2026ರ ಜನವರಿ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಆಳ್ವಿಕೆ ಅಂತ್ಯಗೊಳ್ಳಲಿದೆ. ಕಾರಣ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ ಎಂದು ಖ್ಯಾತ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ. ಇದಕ್ಕೆ ಕಾರಣವನ್ನೂ ನೀಡಿದ್ದಾರೆ.
ನವದೆಹಲಿ (ಜು.27) ಮಣಿಪುರದಲ್ಲಿ ನಡೆದ ಸತತ ಹಿಂಸಾಚಾರ ಬಳಿಕ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದರೆ, ರಾಷ್ಟ್ರಪತಿ ಆಳ್ವಿಕೆಯಲ್ಲಿ ಆಡಳಿತ ನಡೆಯುತ್ತಿದೆ. ಇತ್ತೀಚೆಗಷ್ಟೇ ಮಣಿಪುರದ ರಾಷ್ಟ್ರಪತಿ ಆಳ್ವಿಕೆಯನ್ನು ವಿಸ್ತರಿಸಲಾಗಿದೆ. ಇದೀಗ ಭಾರತದ ಮತ್ತೊಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಧಿಕಾರ ಕಳೆದುಕೊಳ್ಳಲಿದ್ದಾರೆ. ಭಾರತವನ್ನೇ ಬೆಚ್ಚಿ ಬೀಳಿಸುವ ಕಾರಣಗಳು ಮಮತಾ ಬ್ಯಾನರ್ಜಿ ಅಧಿಕಾರವನ್ನು ಮೊಟಕುಗೊಳಿಸಲಿದೆ ಎಂದು ಜ್ಯೋತಿಷಿ ನುಡಿದಿದ್ದಾರೆ.
ಜನವರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಎಂದ ಜ್ಯೋತಿಷಿ
2026ರ ಜನವರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅಂದರೆ ಇನ್ನು ಕೇವಲ 5 ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆ ಎಂದಿದ್ದಾರೆ. ಇದರೊಂದಿಗೆ ಮಮತಾ ಬ್ಯಾನರ್ಜಿ ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸ್ಥಿರ ಸರ್ಕಾರ ನೀಡಿರುವ ದೀದಿಗೆ ಸಮಸ್ಯೆ ಏನು?
ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಸ್ಥಿರ ಸರ್ಕಾರ ನೀಡಿದ್ದಾರೆ. ಸತತವಾಗಿ ಅಧಿಕಾರದಲ್ಲಿದ್ದಾರೆ. ಈ ಬಾರಿಯೂ ಅಭೂತಪೂರ್ವ ಗೆಲುವಿನೊಂದಿಗೆ ಸರ್ಕಾರ ರಚಿಸಿದ್ದಾರೆ. ಆದರೆ ಜ್ಯೋತಿಷಿ ಪ್ರಶಾಂತ್ ಕಿಣಿ ರಾಷ್ಟ್ರಪತಿ ಆಳ್ವಿಕೆಗೆ ಕೆಲ ಕಾರಣ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಭಾರತ ವಿರೋಧಿ ಚಟುವಟಿಕೆ ಹೆಚ್ಚಾಗಿದೆ. ಬಾಂಗ್ಲಾದೇಶ ಸೇರಿದಂತೆ ಇತರ ದೇಶಗಳೊಂದಿಗೆ ಗಡಿ ಹಂಚಿಕೊಂಡಿರುವ ಪಶ್ಚಿಮ ಬಂಗಾಳದಲ್ಲಿ ಅಕ್ರಮವಾಗಿ ನುಸುಳುಕೋರರಿಗೆ ಆಧಾರ್ ಕಾರ್ಡ್, ಮತದಾರರ ಚೀಟಿ, ರೇಷನ್ ಕಾರ್ಡ್ ಮಾಡಿಕೊಡುವ ಹಲವು ಎಜೆನ್ಸಿಗಳು ಕಾರ್ಯನಿರ್ವಹಿಸುತ್ತಿದೆ. ಇಷ್ಟೇ ಅಲ್ಲ ಹಿಂದೂಗಳ ಮೇಲೆ ಸತತವಾಗಿ ದಾಳಿಯಾಗುತ್ತಿದೆ. ಹೀಗಾಗಿ ಈ ಪ್ರಮಖ ಕಾರಣಗಳಿಂದ ಮಮತಾ ಬ್ಯಾನರ್ಜಿ ಅಧಿಕಾರ ಕಳೆದುಕೊಂಡು ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ ಎಂದಿದ್ದಾರೆ.
ಅನುಕಂಪದ ಆಧಾರದಲ್ಲಿ ಮತ್ತೆ ಮಮತಾ ಅಧಿಕಾರಕ್ಕೆ ಎಂದ ಜನ
ಪ್ರಶಾಂತ್ ಕಿಣಿ ನುಡಿದ ಭವಿಷ್ಯಕ್ಕೆ ಹಲವರು ಪ್ರತಿಕ್ರಿಯಿಸಿದ್ದಾರೆ. ಮಮತಾ ಬ್ಯಾನರ್ಜಿ ಅಧಿಕಾರ ಮೊಟಕುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ನಡೆಸಿದರೂ 6 ತಿಂಗಳ ಬಳಿಕ ಮತ್ತೆ ಮಮತಾ ಬ್ಯಾನರ್ಜಿ ಇದೇ ಅವಕಾಶವನ್ನು ಅನುಕಂಪವಾಗಿ ಬಳಸಿಕೊಂಡು ಗೆದ್ದು ಬರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಮಮತಾ ಬ್ಯಾನರ್ಜಿ ಭಾರತೀಯ ರಾಜನೀತಿಯನ್ನು ಅರೆದು ಕುಡಿದಿದ್ದಾರೆ. ಹೀಗಾಗಿ ಪ್ರತಿ ಸಂದರ್ಭವನ್ನು ತನ್ನ ಪರವಾಗಿ ಒಲಿಸಿಕೊಳ್ಳವು ಶಕ್ತಿ ಹೊಂದಿದ್ದಾರೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಇದೇ ವೇಳೆ ಕೆಲವರು ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಕನಸು ಬೇಡ, ಮುಂದಿನ ಬಾರಿಯೂ ಮಮತಾ ಬ್ಯಾನರ್ಜಿಯೇ ಅಧಿಕಾರ ನಡೆಸಲಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ.
