ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ, ಇತರೆ ಪೂಜೆಗಳು ಹೇಗೆ ನಡೆಯುತ್ತೆ? ಪ್ರಧಾನ ಅರ್ಚಕರು ಹೇಳಿದ್ದೀಗೆ..
ಹಿಂದೂ ಸಂಪ್ರದಾಯದಂತೆ ಪ್ರಾಣ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮ ನಡೆಯುತ್ತದೆ ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಅಯೋಧ್ಯೆ (ಜನವರಿ 12, 2024): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಸುದೀರ್ಘ ಕಾಯುವಿಕೆಯ ನಂತರ, ಶ್ರೀರಾಮನು ಈಗ ತನ್ನ ಅಯೋಧ್ಯೆ ನಗರದಲ್ಲಿ ಆಸೀನನಾಗುತ್ತಾನೆ. ಭವ್ಯವಾದ ಮತ್ತು ದೈವಿಕ ರಾಮಮಂದಿರವು ಸಿದ್ಧವಾಗುತ್ತಿದೆ. ಹಿಂದೂ ಸಂಪ್ರದಾಯದಂತೆ ಜನವರಿ 22 ರಂದು ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.
ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ದೇವಾಲಯದ ಪ್ರತಿಷ್ಠಾಪನೆ ಮತ್ತು ಅದರ ಹಿಂದಿನ ಆಚರಣೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಪೂಜೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡ ಅವರು, ಪ್ರಾಣ ಪ್ರತಿಷ್ಠಾಪನಾ ಒಂದು ಸಮಗ್ರ ಆಚರಣೆಯಾಗಿದೆ, ಆದ್ದರಿಂದ ಪೂಜೆಯು ಜನವರಿ 15 - 16 ರಿಂದಲೇ ಪ್ರಾರಂಭವಾಗಲಿದೆ ಎಂದು ಹೇಳಿದರು. ಜನವರಿ 14 ರಂದು ಧರ್ನುಮಾಸ ಕೊನೆಗೊಳ್ಳುವ ಕಾರಣ ಆಚರಣೆಗಳು ಆರಂಭವಾಗಲಿದೆ ಎಂದಿದ್ದಾರೆ.
ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಇಬ್ಬರು ಶಂಕರಾಚಾರ್ಯರ ವಿರೋಧ: ಕಾರ್ಯಕ್ರಮಕ್ಕೆ ಪುರಿ, ಬದರಿ ಸ್ವಾಮೀಜಿ ಗೈರು
ಧರ್ನುಮಾಸದಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ, ಆದ್ದರಿಂದ ಅದು ಮುಗಿದ ನಂತರವೇ ರಾಮ ಲಲ್ಲಾ ಪ್ರತಿಷ್ಠಾಪಿಸಲಾಗುತ್ತದೆ ಎಂದೂ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. ಪ್ರಾಣ ಪ್ರತಿಷ್ಠಾನದ ಧಾರ್ಮಿಕ ಕಾರ್ಯಕ್ರಮವು ಜನವರಿ 15 ಮತ್ತು 16 ರಿಂದ ಪ್ರಾರಂಭವಾಗಲಿದೆ. ಪ್ರತಿಮೆಯನ್ನು 'ನಗರ ಪ್ರವಾಸ'ಕ್ಕಾಗಿ ತೆಗೆದುಕೊಳ್ಳಲಾಗುತ್ತದೆ. ಬಳಿಕ ಇತರೆ ಧಾರ್ಮಿಕ ವಿಧಿ ವಿಧಾನಗಳೂ ನಡೆಯಲಿವೆ ಎಂದೂ ಹೇಳಿದರು.
ಜನವರಿ 22 ರಂದು ಪ್ರಧಾನಮಂತ್ರಿ ಹಾಜರು
ಜನವರಿ 22 ರಂದು ಪ್ರಾಣ-ಪ್ರತಿಷ್ಠೆ ನಡೆಯಲಿದ್ದು, ಅದಕ್ಕೂ ಮುನ್ನ ಇತರೆ ಪೂಜೆ, ವಿಧಾನಗಳು ನಡೆಯಲಿವೆ ಎಂದು ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. ಈ ಎಲ್ಲ ಪ್ರಕ್ರಿಯೆಗಳು ಪ್ರಾಣ ಪ್ರತಿಷ್ಠೆಗೂ ಮುನ್ನ ಪೂರ್ಣಗೊಳ್ಳಲಿವೆ. ಮುಖ್ಯ ಸಮಾರಂಭದಲ್ಲಿ ಮುಖ್ಯ ಕಾರ್ಯಕ್ರಮ ಮಾತ್ರ ಇರುತ್ತದೆ. ಅಂದು ಪ್ರಧಾನಿ ನರೇಂದ್ರ ಮೋದಿ ಕೂಡ ಅಯೋಧ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದೂ ಆಚಾರ್ಯ ಸತ್ಯೇಂದ್ರ ದಾಸ್ ಮಾಹಿತಿ ನೀಡಿದ್ದಾರೆ.
ಅಯೋಧ್ಯೆಯಲ್ಲಿ ಕನ್ನಡ ಸೇರಿ 28 ಭಾಷೆ ಬಳಕೆ: ವಿವಿಧ ಭಾಷೆಗಳಲ್ಲಿ ಸೂಚನಾ ಫಲಕ
ಸಾರ್ವಜನಿಕ ರಜೆ ಇರುತ್ತದೆ
ಶ್ರೀರಾಮನನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪಿಸಿದ ದಿನವನ್ನು ಇಡೀ ದೇಶವೇ ಸಂಭ್ರಮಿಸುತ್ತದೆ. ಉತ್ತರ ಪ್ರದೇಶದಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೊಡ್ಡ ಘೋಷಣೆ ಮಾಡಿದ್ದು, ಜನವರಿ 22ರಂದು ಸಾರ್ವಜನಿಕ ರಜೆ ಘೋಷಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾಪನೆಯ ದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಡೀ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಿದ್ದಾರೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳು ಹಾಗೂ ಇತರ ಸಂಸ್ಥೆಗಳು ಮುಚ್ಚಲ್ಪಡುತ್ತವೆ ಎಂದೂ ಸೂಚನೆ ಹೊರಡಿಸಿದ್ದಾರೆ.