ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ!

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ| ರಾಮಲಲ್ಲಾಗೆ ಪೂಜೆ ಮಾಡಿ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್| ಟ್ವೀಟ್ ಮಾಡಿ ಶುಭ ಕೋರಿದ ಸಚಿವ ಸಿ. ಟಿ. ರವಿ

Ayodhya Construction of Ram Mandir begins

ಅಯೋಧ್ಯೆ(ಮೇ.26): ಭಾರೀ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಸುಪ್ರೀಂ ಕೋರ್ಟ್ ಆದೇಶದನ್ವಯ ಕೊನೆಗೂ ಆರಂಭಿಸಲಾಗಿದೆ. ಈ ಹಿನ್ನೆಲೆ ಮಂಗಳವಾರ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಮಂದಿರದಲ್ಲಿ ರಾಮಲಲ್ಲಾಗೆ ಪೂಜೆ ನೆರವೇರಿಸಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಿಸುತ್ತಿರುವುದಾಗಿ ಘೋಷಿಸಿದ್ದಾರೆ.

ರಾಮ ಮಂದಿರ ನಿರ್ಮಾಣ ಕಾರ್ಯ ಆಂಭಿಸುವುದಕ್ಕೂ ಮೊದಲು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಗಿದೆ. ಈ ಮೂಲಕ ರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದೆ.

ಕೂಡಾ ಈ ಸಂಬಂಧ ಟ್ವೀಟ್ ಮಾಡಿ ಶೂಭ ಕೋರಿದ್ದಾರೆ.

ಅಯೋಧ್ಯೆಯ ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. 2019 ನವೆಂಬರ್ 9ರಂದು ಪಂಚ ಸಂವಿಧಾನಿಕ ಪೀಠವು, ವಿವಾದಿತ ಭೂಮಿ ರಾಮಲಲ್ಲಾಗೆ ಸೇರಿದ್ದು ಎಂದು ಆದೇಶ ಹೊರಡಿಸಿತ್ತು.

ಅಲ್ಲದೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊಣೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ವಹಿಸಿಕೊಡಲಾಗಿತ್ತು. ಇನ್ನೊಂದೆಡೆ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಸುನ್ನಿ ವಕ್ಫ್‌ ಮಂಡಳಿಗೆ ಐದು ಎಕರೆ ಜಮೀನು ನೀಡಿದೆ.

ಇನ್ನು ಈಗಾಗಲೇ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಸಮತಟ್ಟುಗೊಳಿಸುವ ಕಾರ್ಯದ ವೇಳೆ ಪುರಾತನ ಮೂರ್ತಿ, ಸ್ತಂಭ ಇತ್ಯಾದಿಗಳು ಪತ್ತೆಯಾಗಿದ್ದವೆಂಬುವುದು ಉಲ್ಲೇಖನೀಯ.

Latest Videos
Follow Us:
Download App:
  • android
  • ios