ಕೊರೋನಾತಂಕ ನಡುವೆಯೂ ನಡೆದಿದ್ದ ಪಂಚರಾಜ್ಯ ಚುನಾವಣೆ| ಮತ ಎಣಿಕೆ ಆರಂಭವಾಗಿದ್ದು, ಆರಂಭಿಕ ಟ್ರೆಂಡ್‌ ಲಭಿಸಿದೆ| ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ನಡುವೆ ಭಾರೀ ಪೈಪೋಟಿ 

ನವದೆಹಲಿ(ಮೇ.02): ಕೊರೋನಾತಂಕ ನಡುವೆಯೂ ನಡೆದಿದ್ದ ಪಂಚರಾಜ್ಯ ಚುನಾವಣೆಯ ಫಲಿತಾಂಶ ಇಂದು ಹೊರೆ ಬೀಳಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕ ಟ್ರೆಂಡ್‌ ಲಭಿಸಿದೆ. ಮಧ್ಯಾಹ್ನದ ವೇಳೆಗೆ ಸೋಲು-ಗೆಲುವಿನ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಹಾಗಾದ್ರೆ ಈವರೆಗೆ ಹೊರಬಿದ್ದಿರುವ ಫಲಿತಾಂಶದಲ್ಲಿ ಯಾರು ಮುನ್ನಡೆ ಸಾಧಿಸಿದ್ದಾರೆ? ಇಲ್ಲಿದೆ ಒಂದು ವರದಿ

ಪಶ್ಚಿಮ ಬಂಗಾಳ: ಮೋದಿ VS ದೀದಿ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ನಡುವೆ ಭಾರೀ ಪೈಪೋಟಿ ಕಂಡು ಬಂದಿದೆ. ಮೋದಿ ವರ್ಸಸ್‌ ದೀದಿ ಎಂದೇ ಹೇಳಲಾಗುವ ಇಲ್ಲಿನ ಚುನಾಣೆಯಲ್ಲಿ ಟಿಎಂಸಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಉಭಯ ಪಕ್ಷಗಳ ನಡುವಿನ ಅಂತರ ತೀರಾ ಕಡಿಮೆ ಇದ್ದು, ಯಾವುದೇ ಕ್ಷಣದಲ್ಲಾದರೂ ಅಂಕಿ ಅಂಶ ಬದಲಾವಣೆಯಾಗುವ ಸಾಧ್ಯತೆ ಇದೆ. ಇಲ್ಲಿ ಟಿಎಂಸಿ 117 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 125 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿ ಒಟ್ಟು 292 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್ 147 ಆಗಿದೆ.

ಕೇರಳ ಚುನಾವಣೆ: ಎಡರಂಗಕ್ಕೆ ಕಾಂಗ್ರೆಸ್‌, ಬಿಜೆಪಿ ಸವಾಲು!: ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿಗಳು

ಕೇರಳ

ಹಾಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಪಕ್ಷ 82 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಯುಡಿಎಫ್‌ 53 ಕ್ಷೇತ್ರಗಳಲ್ಲಿ ಮುಂದಿದ್ದರೆ, ಎನ್‌ಡಿಎ 4 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಇಲ್ಲಿ ಒಟ್ಟು 140 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್ 71 ಆಗಿದೆ.

ಪುದುಚೇರಿ

ಇನ್ನು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕಾಂಗ್ರೆಸ್ 5 ಕ್ಷೇತ್ರದಲ್ಲಿ ಮುಂದಿದ್ದರೆ, ಬಿಜೆಪಿ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿ ಒಟ್ಟು 30 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್ 16 ಆಗಿದೆ.

ಪುದುಚೇರಿ ಫೈಟ್: ಕೇಂದ್ರಾಡಳಿತ ಪ್ರದೇಶ ಯಾರ ಪಾಲಾಗುತ್ತೆ? ಎಲ್ಲಾ ಸುಉದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮಿಳುನಾಡು

ತಮಿಳುನಾಡು ಚುನಾವಣೆಯೂ ಭಾರೀ ಕುತೂಹಲ ಮೂಡಿಸಿದೆ. ಆರಂಭಿಕ ಟ್ರೆಂಡ್‌ನಲ್ಲಿ ಡಿಎಂಕೆ ಭಾರೀ ಮುನ್ನಡೆ ಸಾಧಿಸಿದೆ. 112 ಕ್ಷೇತ್ರಗಳಲ್ಲಿ ಡಿಎಂಕೆ ಮುನ್ನಡೆ ಕಾಯ್ದುಕೊಂಡಿದ್ದರೆ, 79 ಕ್ಷೇತ್ರಗಳಲ್ಲಿ ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ. ಇಲ್ಲಿ ಒಟ್ಟು 234 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್ 118 ಆಗಿದೆ.

ತಮಿಳುನಾಡಿನ ಗದ್ದುಗೆ ಯಾರಿಗೆ? ಚುನಾವಣೆ ಸಂಬಂಧಿತ ಎಲ್ಲಾ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ

ಅಸ್ಸಾಂ

ಅಸ್ಸಾನಲ್ಲೂ ಕೈ ಕಮಲದ ನಡುವೆ ಪೈಪೋಟಿ ಇತ್ತು. ಸದ್ಯ ಆರಂಭಿಕ ಟ್ರೆಂಡ್‌ ಅನ್ವಯ ಬಿಜೆಪಿ 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 24ಕ್ಕೂ ಅಧಿಕ ಸ್ಥಾನದಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿ ಒಟ್ಟು 126 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್ 64 ಆಗಿದೆ.

ಅಸ್ಸಾಂನಲ್ಲಿ ಬಿಜೆಪಿ, ಕಾಂಗ್ರೆಸ್‌ ಫೈಟ್‌: ಚುನಾವಣಾ ಕಣ ಹೇಗಿತ್ತು? ತಿಳಿಯಿರಿ ಒಂದೇ ಕ್ಲಿಕ್‌ನಲ್ಲಿ

ದೇಶದ ಮುಂದಿನ ರಾಜಕೀಯ ದಿಕ್ಸೂಚಿ ಎಂದೇ ಪರಿಗಣಿತವಾಗಿರುವ ಈ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರತಿಪಕ್ಷಗಳ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಮತ ಎಣಿಕೆ ತೀವ್ರ ಕುತೂಹಲ ಕೆರಳಿಸಿದೆ. ಆದರೆ ಕೊರೋನಾ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟದ ಬಳಿಕ ಎಲ್ಲಾ ರೀತಿಯ ಸಂಭ್ರಮಾಚರಣೆ ಮೇಲೆ ಚುನಾವಣಾ ಆಯೋಗ ನಿಷೇಧ ಹೇರಿದೆ. ಅಲ್ಲದೆ ಮತ ಎಣಿಕೆ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು ಮತ್ತು ಏಜೆಂಟ್‌ಗಳಿಗೆ ಕೊರೋನಾ ನೆಗೆಟಿವ್‌ ವರದಿ ಅಥವಾ ಕೊರೋನಾ 2 ಡೋಸ್‌ ಲಸಿಕೆ ಪಡೆದ ದಾಖಲೆ ಹಾಜರಿ ಕಡ್ಡಾಯ ಮಾಡಲಾಗಿದೆ.