ನದಿಗಳ ಪ್ರಮಾಣವು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇದೇ ಪರಿಸ್ಥಿತಿ ಮುಂದುವರೆಯುವುದರಿಂದ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್‌ ಜಾರಿ ಮಾಡಿದ್ದು, ಜನರಿಗೆ ಎಚ್ಚರದಿಂದಿರಲು ಸೂಚಿಸಿದೆ.

ಗುವಾಹಟಿ (ಜೂನ್ 25, 2023): 1 ವಾರ​ದಿಂದ ಮಳೆ ಪೀಡಿ​ತ​ವಾ​ಗಿ​ರುವ ಅಸ್ಸಾಂನಲ್ಲಿ ಪ್ರವಾಹ ಸ್ಥಿತಿ ಶನಿ​ವಾ​ರವೂ ಮುಂದು​ವ​ರಿ​ದಿದೆ. 16 ಜಿಲ್ಲೆ​ಗ​ಳ 4.88 ಲಕ್ಷ ಜನರು ಇದ​ರಿಂದ ಬಾಧಿ​ತ​ರಾ​ಗಿ​ದ್ದಾ​ರೆ.

ನದಿಗಳ ಪ್ರಮಾಣವು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇದೇ ಪರಿಸ್ಥಿತಿ ಮುಂದುವರೆಯುವುದರಿಂದ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್‌ ಜಾರಿ ಮಾಡಿದ್ದು, ಜನರಿಗೆ ಎಚ್ಚರದಿಂದಿರಲು ಸೂಚಿಸಿದೆ. ಕೆಲವು ಜಿಲ್ಲೆಗಳಲ್ಲಿ ನದಿಗಳಿಗೆ ಕಟ್ಟಿದ ಬಾಂದಾರಗಳು ಹಾನಿಗೊಂಡಿದ್ದು, ಇದರ ಪರಿಣಾಮ ಕಳೆದ 24 ಗಂಟೆ ಅವಧಿಯಲ್ಲಿ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ.

ಮರಳುಗಾಡು ರಾಜಸ್ಥಾನದಲ್ಲಿ ಮಳೆಯೋ ಮಳೆ: ಮಲೆನಾಡಿನಲ್ಲಿ ಮಳೆಯೇ ಇಲ್ಲ.. ಇದೆಂತಾ ವಿಚಿತ್ರ ಅಲ್ವಾ?

ರಾಜ್ಯದಲ್ಲಿ ಪ್ರವಾಹ ಹಾಗೂ ಭಾರಿ ಮಳೆಯಿಂದಾಗಿ 16 ಜಿಲ್ಲೆಯಲ್ಲಿ ಸುಮಾರು 4.88 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅವರನ್ನು 140 ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗುತ್ತಿದೆ. ಇನ್ನು 75 ಕೇಂದ್ರಗಳನ್ನು ತೆರೆಯಲಾಗುತ್ತಿದೆ. 

ಎನ್‌ಡಿಆರ್‌ಎಫ್‌ ಸೇರಿದಂತೆ ಹಲವು ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದೆ. ಪ್ರವಾಹ ಹಾಗೂ ಭುಕುಸಿತಕ್ಕೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ: ಅಮೆರಿಕದಲ್ಲಿ ಮೋದಿಗೆ ಇಂದ್ರದೇವನ ಆಶೀರ್ವಾದ: ಮಳೆಯ ಆರ್ಭಟದ ನಡುವೆಯೂ ರಾಷ್ಟ್ರಗೀತೆಗೆ ‘ನಮೋ’ ಗೌರವ