* ಬಹುನಿರೀಕ್ಷಿತ ಪಂಚರಾಜ್ಯ ಚುನಾವಣೆ ಫಲಿತಾಂಶ * ಮತ ಎಣಿಕೆ ಆರಂಭ, ಉತ್ತರ ಪ್ರದೇಶದಲ್ಲಿ ಭಾರೀ ಅಂತರದ ಮುನ್ನಡೆ ಕಾಯ್ದುಕೊಂಡ ಬಿಜೆಪಿ* ಗೋವಾದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ
ನವದೆಹಲಿ(ಮಾ.10): ಬಹುನಿರೀಕ್ಷಿಯತ ಪಂಚರಾಜ್ಯ ಚುನಾವಣೆಯ ಫಲಿತಾಂಶ ಇಂದು, ಗುರುವಾರ ಮಧ್ಯಾಹ್ನ ಬಹುತೇಕ ಸಿಗಲಿದೆ. ಈಗಾಗಲೇ ಮತ ಎಣಿಕೆ ಆರಂಭಗೊಂಡಿದ್ದು, ಆರಂಭಿಕ ಟ್ರೆಂಡ್ ಅನ್ವಯ ಬಿಜೆಪಿ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಪಂಜಾಬ್‌ನಲ್ಲಿ ಮತಗಟ್ಟೆ ಸಮೀಕ್ಷೆಗಳು ನುಡಿದ ಭವಿಷ್ಯದಂತೆ ಆಮ್ ಆದ್ಮಿ ಮುನ್ನಡೆ ಕಾಯ್ದುಕೊಂಡರೆ, ಗೋವಾದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಲಕ್ಷಣಗಳು ಗೋಚರಿಸಿವೆ. .
ಹೌದು ಬೆಳಗ್ಗೆ 9 ರವರೆಗೆ ಲಭ್ಯವಾದ ಫಲಿತಾಂಶದನ್ವಯ ಯಾವ ರಾಜ್ಯದಲ್ಲಿ ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ? ಇಲ್ಲಿದೆ ವಿವರ
ಉತ್ತರ ಪ್ರದೇಶ: 403 ವಿಧಾನಸಭಾ ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಯೋಗಿ ನೇತೃತ್ವದ ಬಿಜೆಪಿ 160 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, ಎಸ್‌ಪಿ 115 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿಗೆ ಭಾರೀ ಫೈಟ್ ಕೊಟ್ಟಿದೆ. ಅತ್ತ ಕಾಂಗ್ರೆಸ್ ಹಾಗೂ ಮಾಯಾವತಿ ನೇತೃತ್ವದ ಬಿಎಸ್‌ಪಿ ತನ್ನ ಸ್ಥಾನಗಳನ್ನು ಮತ್ತಷ್ಟು ಕಳೆದುಕೊಂಡಿವೆ. ಕಾಂಗ್ರೆಸ್ ಕೇವಲ 03 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಎಸ್‌ಪಿ 05cಹಾಗೂ ಇತರರು 2 ಕ್ಷೇತ್ರಗಳಲ್ಲಿ ಮುfನನಡೆ ಕಾಯ್ದುಕೊಂಡಿವೆ.
ಪಂಜಾಬ್ ಫೈಟ್: ಇನ್ನು ಕಾಂಗ್ರೆಸ್ ಸರ್ಕಾರವಿದ್ದ ಪಂಜಾಬ್‌ನಲ್ಲಿ ಈ ಬಾರಿ ಮತಗಟ್ಟೆ ಸಮೀಕ್ಷೆಗಳು ನುಡಿದ ಭವಿಷ್ಯ ನಿಜವಾಗುತ್ತಿದೆ ಎಂದು ಆರಂಭಿಕ ಟ್ರೆಂಡ್ ಹೇಳಿದೆ. ಹೌದು ಒಟ್ಟು 117 ಕ್ಷೇತ್ರಗಳಿರುವ ಪಂಜಾಬ್‌ನಲ್ಲಿ, ಅಖಾಡಕ್ಕೆ ಮೊದಲ ಬಾರಿ ಇಳಿದಿದ್ದ ಅರವಿಂದ ಕೇಜ್ರೀವಾಲ್ ನೇತೃತ್ವದ ಅರವಿಂದ ಕೇಜ್ರೀವಾಲ್ 44 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 31, ಬಿಜೆಪಿ 06 ಹಾಗೂ ಇತರೆ 14 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಇತರರಲ್ಲಿ ಶಿರೋಮಣಿ ಅಕಾಲಿ ದಳದ ಪಾಲು ಹೆಚ್ಚಿದೆ ಎಂಬುವುದು ಉಲ್ಲೇಖನೀಯ.
ಗೋವಾ ಚುನಾವಣೆ: ಗೋವಾದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಫೈಟ್ ಕಂಡು ಬಂದಿದೆ. ಒಟ್ಟು 40 ಕ್ಷೇತ್ರಗಳಿರುವ ಗೋವಾದಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 15 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು 5 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಬಿಜೆಪಿ ಸರ್ಕಾರ ರಚಿಸಲು ಈಗಾಗಲೇ ಕಸರತ್ತು ಆರಂಭಿಸಿದೆ.
ಮಣಿಪುರ: ನಿರೀಕ್ಷೆಯಂತೆ ಮಣಿಪುರದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಒಟ್ಟು 60 ಕ್ಷೇತ್ರಗಳಿರುವ ಮಣಿಪುರದಲ್ಲಿ ಬಿಜೆಪಿ 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಉಭಯ ಪಕ್ಷಗಳ ನಡುವೆ ಭಾರೀ ಪೈಪೋಟಿ ಮುಂದುವರೆದಿದೆ.
ಉತ್ತರಾಖಂಡ್: 70 ಕ್ಷೇತ್ರಗಳಿರುವ ಉತ್ತರಾಖಂಡ್‌ನಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್‌ನತ್ತ ಸಾಗುತ್ತಿದೆ. ಹೌದು 36 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 26 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
