆ. ಇತ್ತ ಸ್ಥಳೀಯರು ನಡೆಸಿದ ದಾಳಿಯಲ್ಲಿ ಹಲವು ಪೊಲೀಸರು, ಅರಣ್ಯಾಧಿಕಾರಿಗಳು ಗಾಯಗೊಂಡಿದ್ದಾರೆ. ಸದ್ಯ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಂಡಿದೆ.
