ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಬರದೇ ಇರುವಂತೆ ಅಡ್ವಾಣಿ, ಎಂಎಂ ಜೋಶಿಗೆ ಮನವಿ
ಅಯೋಧ್ಯೆಯ ರಾಮಮಂದಿರ ಹೋರಾಟದಲ್ಲಿ ಬಿಜೆಪಿಯ ಭೀಷ್ಮ, ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರಿಗೆ ವಯಸ್ಸಿನ ಕಾರಣ ನೀಡಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರುವಂತೆ ಮನವಿ ಮಾಡಲಾಗಿದೆ.
ನವದೆಹಲಿ: ಅಯೋಧ್ಯೆಯ ರಾಮಮಂದಿರ ಹೋರಾಟದಲ್ಲಿ ಬಿಜೆಪಿಯ ಭೀಷ್ಮ, ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ಹೋರಾಟವನ್ನು ಮರೆಯುವಂತಿಲ್ಲ, ಬಿಜೆಪಿಯ ಸ್ಥಾಪಕ ಸದಸ್ಯರಾದ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ರಾಮಮಂದಿರ ಸಂಘರ್ಷದಲ್ಲಿ ಸಕ್ರಿಯರಾಗಿ ಭಾಗಿಯಾದವರು ಅದರಲ್ಲೂ ಬಿಜೆಪಿಯ ಭೀಷ್ಮರೆನಿಸಿದ ಎಲ್‌ಕೆ ಅಡ್ವಾಣಿಯವರು 1990ರಲ್ಲಿ ಗುಜರಾತ್‌ನ ಸೋಮನಾಥದಿಂದ ಅಯೋಧ್ಯೆಯವರೆಗೆ ರಾಮ ರಥ ಯಾತ್ರೆಯನ್ನು ಕೈಗೊಂಡು ಬಿಜೆಪಿ ಮಂದಿರ ನಿರ್ಮಾಣದ ಉದ್ದೇಶವನ್ನು ಮತ್ತಷ್ಟು ಧೃಡಗೊಳಿಸಿದವರು. ಅಂತಹ ಮಹಾನ್ ನಾಯಕರಿಗೆ ಈಗ ವಯಸ್ಸಿನ ಕಾರಣ ನೀಡಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರುವಂತೆ ಮನವಿ ಮಾಡಲಾಗಿದೆ.
ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬಿಜೆಪಿಯ ಹಿರಿಯ ಮುತ್ಸದ್ಧಿ ಸಂಸ್ಥಾಪಕ ಸದಸ್ಯರಾದ ಲಾಲ್‌ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿಯವರಿಗೆ ತಮ್ಮ ವಯಸ್ಸಿನ ಕಾರಣಕ್ಕೆ ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರುವಂತೆ ಮನವಿ ಮಾಡಲಾಗಿದೆ. ಅದಕ್ಕೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಚಂಪತ್ ರಾಯ್ ಹೇಳಿದ್ದಾರೆ.
ಅಯೋಧ್ಯೆ ಮಸೀದಿಗೆ ಶಿಲಾನ್ಯಾಸ ಮಾಡಲಿದ್ದಾರೆ ಮೆಕ್ಕಾದ ಇಮಾಮ್, ಇಲ್ಲಿರಲಿದೆ ವಿಶ್ವದ ಅತಿದೊಡ್ಡ ಕುರಾನ್
ಇಬ್ಬರೂ ಕುಟುಂಬದ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಸಮಾರಂಭಕ್ಕೆ ಬರದಂತೆ ವಿನಂತಿಸಲಾಯಿತು ಅದನ್ನು ಇಬ್ಬರೂ ಒಪ್ಪಿಕೊಂಡರು ಎಂದು ರಾಯ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಸ್ತುತ ಅಡ್ವಾಣಿಯವರಿಗೆ 96 ವರ್ಷಗಳಾಗಿದ್ದು, 1990ರಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ರಾಮರಥಯಾತ್ರೆ ಕೈಗೊಂಡಿದ್ದರು, ಇದಾದ ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿ 2ನೇ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ನಂತರ 1996ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು.
ಅಯೋಧ್ಯೆ ದೇಗುಲದ ಬಗ್ಗೆ BRS ಶಾಸಕಿ ಕವಿತಾ ಪೋಸ್ಟ್: ಸೋತ ಮೇಲೆ ಹಿಂದೂ ದೇವರ ನೆನಪಾಯ್ತ ಅಕ್ಕ ಎಂದ ನೆಟ್ಟಿಗರು
ಮತ್ತೊಬ್ಬ ಹಿರಿಯ ನಾಯಕ ಮುರುಳಿ ಮನೋಹರ್ ಜೋಷಿಯವರಿಗೂ ಮುಂದಿನ ತಿಂಗಳು 90 ವರ್ಷ ಪೂರೈಸಲಿದೆ. ಇವರು ಕೂಡ ಬಿಜೆಪಿ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರು. ಅಯೋಧ್ಯೆ ರಾಮಮಂದಿರವೂ ಜನವರಿ 22ರಂದು ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದರ ಜೊತೆಗೆಶಮಕರಾಚಾರ್ಯರ ದರ್ಶಣ ಶಾಲೆಯ 150ಕ್ಕೂ ಹೆಚ್ಚು ಸಂತರು ಸನ್ಯಾಸಿಗಳು ಕೂಡ ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೌದ್ಧ ಧರ್ಮದ ಆಧ್ಯಾತ್ಮಿಕ ನಾಯಕ ದಲಾಯಿಲಾಮಾ, ಕೇರಳದ ಮಾತಾ ಅಮೃತನಂದಮಯಿ, ಯೋಗ ಗುರು ಬಾಬಾ ರಾಮ್‌ದೇವ್, ನಟ ರಜನಿಕಾಂತ್, ಅಮಿತಾಭ್ ಬಚ್ಚನ್, ಮಧುರಿ ದೀಕ್ಷಿತ್, ಅರುಣ್ ಗೋವಿಲ್ ಅವರನ್ನು ಕೂಡ ಈ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಈ ಬೃಹತ್ ಸಮಾರಂಭಕ್ಕೆ ಜನವರಿ 15ಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಜನವರಿ 16 ರಿಂದ ಒಂದೊಂದೇ ಕಾರ್ಯಕ್ರಮಗಳು ಆರಂಭವಾಗಲಿವೆ. ಒಟ್ಟು 4 ಸಾವಿರ ಸಂತರು ಹಾಗೂ 2200 ಅತಿಥಿಗಳನ್ನು ಆಹ್ವಾನಿಸಲಾಗಿದೆ. ಇದರ ಜೊತೆಗೆ ಕಾಶಿ ವಿಶ್ವನಾಥ, ವೈಷ್ಣೋದೇವಿ ಸೇರಿದಂತೆ ದೇಶದ ಪ್ರಮುಖ ದೇವಾಲಯಗಳ ಮುಖ್ಯಸ್ಥರನ್ನು ಕೂಡ ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು ಚಂಪತ್ ರಾಯ್ ಹೇಳಿದರು.