1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕ ಎಲ್‌.ಕೆ.ಅಡ್ವಾಣಿ ಸೇರಿದಂತೆ 32 ಜನರನ್ನು ಖುಲಾಸೆಗೊಳಿಸಿದ ಸಿಬಿಐ ಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿದೆ.

ಅಯೋಧ್ಯಾ: 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕ ಎಲ್‌.ಕೆ.ಅಡ್ವಾಣಿ ಸೇರಿದಂತೆ 32 ಜನರನ್ನು ಖುಲಾಸೆಗೊಳಿಸಿದ ಸಿಬಿಐ ಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿದೆ. ಖುಲಾಸೆಯನ್ನು ಈ ಹಿಂದೆ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತಾದರೂ, ಅರ್ಜಿದಾರರಿಗೆ ಪ್ರಕರಣದಲ್ಲಿ ಯಾವುದೇ ನಂಟಿಲ್ಲ ಎಂದು ಹೇಳಿ ಕೋರ್ಟ್ ಪುನರ್‌ಪರಿಶೀಲನಾ ಅರ್ಜಿ ವಜಾ ಮಾಡಿತ್ತು. ಅಯೋಧ್ಯೆ ಪ್ರಕರಣದ ತೀರ್ಪಿನ ವೇಳೆ ಮಸೀದಿ ಧ್ವಂಸವು ಒಂದು ಕ್ರಿಮಿನಲ್‌ ಅಪರಾಧ ಎಂದು ಸ್ವತಃ ನ್ಯಾಯಾಲಯವೇ ಹೇಳಿತ್ತು. ಹೀಗಾಗಿ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿದೆ ಎಂದು ಮಂಡಳಿ ಹೇಳಿದೆ.

LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

ಬಾಬ್ರಿ ಮಸೀದಿ ಧ್ವಂಸದ ವೇಳೆ ಸಿಎಂ ಆಗಿದ್ದ, ಹಿಂದುತ್ವದ ಪ್ರಖರ ಪ್ರತಿಪಾದಕ ಸಿಂಗ್‌!

ಅಯೋಧ್ಯೆ ಮಸೀದಿ ಶಂಕುಸ್ಥಾಪನೆಗೆ ಡೇಟ್ ಫಿಕ್ಸ್, ಇದು ಬಾಬ್ರಿ ಮಸೀದಿಗಿಂತಲೂ ದೊಡ್ಡದು